CSK vs RCB, IPL 2025: ಸಿಎಸ್‌ಕೆ ವಿರುದ್ಧ ಇತಿಹಾಸ ನಿರ್ಮಿಸಲು ಸಜ್ಜಾದ ವಿರಾಟ್ ಕೊಹ್ಲಿ: ಏನಿದು ದಾಖಲೆ?
Virat Kohli Record vs CSK: ಆರ್‌ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿದ್ದಾರೆ. 1053 ರನ್‌ಗಳೊಂದಿಗೆ, ವಿರಾಟ್ ಐಪಿಎಲ್‌ನಲ್ಲಿ ಸಿಎಸ್‌ಕೆ ವಿರುದ್ಧ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ. ಈವರೆಗೆ ಸಿಎಸ್ಕೆ ಅವರ ವಿರುದ್ಧ 32 ಬಾರಿ ಬ್ಯಾಟಿಂಗ್ ಮಾಡಿದ್ದಾರೆ

ಬೆಂಗಳೂರು (ಮಾ. 28): ಐಪಿಎಲ್ 2025 ರ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ (CSK vs RCB) ತಂಡವನ್ನು ಎದುರಿಸಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಎಂ ಚಿದಂಬರಂ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಮೈದಾನ ಸಿಎಸ್ಕೆಗೆ ತಂಡದ ತವರು ಮೈದಾನವೂ ಆಗಿದೆ. ಹೀಗಿರುವಾಗ, ಆರ್‌ಸಿಬಿ ತಂಡವು ಯಾವರೀತಿ ಪ್ರದರ್ಶನ ನೀಡುತ್ತೆ ಎಂಬುದು ನೋಡಬೇಕಿದೆ. ಮೊದಲ ಪಂದ್ಯದಲ್ಲಿ ಆರ್‌ಸಿಬಿ ತಂಡ ಕೆಕೆಆರ್ ವಿರುದ್ಧ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿತ್ತು. ಅತ್ತ ರುತುರಾಜ್ ಪಡೆ ಕೂಡ ಮುಂಬೈ ಇಂಡಿಯನ್ಸ್ಗೆ ಸೋಲುಣಿಸಿತ್ತು. ಹೀಗಾಗಿ ಉಭಯ ತಂಡಗಳ ನಡುವಣ ಇಂದಿನ ಮ್ಯಾಚ್ ಹೈವೋಲ್ಟೇಜ್ನಿಂದ ಕೂಡಿರಲಿದೆ.
ಇದರ ಮಧ್ಯೆ ಆರ್‌ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿದ್ದಾರೆ. 1053 ರನ್‌ಗಳೊಂದಿಗೆ, ವಿರಾಟ್ ಐಪಿಎಲ್‌ನಲ್ಲಿ ಸಿಎಸ್‌ಕೆ ವಿರುದ್ಧ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ. ಈವರೆಗೆ ಸಿಎಸ್ಕೆ ಅವರ ವಿರುದ್ಧ 32 ಬಾರಿ ಬ್ಯಾಟಿಂಗ್ ಮಾಡಿದ್ದಾರೆ ಮತ್ತು 37.60 ಸರಾಸರಿಯನ್ನು ಹೊಂದಿದ್ದಾರೆ. ಇದರಲ್ಲಿ 9 ಅರ್ಧಶತಕಗಳಿವೆ. ಐಪಿಎಲ್‌ನಲ್ಲಿ ಎಲ್ಲೋ ಸೇನೆಯ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗಲು ಕೊಹ್ಲಿಗೆ ಕೇವಲ 5 ರನ್‌ಗಳ ಅಗತ್ಯವಿದೆ.
1057 ರನ್‌ಗಳೊಂದಿಗೆ, ಶಿಖರ್ ಧವನ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಮಾಜಿ ಆರಂಭಿಕ ಆಟಗಾರ 44.04 ಸರಾಸರಿಯಲ್ಲಿ ಒಂದು ಶತಕ ಮತ್ತು 8 ಅರ್ಧಶತಕಗಳನ್ನು ಗಳಿಸಿದ್ದಾರೆ. ರೋಹಿತ್ ಶರ್ಮಾ 896 ರನ್ ಗಳಿಸಿದ್ದು ಮೂರನೇ ಸ್ಥಾನದಲ್ಲಿದ್ದಾರೆ. ಅವರು ಸಿಎಸ್ಕೆ ವಿರುದ್ಧ ಒಂದು ಶತಕ ಮತ್ತು 7 ಅರ್ಧಶತಕಗಳನ್ನು ಗಳಿಸಿದ್ದಾರೆ. ರೋಹಿತ್ ನೇತೃತ್ವದ ಮುಂಬೈ ಇಂಡಿಯನ್ಸ್ (MI) 3 ಐಪಿಎಲ್ ಫೈನಲ್‌ಗಳಲ್ಲಿ ಸಿಎಸ್ಕೆ ಅನ್ನು ಸೋಲಿಸಿತು.
Rishabh Pant: ಮೊದಲ ಗೆಲುವು: ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ರಿಷಭ್ ಪಂತ್ ಏನಂದ್ರು ನೋಡಿ
ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ:
ವಿರಾಟ್ ಕೊಹ್ಲಿ ಐಪಿಎಲ್ 2025 ರ ಸೀಸನ್ ಅನ್ನು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಅರ್ಧಶತಕದೊಂದಿಗೆ ಆರಂಭಿಸಿದರು. ಆರ್‌ಸಿಬಿ 175 ರನ್‌ಗಳ ಗುರಿಯನ್ನು ಸುಲಭವಾಗಿ ಬೆನ್ನಟ್ಟುವ ಸಂದರ್ಭ ವಿರಾಟ್ ಕೊಹ್ಲಿ 36 ಎಸೆತಗಳಲ್ಲಿ 59 ರನ್ ಗಳಿಸಿ ಅಜೇಯರಾಗುಳಿದರು. ಅವರು ತಮ್ಮ ಬ್ಯಾಟಿಂಗ್‌ನಲ್ಲಿ 3 ಸಿಕ್ಸರ್‌ಗಳು ಮತ್ತು 4 ಬೌಂಡರಿಗಳನ್ನು ಬಾರಿಸಿದರು. ವಿರಾಟ್ ಮತ್ತು ಫಿಲ್ ಸಾಲ್ಟ್ ಆರ್‌ಸಿಬಿಗೆ ಸ್ಫೋಟಕ ಆರಂಭವನ್ನು ನೀಡಿದರು. ಕೇವಲ 8.2 ಓವರ್‌ಗಳಲ್ಲಿ ಮೊದಲ ವಿಕೆಟ್‌ಗೆ 95 ರನ್‌ಗಳನ್ನು ಸೇರಿಸಿದರು.
ಸಿಎಸ್‌ಕೆ ಮತ್ತು ಆರ್‌ಸಿಬಿ ತಂಡಗಳು ಕೊನೆಯ ಬಾರಿಗೆ ಐಪಿಎಲ್ 2024 ರಲ್ಲಿ ಮೇ 18 ರಂದು ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ಅದ್ಭುತ ಆಟ ಪ್ರದರ್ಶಿಸಿ 27 ರನ್‌ಗಳಿಂದ ಜಯ ಸಾಧಿಸಿತು. ಐಪಿಎಲ್ 2024 ರಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವೆ ಎರಡು ಪಂದ್ಯಗಳು ನಡೆದವು, ಇದರಲ್ಲಿ ಎರಡೂ ತಂಡಗಳು ತಲಾ ಒಂದು ಪಂದ್ಯವನ್ನು ಗೆದ್ದವು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ