Virat Kohli: ಟೀಮ್ ಇಂಡಿಯಾ ಟೆಸ್ಟ್​ ತಂಡದ ನಾಯಕತ್ವ ತ್ಯಜಿಸಿದ ವಿರಾಟ್ ಕೊಹ್ಲಿ

Virat Kohli Steps Down as Captain: 68 ಟೆಸ್ಟ್ ಪಂದ್ಯಗಳಲ್ಲಿ  ತಂಡದ ಸಾರಥ್ಯವಹಿಸಿದ್ದ ವಿರಾಟ್ ಕೊಹ್ಲಿ 40 ಟೆಸ್ಟ್‌ಗಳಲ್ಲಿ ಟೀಮ್ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಇನ್ನು 17 ಟೆಸ್ಟ್‌ಗಳಲ್ಲಿ ಸೋತರೆ 11 ಪಂದ್ಯಗಳು ಡ್ರಾ ಆಗಿವೆ.

Virat Kohli: ಟೀಮ್ ಇಂಡಿಯಾ ಟೆಸ್ಟ್​ ತಂಡದ ನಾಯಕತ್ವ ತ್ಯಜಿಸಿದ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 15, 2022 | 7:22 PM

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಈ ಹಿಂದೆ ಟಿ20 ಹಾಗೂ ಏಕದಿನ ತಂಡದ ನಾಯಕತ್ವವನ್ನು ತ್ಯಜಿಸಿದ್ದ ಕೊಹ್ಲಿ ಇದೀಗ ದಿಢೀರಣೆ ಟೆಸ್ಟ್ ತಂಡದ ನಾಯಕತ್ವವನ್ನು ಕೈ ಬಿಟ್ಟು ಅಚ್ಚರಿ ಮೂಡಿಸಿದ್ದಾರೆ. ವಿರಾಟ್ ಕೊಹ್ಲಿ 2014 ರಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದರು. ಕೊಹ್ಲಿ ನಾಯಕತ್ವದಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಭಾರತ ತಂಡವು ಹಲವು ಸರಣಿಗಳನ್ನು ಜಯಿಸಿ ದಾಖಲೆ ಬರೆದಿತ್ತು. ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ಸೋಲಿನ ಬೆನ್ನಲ್ಲೇ ಕೊಹ್ಲಿ ದಿಢೀರಣೆ ರಾಜೀನಾಮೆ ನೀಡಿದ್ದಾರೆ.

“ತಂಡವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು  7 ವರ್ಷಗಳ ಕಾಲ ಪ್ರತಿದಿನ  ಕಠಿಣ ಪರಿಶ್ರಮ ಪಟ್ಟಿದ್ದೇನೆ. ನನ್ನ ಕೆಲಸವನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ಮಾಡಿದ್ದೇನೆ. ಪ್ರತಿಯೊಂದು ವಿಷಯವೂ ಒಂದು ಹಂತದಲ್ಲಿ ಸ್ಥಗಿತಗೊಳ್ಳಬೇಕು. ಭಾರತದ ಟೆಸ್ಟ್ ಕ್ಯಾಪ್ಟನ್ ಆಗಿ ನನಗೆ ಈ ಸಂದರ್ಭ ಅಂತ್ಯ ಎಂದು ಭಾವಿಸುತ್ತೇನೆ. ಪ್ರಯಾಣದ ಉದ್ದಕ್ಕೂ ಅನೇಕ ಏರಿಳಿತಗಳು ಮತ್ತು ಕೆಲವು ಕುಸಿತಗಳು ಕಂಡಿವೆ. ಆದರೆ ಎಂದಿಗೂ ಪ್ರಯತ್ನದ ಕೊರತೆ ಅಥವಾ ನಂಬಿಕೆಯ ಕೊರತೆ ಇರಲಿಲ್ಲ. ನಾನು ಯಾವಾಗಲೂ ನನ್ನ 120 ಪ್ರತಿಶತದಷ್ಟು ಎಲ್ಲದರಲ್ಲೂ ನೀಡುತ್ತೇನೆ ಎಂದು ನಂಬಿದ್ದೇನೆ. ಹಾಗೆ ಮಾಡಿದ್ದೇನೆ. ಅದನ್ನು ಮಾಡಲು ಸಾಧ್ಯವಾಗದಿದ್ದರೆ, ಅದು ಸರಿಯಾದ ಕೆಲಸವಲ್ಲ ಎಂದು ನನಗೆ ತಿಳಿದಿದೆ. ನನ್ನ ಹೃದಯದಲ್ಲಿ ಸಂಪೂರ್ಣ ಸ್ಪಷ್ಟತೆ ಇದೆ. ನನ್ನ ತಂಡಕ್ಕೆ ನಾನು ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ. ತಂಡವನ್ನು ಮುನ್ನಡೆಸಲು ಅವಕಾಶ ಮಾಡಿಕೊಟ್ಟ ಬಿಸಿಸಿಐ ಧನ್ಯವಾದ ತಿಳಿಸುತ್ತೇನೆ. ಹಾಗೆಯೇ ನನ್ನಲ್ಲಿ ನಾಯಕತ್ವದ ಗುಣವಿದೆ ಎಂದು ಗುರುತಿಸಿ ದೊಡ್ಡ ಜವಬ್ದಾರಿವಹಿಸಿದ ಮಹೇಂದ್ರ ಸಿಂಗ್ ಧೋನಿಗೂ ಈ ಸಂದರ್ಭದಲ್ಲಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವಕ್ಕೆ ರಾಜೀನಾಮೆ ಘೋಷಣೆ ವೇಳೆ ತಿಳಿಸಿದ್ದಾರೆ.

68 ಟೆಸ್ಟ್ ಪಂದ್ಯಗಳಲ್ಲಿ  ತಂಡದ ಸಾರಥ್ಯವಹಿಸಿದ್ದ ವಿರಾಟ್ ಕೊಹ್ಲಿ 40 ಟೆಸ್ಟ್‌ಗಳಲ್ಲಿ ಟೀಮ್ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಇನ್ನು 17 ಟೆಸ್ಟ್‌ಗಳಲ್ಲಿ ಸೋತರೆ 11 ಪಂದ್ಯಗಳು ಡ್ರಾ ಆಗಿವೆ. ಈ ಮೂಲಕ ಟೀಮ್ ಇಂಡಿಯಾ ಇತಿಹಾಸದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎನಿಸಿಕೊಂಡಿದ್ದಾರೆ ವಿರಾಟ್ ಕೊಹ್ಲಿ.

ಕೊಹ್ಲಿ ತಮ್ಮ ನಾಯಕತ್ವದಲ್ಲಿ ಇಂಗ್ಲೆಂಡ್ ವಿರುದ್ಧ ಒಟ್ಟು 18 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ 10 ಪಂದ್ಯಗಳನ್ನು ಗೆದ್ದಿದ್ದಾರೆ. ಇನ್ನು 6 ಪಂದ್ಯಗಳನ್ನು ಸೋತಿದ್ದರೆ, 2 ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ.

ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ 10 ಟೆಸ್ಟ್ ಪಂದ್ಯಗಳನ್ನು ಗೆದ್ದಿದ್ದಾರೆ. ಆದರೆ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಬೇರೆ ಯಾವ ಭಾರತೀಯ ನಾಯಕನೂ ಕೂಡ ಇಷ್ಟೊಂದು ಗೆಲುವಿನ ಸಮೀಪ ತಲುಪಲು ಸಾಧ್ಯವಾಗಿಲ್ಲ ಎಂಬುದು ಇಲ್ಲಿ ವಿಶೇಷ. ಅಂದರೆ, ಇಂಗ್ಲೆಂಡ್​ ವಿರುದ್ದ ಭಾರತದ ಯಾವ ನಾಯಕ ಕೂಡ 5 ಟೆಸ್ಟ್‌ ಪಂದ್ಯಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ.

Published On - 6:56 pm, Sat, 15 January 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ