ಐಪಿಎಲ್ ಸೀಸನ್ 15 ಗೆ (IPL 2022) ಕೌಂಟ್ ಡೌನ್ ಶುರುವಾಗಿದೆ. ಇದರ ಬೆನ್ನಲ್ಲೇ ಆರ್ಸಿಬಿ (RCB) ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಅದು ಅಂತಿಂಥ ಫೋಟೋವಲ್ಲ ಎಂಬುದೇ ವಿಶೇಷ. ಏಕೆಂದರೆ ಕಿಂಗ್ ಕೊಹ್ಲಿ ಶತಕ ಬಾರಿಸಿ ಎರಡು ವರ್ಷಗಳೇ ಕಳೆದಿವೆ. ಹೀಗಾಗಿ ಅಭಿಮಾನಿಗಳು ಕೂಡ ಕೊಹ್ಲಿ ಬ್ಯಾಟ್ನಿಂದ ಸೆಂಚುರಿಯನ್ನು ಎದುರು ನೋಡುತ್ತಿದ್ದಾರೆ. ಈ ಕುತೂಹಲಕ್ಕೆ ಕಿಚ್ಚು ಹಚ್ಚುವಂತೆ ಇದೀಗ ವಿರಾಟ್ ಕೊಹ್ಲಿ ಸೆಂಚುರಿ ಸಿಡಿಸಿ ಬ್ಯಾಟ್ ಮೇಲೆಕ್ಕೆತ್ತಿದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ವಿಶೇಷ ಎಂದರೆ ಈ ಫೋಟೋಗೆ ಇನ್ನು ತುಂಬಾ ದಿನ ಕಾಯಬೇಕಿಲ್ಲ ಎಂಬಾರ್ಥದಲ್ಲಿ ಶೀರ್ಷಿಕೆ ನೀಡಿದ್ದಾರೆ. ಈ ಮೂಲಕ ಈ ಸಲ ಐಪಿಎಲ್‌ನಲ್ಲಿ ಅಬ್ಬರಿಸುವ ಸೂಚನೆ ನೀಡಿದ್ದಾರೆ ಕಿಂಗ್ ಕೊಹ್ಲಿ.
ಇದೀಗ ಈ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ಐಪಿಎಲ್‌ನಲ್ಲಿ 5 ಶತಕ ಬಾರಿಸುವ ಮೂಲಕ ದಾಖಲೆ ಬರೆದಿರುವ ಕೊಹ್ಲಿ ಈ ಬಾರಿ ಶತಕ ಸಿಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಒಂದು ವೇಳೆ ಈ ಬಾರಿ ವಿರಾಟ್ ಕೊಹ್ಲಿ ಬ್ಯಾಟ್ನಿಂದ ಶತಕ ಮೂಡಿಬಂದರೆ ಐಪಿಎಲ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಆಟಗಾರ ಎಂಬ ದಾಖಲೆಯನ್ನು ತಮ್ಮಲ್ಲೇ ಉಳಿಸಿಕೊಳ್ಳಲಿದ್ದಾರೆ. ಅಲ್ಲದೆ ಕ್ರಿಸ್ ಗೇಲ್ ಹೆಸರಿನಲ್ಲಿರುವ 6 ಶತಕಗಳ ದಾಖಲೆಯನ್ನು ಕೊಹ್ಲಿ ಸರಿಗಟ್ಟಲಿದ್ದಾರೆ.
Not too long to go now⏳ pic.twitter.com/CzFOYqf53M
— Virat Kohli (@imVkohli) March 23, 2022
ಇತ್ತ ದಾಖಲೆಯ ಶತಕವನ್ನು ಎದುರು ನೋಡುತ್ತಿರುವ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸುವಂತೆ ಇದೀಗ ವಿರಾಟ್ ಕೊಹ್ಲಿ ಆರ್ಸಿಬಿ ಪರ ಈ ಹಿಂದೆ ಶತಕ ಸಿಡಿಸಿದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಐಪಿಎಲ್ 15 ಮೂಲಕ ಹಳೆಯ ಕೊಹ್ಲಿ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ. ಏಕೆಂದರೆ ಈ ಹಿಂದೆ ಕೊಹ್ಲಿ ಆರ್ಸಿಬಿ ತಂಡದ ನಾಯಕರಾಗಿದ್ದರು. ಆದರೆ ಕಳೆದ ಸೀಸನ್ ಬಳಿಕ ನಾಯಕತ್ವದ ಒತ್ತಡದ ಕಾರಣ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿದಿದ್ದರು. ಅದರಂತೆ ಈ ಬಾರಿ ವಿರಾಟ್ ಕೊಹ್ಲಿ ಕೇವಲ ಆಟಗಾರನಾಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಕೊಹ್ಲಿ ತಮ್ಮ ಹಳೆಯ ಫಾರ್ಮ್ ಪ್ರದರ್ಶಿಸುವ ವಿಶ್ವಾಸದಲ್ಲಿದ್ದಾರೆ.
33 ವರ್ಷದ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಎಂಬುದರಲ್ಲಿ ಅನುಮಾನವೇ ಇಲ್ಲ. ಏಕೆಂದರೆ ಈ ಪ್ರತಿಷ್ಠಿತ ಟಿ20 ಲೀಗ್‌ನಲ್ಲಿ 207 ಪಂದ್ಯಗಳನ್ನು ಆಡಿರುವ ಕೊಹ್ಲಿ 5 ಶತಕ ಮತ್ತು 42 ಅರ್ಧ ಶತಕಗಳ ನೆರವಿನಿಂದ ಒಟ್ಟು 6283 ರನ್ ಗಳಿಸಿದ್ದಾರೆ. ಇದು ಐಪಿಎಲ್ ಇತಿಹಾಸದ ದಾಖಲೆಯಾಗಿದೆ. ಇಂತಹ ಹಲವು ದಾಖಲೆಗಳನ್ನು ಬರೆದಿರುವ ಕಿಂಗ್ ಕೊಹ್ಲಿ ಈ ಬಾರಿ ಅಬ್ಬರಿಸಲಿದ್ದಾರಾ ಕಾದು ನೋಡಬೇಕಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀಗಿದೆ:
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಲುವ್ನಿತ್ ಸಿಸೋಡಿಯಾ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.
ಇದನ್ನೂ ಓದಿ: IPL 2022: ಐಪಿಎಲ್‌ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!
ಇದನ್ನೂ ಓದಿ: IPL 2022: ಐಪಿಎಲ್‌ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್ಗಳು ಇವರೇ..!
ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?