AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಸುದ್ದಿಗೋಷ್ಠಿ ಬಳಿಕ ರವೀಂದ್ರ ಜಡೇಜಾ ಮಾಡಿದ ಟ್ವೀಟ್ ಫುಲ್ ವೈರಲ್: ಏನು ಗೊತ್ತೇ?

Ravindra Jadeja: ವಿರಾಟ್ ಕೊಹ್ಲಿ ಸುದ್ದಿಗೋಷ್ಠಿ ಬಳಿಕ ಟೀಮ್ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಮಾಡಿರುವ ಒಂದು ಟ್ವೀಟ್ ಈಗ ಸಖತ್ ವೈರಲ್ ಆಗುತ್ತಿದೆ. ಜಡೇಜಾ ತಮ್ಮ ಟ್ವಿಟ್ಟರ್ ಮತ್ತು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದು ಈ ಬಗ್ಗೆ ಅಭಿಮಾನಿಗಳು ತಲೆಕೆಡಿಸಿಕೊಳ್ಳುತ್ತಿದ್ದಾರೆ.

Virat Kohli: ವಿರಾಟ್ ಕೊಹ್ಲಿ ಸುದ್ದಿಗೋಷ್ಠಿ ಬಳಿಕ ರವೀಂದ್ರ ಜಡೇಜಾ ಮಾಡಿದ ಟ್ವೀಟ್ ಫುಲ್ ವೈರಲ್: ಏನು ಗೊತ್ತೇ?
Ravindra Jadeja and Virat Kohli
TV9 Web
| Edited By: |

Updated on: Dec 16, 2021 | 11:14 AM

Share

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವ ಮುನ್ನ ಟೀಮ್ ಇಂಡಿಯಾ (India vs South Africa) ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ (Virat Kohli) ತೆರೆಮರೆಯ ಎಲ್ಲ ಗಾಸಿಪ್​ಗಳಿಗೆ ಖಡಕ್ ಆಗಿ ಉತ್ತರ ನೀಡಿದ್ದಾರೆ. ಪ್ರಮುಖವಾಗಿ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಕೊಹ್ಲಿ ಸರಣಿಯಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಬಿಸಿಸಿಐ (BCCI) ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ. ಟಿ20 ಕ್ರಿಕೆಟ್ (T20 Cricket) ನಾಯಕತ್ವ ತೊರೆಯುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಬಿಸಿಸಿಐ ನನಗೆ ಸೂಚಿಸಿರಲಿಲ್ಲ. ಏಕದಿನ ತಂಡದ ನಾಯಕತ್ವದಿಂದ (ODI Captaincy) ವಜಾಗೊಳಿಸುವ ಬಗ್ಗೆಯೂ ಮಂಡಳಿ ಅಥವಾ ಆಯ್ಕೆ ಸಮಿತಿಯಿಂದ ನನಗೆ ಮೊದಲೇ ಮಾಹಿತಿ ಬಂದಿರಲಿಲ್ಲ ಎಂದು ವಿರಾಟ್ ಶಾಕಿಂಗ್ ಹೇಳಿಕೆ ನೀಡಿದರು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಆಲ್ರೌಂಡರ್ ರವೀಂದ್ರ ಜಡೇಜಾ (Ravindra Jadeja) ಮಾಡಿರುವ ಒಂದು ಟ್ವೀಟ್ ಸಖತ್ ವೈರಲ್ ಆಗಿದೆ.

ಜಡೇಜಾ ತಮ್ಮ ಟ್ವಿಟ್ಟರ್ ಮತ್ತು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ “ನಕಲಿ ಸ್ನೇಹಿತರು ವದಂತಿಗಳಲ್ಲಿ ನಂಬಿಕೆ ಇಡುತ್ತಾರೆ. ಆದರೆ, ನಿಜವಾದ ಸ್ನೇಹಿತರು ನಿಮ್ಮಲ್ಲಿ ನಂಬಿಕೆಯನ್ನು ಇಡುತ್ತಾರೆ” ಎಂದು ಬರೆದು ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಕೊಹ್ಲಿ ಸುದ್ದಿಗೋಷ್ಠಿ ಬೆನ್ನಲ್ಲೇ ಜಡೇಜಾ ಈರೀತಿ ಪೋಸ್ಟ್ ಮಾಡಿರುವುದು ಯಾಕೆಂದು ಅನೇಕರು ತಲೆಕೆಡಿಸಿಕೊಳ್ಳುತ್ತಿದ್ದಾರೆ.

ಇತ್ತೀಚೆಗಷ್ಟೆ ರವೀಂದ್ರ ಜಡೇಜಾ ಅವರು ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ನೀಡಲಿದ್ದಾರೆ ಎಂದು ವರದಿಯಾಗಿತ್ತು. ಪದೇ ಪದೇ ಗಾಯಕ್ಕೊಳಗಾಗುತ್ತಿರುವುದು ಇವರು ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿಯಾಗಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿತ್ತು. ಏಕದಿನ ಮತ್ತು ಟಿ20 ಕ್ರಿಕೆಟ್​ಗೆ ಹೆಚ್ಚು ಗಮನ ಕೊಡುವ ದೃಷ್ಟಿಯಿಂದ ಟೆಸ್ಟ್ ಕ್ರಿಕೆಟ್​ಗೆ ಅವರು ವಿದಾಯ ಹೇಳಬಹುದು ಎಂಬ ಸುದ್ದಿ ಕೇಳಿಬಂದಿತ್ತು. ಈ ಪೋಸ್ಟ್​ ನಿವೃತ್ತಿ ವಿಚಾರಕ್ಕೆ ಸಂಬಂಧಿಸಿದ್ದಾ ಎಂಬ ಅನುಮಾನ ಕೂಡ ಅಭಿಮಾನಿಗಳಲ್ಲಿದೆ.

ಯಾಕಂದ್ರೆ, ರವೀಂದ್ರ ಜಡೇಜಾಗೆ ಇಂಜುರಿ ಸಮಸ್ಯೆ ಪದೇ ಪದೇ ಕಾಡುತ್ತಿದೆ. ಅಲ್ಲದೆ ಗಾಯದ ಸಮಸ್ಯೆಯಿಂದಾಗಿ ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಿಂದಲೂ ಇವರು ಹೊರಗುಳಿದಿದ್ದಾರೆ. ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೊದಲ ಟೆಸ್ಟ್ ವೇಳೆ ಮುಂದೋಳಿನ ಗಾಯಕ್ಕೆ ತುತ್ತಾಗಿದ್ದ ಜಡೇಜಾ, ಬಳಿಕ 2ನೇ ಟೆಸ್ಟ್‌ನಿಂದ ಹೊರಗುಳಿದಿದ್ದರು. ಮೊಣಕಾಲು ಗಾಯವೂ ಕಾಡಿರುವುದರಿಂದ ಅವರು ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್ ಸರಣಿಗೂ ಅಲಭ್ಯರಾಗಿದ್ದಾರೆ.

ಜಡೇಜಾ 3 ಮಾದರಿಯಲ್ಲಿಯೂ ಭಾರತ ತಂಡದ ಪರ ಆಲ್ರೌಂಡರ್ ಆಗಿ ಸದಾ ಉತ್ತಮ ಪ್ರದರ್ಶನವನ್ನು ನೀಡುವಂತಹ ಸಾಮರ್ಥ್ಯವನ್ನು ಹೊಂದಿರುವ ಆಟಗಾರ. ಹೀಗಾಗಿಯೇ ಯಾವುದೇ ಸರಣಿಗೆ ಭಾರತ ತಂಡ ಪ್ರಕಟವಾದಾಗ ಅಲ್ಲಿ ರವೀಂದ್ರ ಜಡೇಜಾ ಹೆಸರು ಸಾಮಾನ್ಯವಾಗಿ ಇದ್ದೇ ಇರುತ್ತದೆ. ತವರಿನಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಮಿಂಚಿರುವ ಜಡ್ಡು ಬ್ಯಾಟಿಂಗ್ ಬೌಲಿಂಗ್ ಜೊತೆಗೆ ಅಮೋಘ ಫಿಲ್ಡಿಂಗ್‌ನಿಂದಲೂ ಎದುರಾಳಿಗೆ ಆಘಾತ ನಿಡುವ ಸಾಮರ್ಥ್ಯಹೊಂದಿದ್ದು ಇದೇ ಕಾರಣದಿಂದಾಗಿ ಅವರು ತ್ರಿ ಡೈಮೆನ್ಶನ್ ಆಟಗಾರ ಎನಿಸಿಕೊಂಡಿದ್ದಾರೆ. ಜಡೇಜಾ ಭಾರತ ಪರ ಇದುವರೆಗೆ 56 ಟೆಸ್ಟ್ ಆಡಿದ್ದು, 223 ವಿಕೆಟ್ ಮತ್ತು 1 ಶತಕ ಸಹಿತ 2,145 ರನ್ ಗಳಿಸಿದ್ದಾರೆ.

Isa Guha: ಬಿಗ್​ಬ್ಯಾಷ್​ನಲ್ಲಿ ಡಬಲ್ ಮೀನಿಂಗ್ ಕಾಮೆಂಟರಿ: ಭಾರತದ ಮಹಿಳಾ ಕಾಮೆಂಟೇಟರ್ ಮಾತಾಡಿದ್ದು ಏನು ಗೊತ್ತೇ?

T Natarajan: ಟೀಮ್ ಇಂಡಿಯಾದಲ್ಲಿಲ್ಲ ಅವಕಾಶ: ಹುಟ್ಟೂರಿನಲ್ಲೇ ಸ್ವಂತ ಕ್ರಿಕೆಟ್ ಮೈದಾನ ಕಟ್ಟಿದ ಸ್ಟಾರ್ ಆಟಗಾರ

(Virat Kohli silenced about several key matters then Ravindra Jadeja dropped a tweet its goes viral)

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್