AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಪಾಕ್ ವಿರುದ್ದ ಕಿಂಗ್ ಕೊಹ್ಲಿ ಕಣಕ್ಕಿಳಿದರೆ ಅದುವೇ ಹೊಸ ದಾಖಲೆ..!

India vs Pakistan: ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಪಾಕಿಸ್ತಾನ್ ವಿರುದ್ದದ ಪಂದ್ಯದ ಮೂಲಕ ಹಳೆಯ ಖದರ್ ತೋರಿಸುವ ನಿರೀಕ್ಷೆಯಲ್ಲಿದ್ದಾರೆ.

Virat Kohli: ಪಾಕ್ ವಿರುದ್ದ ಕಿಂಗ್ ಕೊಹ್ಲಿ ಕಣಕ್ಕಿಳಿದರೆ ಅದುವೇ ಹೊಸ ದಾಖಲೆ..!
Virat Kohli
TV9 Web
| Updated By: ಝಾಹಿರ್ ಯೂಸುಫ್|

Updated on:Aug 27, 2022 | 11:55 AM

Share

ಭಾರತ-ಪಾಕಿಸ್ತಾನ್ (India vs Pakistan) ನಡುವಣ ಮುಖಾಮುಖಿಗೆ ಕೌಂಟ್ ಡೌಣ್ ಶುರುವಾಗಿದೆ. ಆಗಸ್ಟ್ 28 ರಂದು ಯುಎಇನ ದುಬೈ ಇಂಟರ್​ನ್ಯಾಷನಲ್ ಮೈದಾನದಲ್ಲಿ ನಡೆಯಲಿರುವ ಏಷ್ಯಾಕಪ್​ ಟಿ20 ಪಂದ್ಯದಲ್ಲಿ ಮತ್ತೊಮ್ಮೆ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗುತ್ತಿದ್ದಾರೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಮೂಲಕ ವಿರಾಟ್ ಕೊಹ್ಲಿ (Virat Kohli) ಮತ್ತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಿಂಗ್ ಕೊಹ್ಲಿ ಇಂಗ್ಲೆಂಡ್ ವಿರುದ್ದದ ಸರಣಿಯ ಬಳಿಕ ಭಾರತ ತಂಡದಿಂದ ಹೊರಗುಳಿದಿದ್ದರು. ಇದೀಗ ಏಷ್ಯಾಕಪ್​ ಮೂಲಕ ತಂಡಕ್ಕೆ ಮರಳುತ್ತಿರುವುದು ವಿಶೇಷ. ಅದು ಕೂಡ ವಿಶೇಷ ಪಂದ್ಯದ ಮೂಲಕ ಎಂಬುದೇ ಇಲ್ಲಿ ಸ್ಪೆಷಲ್.

ಆಗಸ್ಟ್ 28 ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಶತಕ ಪೂರೈಸಲಿದ್ದಾರೆ. ಅದು ಕೂಡ ಮೈದಾನಕ್ಕಿಳಿಯುವ ಮೂಲಕ. ಅಂದರೆ ಇದು ಅವರ 100ನೇ ಟಿ20 ಅಂತಾರಾಷ್ಟ್ರೀಯ ಪಂದ್ಯವಾಗಿದೆ. ಪಾಕಿಸ್ತಾನ್ ವಿರುದ್ದ ಕಣಕ್ಕಿಳಿದರೆ ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ.

ಟೀಮ್ ಇಂಡಿಯಾ ಪರ ಇದುವರೆಗೆ ಏಕೈಕ ಆಟಗಾರ ಮಾತ್ರ 100 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ 132 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಈ ವಿಶೇಷ ಸಾಧನೆ ಮಾಡಿದ್ದಾರೆ. ಇದೀಗ ಏಷ್ಯಾಕಪ್​ನಲ್ಲಿ ಭಾರತ ಆಡಲಿರುವ ತನ್ನ ಮೊದಲ ಪಂದ್ಯದ ಮೂಲಕ ನೂರು ಟಿ20 ಪಂದ್ಯಗಳನ್ನು ಪೂರೈಸುವ ಅವಕಾಶ ಕಿಂಗ್ ಕೊಹ್ಲಿ ಮುಂದಿದೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ವಿಶೇಷ ದಾಖಲೆ:

ಪಾಕ್ ವಿರುದ್ದ ಕಣಕ್ಕಿಳಿಯುವುದರೊಂದಿಗೆ ವಿರಾಟ್ ಕೊಹ್ಲಿ ಮೂರು ಸ್ವರೂಪದಲ್ಲೂ 100 ಪಂದ್ಯವಾಡಿದ ಭಾರತದ ಏಕೈಕ ಕ್ರಿಕೆಟಿಗ ಎಂಬ ದಾಖಲೆ ನಿರ್ಮಿಸಲಿದ್ದಾರೆ. ಅಂದರೆ ಟೀಮ್ ಇಂಡಿಯಾ ಪರ ಯಾವುದೇ ಆಟಗಾರ 100 ಟೆಸ್ಟ್, 100 ಏಕದಿನ ಮತ್ತು 100 ಟಿ20 ಪಂದ್ಯವಾಡಿಲ್ಲ. ಇದೀಗ ವಿಶೇಷ ದಾಖಲೆ ಬರೆಯುವ ಮೂಲಕ ಕಿಂಗ್ ಕೊಹ್ಲಿ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ.

ಟಿ20ಯಲ್ಲಿ ಕೊಹ್ಲಿ ಕಿಂಗ್:

33 ವರ್ಷದ ವಿರಾಟ್ ಕೊಹ್ಲಿ 99 ಟಿ20 ಪಂದ್ಯಗಳಲ್ಲಿ 91 ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಈ ವೇಳೆ 50 ಸರಾಸರಿಯಲ್ಲಿ 3308 ರನ್ ಗಳಿಸಿದ್ದಾರೆ. ಈ ವೇಳೆ 30 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ವಿಶ್ವದ ಮೂರನೇ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ.

ಇನ್ನು ಒಟ್ಟಾರೆ T20 ವೃತ್ತಿಜೀವನದ ಬಗ್ಗೆ ಹೇಳುವುದಾದರೆ, ಕಿಂಗ್ ಕೊಹ್ಲಿ ಇದುವರೆಗೆ 344 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 327 ಇನ್ನಿಂಗ್ಸ್‌ಗಳಲ್ಲಿ 40 ರ ಸರಾಸರಿಯಲ್ಲಿ ಒಟ್ಟು 10626 ರನ್ ಗಳಿಸಿದ್ದಾರೆ. ಈ ಭರ್ಜರಿ ಇನಿಂಗ್ಸ್​​ಗಳ ವೇಳೆ ಕೊಹ್ಲಿ ಬ್ಯಾಟ್​ನಿಂದ 5 ಶತಕ ಮತ್ತು 78 ಅರ್ಧ ಶತಕಗಳು ಮೂಡಿಬಂದಿವೆ.

ಸದ್ಯ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಪಾಕಿಸ್ತಾನ್ ವಿರುದ್ದದ ಪಂದ್ಯದ ಮೂಲಕ ಹಳೆಯ ಖದರ್ ತೋರಿಸುವ ನಿರೀಕ್ಷೆಯಲ್ಲಿದ್ದಾರೆ. ಅದರಲ್ಲೂ ವಿಶೇಷ ಶತಕದ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ಶತಕ ಮೂಡಿಬರಲಿದೆಯಾ ಕಾದು ನೋಡಬೇಕಿದೆ.

ಏಷ್ಯಾಕಪ್​ಗಾಗಿ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಚಹರ್.

Published On - 11:54 am, Sat, 27 August 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ