Team India Coach: ಟೀಮ್ ಇಂಡಿಯಾ ಹೊಸ ಕೋಚ್ ಯಾರು? ಪ್ರಶ್ನೆಗೆ ವಿರಾಟ್ ಕೊಹ್ಲಿಯಿಂದ ಬಂದ ಉತ್ತರವಿದು

| Updated By: Vinay Bhat

Updated on: Oct 17, 2021 | 11:57 AM

Rahul Dravid: ರಾಹುಲ್ ದ್ರಾವಿಡ್ ಅವರನ್ನು ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ಶನಿವಾರ ಎಎನ್‌ಐ ವರದಿ ಬಿತ್ತರಿಸಿತ್ತು. ಹೀಗಿರುವಾಗ ಟಿ20 ವಿಶ್ವಕಪ್ ಮುಗಿದ ಬಳಿಕ ಭಾರತ ತಂಡದ ಮುಖ್ಯ ಕೋಚ್ ಯಾರು ಎಂಬ ಪ್ರಶ್ನೆ ಬಂದಾಗ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

Team India Coach: ಟೀಮ್ ಇಂಡಿಯಾ ಹೊಸ ಕೋಚ್ ಯಾರು? ಪ್ರಶ್ನೆಗೆ ವಿರಾಟ್ ಕೊಹ್ಲಿಯಿಂದ ಬಂದ ಉತ್ತರವಿದು
Rahul Dravid and Virat Kohli
Follow us on

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಗೆ (IPL 2021) ತೆರೆಬಿದ್ದ ಬೆನ್ನಲ್ಲೇ ಇತ್ತ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿ ಫೀವರ್ ಶುರುವಾಗಿದೆ. ಏಳನೇ ಆವೃತ್ತಿಯ ಚುಟುಕು ವಿಶ್ವಕಪ್​ನಲ್ಲಿ ಇಂದಿನಿಂದ ಸೂಪರ್ 12ಗೆ (Super 12) ಲಗ್ಗೆಯಿಡಲು ಅರ್ಹತಾ ಸುತ್ತಿನ ಪಂದ್ಯಕ್ಕೆ ಚಾಲನೆ ಸಿಗಲಿದೆ. ಇದಕ್ಕೂ ಮುನ್ನ ಶನಿವಾರದಂದು ಐಸಿಸಿ (ICC) ನಾಯಕರ ಕರೆ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ವಿವಿಧ ತಂಡಗಳ ನಾಯಕರು ಟೂರ್ನಿಯ ಕುರಿತಾಗಿ ಮಾತನಾಡಿದ್ದು, ಟೀಮ್ ಇಂಡಿಯಾ (Team India) ನಾಯಕ ವಿರಾಟ್ ಕೊಹ್ಲಿ (Virat Kohli) ಕೂಡ ಒಂದಿಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಪ್ರಮುಖವಾಗಿ ಟಿ20 ವಿಶ್ವಕಪ್ ಮುಗಿದ ಬಳಿಕ ಭಾರತ ತಂಡದ ಮುಖ್ಯ ಕೋಚ್ ಯಾರು ಎಂಬ ಪ್ರಶ್ನೆ ಬಂದಾಗ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ. 2017 ರಿಂದ ಟೀಮ್ ಇಂಡಿಯಾ ಹೆಡ್ ಕೋಚ್ ಆಗಿ ಭಾರತದ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಕಾರ್ಯನಿರ್ವಹಿಸುತ್ತಿದ್ದು, ಇವರ ಅಧಿಕಾರಾವದಿ  ಟಿ20 ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲಿ ಅಂತ್ಯವಾಗಲಿದೆ. ಹೀಗೆ ರವಿಶಾಸ್ತ್ರಿ ಹೆಡ್ ಕೋಚ್ ಸ್ಥಾನದಿಂದ ಕೆಳಗಿಳಿದ ನಂತರ ಆ ಸ್ಥಾನಕ್ಕೆ ಭಾರತದ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ನೇಮಕವಾಗಲಿದ್ದಾರೆ ಎನ್ನುವ ಸುದ್ದಿ ದೊಡ್ಡಮಟ್ಟದಲ್ಲಿ ಹರಿದಾಡಿದೆ.

ಈ ವಿಷಯದ ಕುರಿತು ಮಾತನಾಡಿರುವ ವಿರಾಟ್ ಕೊಹ್ಲಿ, ಈ ಕುರಿತಾಗಿ ನಮಗೆ ಯಾವುದೇ ಮಾಹಿತಿ ಇಲ್ಲ, ಇದರ ಕುರಿತಾಗಿ ಯಾರೊಂದಿಗೂ ನಾನು ಚರ್ಚೆಯನ್ನು ಕೂಡ ಮಾಡಿಲ್ಲ ಎಂದು ಹೇಳಿಕೆ ನೀಡುವುದರ ಮೂಲಕ ಅಚ್ಚರಿ ಮೂಡಿಸಿದ್ದಾರೆ. ‘ಟೀಮ್ ಇಂಡಿಯಾದ ಮುಂದಿನ ಹೆಡ್ ಕೋಚ್ ಯಾರಾಗಲಿದ್ದಾರೆ ಎನ್ನುವುದರ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಆದರೆ ಸದ್ಯ ಆರಂಭವಾಗಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ಸ್ ಆಗಿ ಹೊರಹೊಮ್ಮುವ ಮೂಲಕ ಟ್ರೋಫಿಯನ್ನು ನಮ್ಮದಾಗಿಸಿಕೊಳ್ಳುವುದು ನಮ್ಮ ತಂಡದ ಗುರಿ’ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ರಾಹುಲ್ ದ್ರಾವಿಡ್ ಅವರನ್ನು ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ಶನಿವಾರ ಎಎನ್‌ಐ ವರದಿ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಟೈಮ್ಸ್ ಆಫ್ ಇಂಡಿಯಾ ಕೂಡ ಈ ಬಗ್ಗೆ ವರದಿ ಮಾಡಿದ್ದು, ರಾಹುಲ್ ದ್ರಾವಿಡ್ ಅವರಿಗೆ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಎರಡು ವರ್ಷಗಳ ಗುತ್ತಿಗೆ ನೀಡಲಾಗಿದೆ. ದ್ರಾವಿಡ್ ಅವರು 10 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರೆ ಎಂದು ಹೇಳಿದೆ. ಆದರೆ, ಕೋಚ್ ನೇಮಕ ವಿಚಾರವಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ಟಿ20 ವಿಶ್ವಕಪ್ ಟೂರ್ನಿ ಅಕ್ಟೋಬರ್ 17ರ ಭಾನುವಾರದಂದೇ ಆರಂಭವಾಗುತ್ತಿದೆ. ಆದರೆ ಟೀಮ್ ಇಂಡಿಯಾದ ಮೊದಲ ಪಂದ್ಯ ಅಕ್ಟೋಬರ್ 24ರ ಭಾನುವಾರದಂದು ನಿಗದಿಯಾಗಿದ್ದು ತನ್ನ ಬದ್ಧ ಎದುರಾಳಿಯಾದ ಪಾಕಿಸ್ತಾನದ ವಿರುದ್ಧ ಭಾರತ ತಂಡ ಸೆಣಸಾಡಲಿದೆ.

Anil Kumble Birthday: 51ನೇ ವಸಂತಕ್ಕೆ ಕಾಲಿಟ್ಟ ಕನ್ನಡಿಗ ಅನಿಲ್ ಕುಂಬ್ಳೆ: ಕರ್ನಾಟಕದ ಕಲಿ ಬಗ್ಗೆ ಇಲ್ಲಿದೆ ವಿಶೇಷ ಸಂಗತಿಗಳು

SAFF Championship: 8ನೇ ಬಾರಿ ಸ್ಯಾಫ್ ಪ್ರಶಸ್ತಿ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಛೇಟ್ರಿ

(Virat Kohli talked about the rumours of Rahul Dravid appointment as India head coach he gave an interesting response)