VIDEO: RCB ಅಭ್ಯಾಸದ ನಡುವೆ ವಿರಾಟ್ ಕೊಹ್ಲಿ ಕ್ವಾಟ್ಲೆ

IPL 2025: ಐಪಿಎಲ್​ನ 18ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ. ಅಂದರೆ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ಐಪಿಎಲ್ ಅಭಿಯಾನ ಆರಂಭಿಸಲಿದೆ.

VIDEO: RCB ಅಭ್ಯಾಸದ ನಡುವೆ ವಿರಾಟ್ ಕೊಹ್ಲಿ ಕ್ವಾಟ್ಲೆ
Virat Kohli

Updated on: Mar 17, 2025 | 12:04 PM

ಬಹುನಿರೀಕ್ಷಿತ ಐಪಿಎಲ್ ಸೀಸನ್-18 ಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಭ್ಯಾಸವನ್ನು ಆರಂಭಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಅಭ್ಯಾಸದಲ್ಲಿ ಈಗಾಗಲೇ ಬಹುತೇಕ ಆಟಗಾರರು ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಶನಿವಾರ ಅಭ್ಯಾಸ ಬಳಗವನ್ನು ಸೇರಿಕೊಂಡಿದ್ದಾರೆ.

ಅತ್ತ ವಿರಾಟ್ ಕೊಹ್ಲಿ ಆಗಮನದೊಂದಿಗೆ ತಂಡದಲ್ಲಿ ಹೊಸ ಹುರುಪು ಮೂಡಿದೆ. ಇನ್ನು ಕಿಂಗ್ ಕೊಹ್ಲಿ ಸಹ ಆಟಗಾರರೊಂದಿಗೆ ಕ್ವಾಟ್ಲೆ ಮಾಡುತ್ತಾ ಸಖತ್ ಜಾಲಿ ಮೂಡ್​ನಲ್ಲಿದ್ದಾರೆ. ಇದೀಗ ಆರ್​ಸಿಬಿ ತಂಡದ ಪ್ರಾಕ್ಟೀಸ್ ಸೆಷನ್​ ವೇಳೆ ವಿರಾಟ್ ಕೊಹ್ಲಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಿಂಗ್ ಕೊಹ್ಲಿ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ವಿರಾಟ್ ಕೊಹ್ಲಿ ಕ್ವಾಟ್ಲೆ ವಿಡಿಯೋ:

ಇದನ್ನೂ ಓದಿ
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯು  ಮಾರ್ಚ್ 22 ರಿಂದ ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಅಂದರೆ ಆರ್​ಸಿಬಿ ಮೊದಲ ದಿನವೇ ಐಪಿಎಲ್ ಅಭಿಯಾನ ಆರಂಭಿಸಲಿದೆ.

ಈ ಪಂದ್ಯದ ಬಳಿಕ ಆರ್​ಸಿಬಿ ಕಣಕ್ಕಿಳಿಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ. ಈ ಪಂದ್ಯ ಮಾರ್ಚ್ 28 ರಂದು ನಡೆಯಲಿದೆ. ಆ ಬಳಿಕ ಏಪ್ರಿಲ್ 2 ರಂದು ಗುಜರಾತ್ ಟೈಟಾನ್ಸ್ ಹಾಗೂ ಏಪ್ರಿಲ್ 7 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಅಂದರೆ ಆರ್​ಸಿಬಿ ತನ್ನ ಮೊದಲ 4 ಪಂದ್ಯಗಳನ್ನು ಐಪಿಎಲ್​ನ ಚಾಂಪಿಯನ್​ ತಂಡಗಳನ್ನೇ ಎದುರಿಸಲಿರುವುದು ವಿಶೇಷ.

ಐಪಿಎಲ್​ನ ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿರುವ ಈ ನಾಲ್ಕು ತಂಡಗಳ ವಿರುದ್ಧ ಆರ್​ಸಿಬಿ ಜಯ ಸಾಧಿಸಿದರೆ ಆರಂಭದಲ್ಲೇ ಟೂರ್ನಿಯಲ್ಲಿ ಮೇಲುಗೈ ಸಾಧಿಸಬಹುದು. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಮೊದಲಾರ್ಧದಲ್ಲಿ ಹೇಗೆ ಪ್ರದರ್ಶನ ನೀಡಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

ಇದನ್ನೂ ಓದಿ: IPL 2025: 8 ಆಟಗಾರರು ಎಂಟ್ರಿ: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.