AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ‘ಕಿಂಗ್ ಈಸ್ ಬ್ಯಾಕ್’ ಸೂಚನೆ ನೀಡಿದ ವಿರಾಟ್ ಕೊಹ್ಲಿ

IPL 2022 RCB Squad: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್

Virat Kohli: 'ಕಿಂಗ್ ಈಸ್ ಬ್ಯಾಕ್' ಸೂಚನೆ ನೀಡಿದ ವಿರಾಟ್ ಕೊಹ್ಲಿ
Virat Kohli
TV9 Web
| Updated By: ಝಾಹಿರ್ ಯೂಸುಫ್|

Updated on: Mar 23, 2022 | 7:46 PM

Share

ಐಪಿಎಲ್​ ಸೀಸನ್ 15 ಗೆ (IPL 2022) ಕೌಂಟ್ ಡೌನ್ ಶುರುವಾಗಿದೆ. ಇದರ ಬೆನ್ನಲ್ಲೇ ಆರ್​ಸಿಬಿ (RCB) ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಅದು ಅಂತಿಂಥ ಫೋಟೋವಲ್ಲ ಎಂಬುದೇ ವಿಶೇಷ. ಏಕೆಂದರೆ ಕಿಂಗ್ ಕೊಹ್ಲಿ ಶತಕ ಬಾರಿಸಿ ಎರಡು ವರ್ಷಗಳೇ ಕಳೆದಿವೆ. ಹೀಗಾಗಿ ಅಭಿಮಾನಿಗಳು ಕೂಡ ಕೊಹ್ಲಿ ಬ್ಯಾಟ್​ನಿಂದ ಸೆಂಚುರಿಯನ್ನು ಎದುರು ನೋಡುತ್ತಿದ್ದಾರೆ. ಈ ಕುತೂಹಲಕ್ಕೆ ಕಿಚ್ಚು ಹಚ್ಚುವಂತೆ ಇದೀಗ ವಿರಾಟ್ ಕೊಹ್ಲಿ ಸೆಂಚುರಿ ಸಿಡಿಸಿ ಬ್ಯಾಟ್ ಮೇಲೆಕ್ಕೆತ್ತಿದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ವಿಶೇಷ ಎಂದರೆ ಈ ಫೋಟೋಗೆ ಇನ್ನು ತುಂಬಾ ದಿನ ಕಾಯಬೇಕಿಲ್ಲ ಎಂಬಾರ್ಥದಲ್ಲಿ ಶೀರ್ಷಿಕೆ ನೀಡಿದ್ದಾರೆ. ಈ ಮೂಲಕ ಈ ಸಲ ಐಪಿಎಲ್​ನಲ್ಲಿ ಅಬ್ಬರಿಸುವ ಸೂಚನೆ ನೀಡಿದ್ದಾರೆ ಕಿಂಗ್ ಕೊಹ್ಲಿ.

ಇದೀಗ ಈ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ಐಪಿಎಲ್​ನಲ್ಲಿ 5 ಶತಕ ಬಾರಿಸುವ ಮೂಲಕ ದಾಖಲೆ ಬರೆದಿರುವ ಕೊಹ್ಲಿ ಈ ಬಾರಿ ಶತಕ ಸಿಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಒಂದು ವೇಳೆ ಈ ಬಾರಿ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ಶತಕ ಮೂಡಿಬಂದರೆ ಐಪಿಎಲ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಆಟಗಾರ ಎಂಬ ದಾಖಲೆಯನ್ನು ತಮ್ಮಲ್ಲೇ ಉಳಿಸಿಕೊಳ್ಳಲಿದ್ದಾರೆ. ಅಲ್ಲದೆ ಕ್ರಿಸ್ ಗೇಲ್ ಹೆಸರಿನಲ್ಲಿರುವ 6 ಶತಕಗಳ ದಾಖಲೆಯನ್ನು ಕೊಹ್ಲಿ ಸರಿಗಟ್ಟಲಿದ್ದಾರೆ.

ಇತ್ತ ದಾಖಲೆಯ ಶತಕವನ್ನು ಎದುರು ನೋಡುತ್ತಿರುವ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸುವಂತೆ ಇದೀಗ ವಿರಾಟ್ ಕೊಹ್ಲಿ ಆರ್​ಸಿಬಿ ಪರ ಈ ಹಿಂದೆ ಶತಕ ಸಿಡಿಸಿದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಐಪಿಎಲ್​ 15 ಮೂಲಕ ಹಳೆಯ ಕೊಹ್ಲಿ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ. ಏಕೆಂದರೆ ಈ ಹಿಂದೆ ಕೊಹ್ಲಿ ಆರ್​ಸಿಬಿ ತಂಡದ ನಾಯಕರಾಗಿದ್ದರು. ಆದರೆ ಕಳೆದ ಸೀಸನ್​ ಬಳಿಕ ನಾಯಕತ್ವದ ಒತ್ತಡದ ಕಾರಣ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿದಿದ್ದರು. ಅದರಂತೆ ಈ ಬಾರಿ ವಿರಾಟ್ ಕೊಹ್ಲಿ ಕೇವಲ ಆಟಗಾರನಾಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಕೊಹ್ಲಿ ತಮ್ಮ ಹಳೆಯ ಫಾರ್ಮ್​ ಪ್ರದರ್ಶಿಸುವ ವಿಶ್ವಾಸದಲ್ಲಿದ್ದಾರೆ.

33 ವರ್ಷದ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಎಂಬುದರಲ್ಲಿ ಅನುಮಾನವೇ ಇಲ್ಲ. ಏಕೆಂದರೆ ಈ ಪ್ರತಿಷ್ಠಿತ ಟಿ20 ಲೀಗ್‌ನಲ್ಲಿ 207 ಪಂದ್ಯಗಳನ್ನು ಆಡಿರುವ ಕೊಹ್ಲಿ 5 ಶತಕ ಮತ್ತು 42 ಅರ್ಧ ಶತಕಗಳ ನೆರವಿನಿಂದ ಒಟ್ಟು 6283 ರನ್ ಗಳಿಸಿದ್ದಾರೆ. ಇದು ಐಪಿಎಲ್ ಇತಿಹಾಸದ ದಾಖಲೆಯಾಗಿದೆ. ಇಂತಹ ಹಲವು ದಾಖಲೆಗಳನ್ನು ಬರೆದಿರುವ ಕಿಂಗ್ ಕೊಹ್ಲಿ ಈ ಬಾರಿ ಅಬ್ಬರಿಸಲಿದ್ದಾರಾ ಕಾದು ನೋಡಬೇಕಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಲುವ್ನಿತ್ ಸಿಸೋಡಿಯಾ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು