
ಶನಿವಾರ ನಡೆದ ಟಿ20 ವಿಶ್ವಕಪ್ (T20 World Cup 2024) ಸೂಪರ್-8 ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 196 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡ ಆರಂಭದಲ್ಲಿ ದಿಟ್ಟ ಹೋರಾಟವನ್ನೇ ಪ್ರದರ್ಶಿಸಿತ್ತು.
ಆದರೆ ಆ ಬಳಿಕ ಸಾಂಘಿಕ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಬೌಲರ್ಗಳು ಬಾಂಗ್ಲಾದೇಶ್ ರನ್ ಗತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರು. ಇದರ ನಡುವೆ ನಡೆದ ಘಟನೆಯೊಂದು ಇಡೀ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿತ್ತು.
ಬಾಂಗ್ಲಾದೇಶ್ ಇನಿಂಗ್ಸ್ನ 17ನೇ ಓವರ್ನಲ್ಲಿ ಅರ್ಷದೀಪ್ ಸಿಂಗ್ ಎಸೆತದಲ್ಲಿ ರಿಶಾದ್ ಹೊಸೈನ್ ಡೀಪ್ ಮಿಡ್-ವಿಕೆಟ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ್ದರು. ಈ ವೇಳೆ ಬೌಂಡರಿಯಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಕೊಹ್ಲಿ ಸಮಯ ವ್ಯರ್ಥ ಮಾಡದೆ ಚೆಂಡನ್ನು ಹೆರಕಲು ಓಡಿದರು.
ಆದರೆ ಚೆಂಡು ಪಟಾಕಿ ಸಿಡಿಸುವ ವೇದಿಕೆಯ ಕೆಳಗೆ ನುಗ್ಗಿಯಾಗಿತ್ತು. ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ವಿರಾಟ್ ಕೊಹ್ಲಿ ಮಕ್ಕಳಂತೆ ವೇದಿಕೆ ಕೆಳಗೆ ನುಗ್ಗಿ ಚೆಂಡನ್ನು ತೆಗೆದರು.
Virat Kohli searching for the ball 😂❤pic.twitter.com/tiSXqd7k0e
— Ram Garapati (@srk0804) June 22, 2024
ಇದೀಗ ವಿರಾಟ್ ಕೊಹ್ಲಿಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನಾನಾ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ಇದೇನು ಗಲ್ಲಿ ಕ್ರಿಕೆಟಾ? ಎಂದು ಅನೇಕರು ಪ್ರಶ್ನಿಸಿದ್ದಾರೆ. ಇನ್ನು ಕ್ರಿಕೆಟ್ ಅಂಗಳದ ಕಿಂಗ್ ಆಗಿ ಮೆರೆಯುತ್ತಿರುವ ವಿರಾಟ್ ಕೊಹ್ಲಿ ಈ ಸರಳತೆಯನ್ನು ಅನೇಕರು ಪ್ರಶಂಸಿದ್ದಾರೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು.
ಇದನ್ನೂ ಓದಿ: Pat Cummins: 2 ಹ್ಯಾಟ್ರಿಕ್ಸ್: ವಿಶ್ವ ದಾಖಲೆ ನಿರ್ಮಿಸಿದ ಕಮಿನ್ಸ್
197 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಪರ ನಾಯಕ ನಜ್ಮುಲ್ ಹೊಸೈನ್ ಶಾಂಟೋ 32 ಎಸೆತಗಳಲ್ಲಿ 40 ರನ್ ಬಾರಿಸಿದ್ದರು. ಇದಾಗ್ಯೂ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಬಾಂಗ್ಲಾದೇಶ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 146 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 50 ರನ್ಗಳ ಭರ್ಜರಿ ಜಯ ಸಾಧಿಸಿದೆ.