India vs Scotland: ಸ್ಕಾಟ್ಲೆಂಡ್ ವಿರುದ್ಧ ಮತ್ತೊಂದು ಅಗ್ನಿ ಪರೀಕ್ಷೆ: ಕೊಹ್ಲಿ ಬರ್ತ್​ ಡೇಗೆ ಗೆಲುವಿನ ಗಿಫ್ಟ್ ನೀಡುತ್ತಾ ಭಾರತ?

IND vs SCT, T20 World Cup: ಟಿ20 ವಿಶ್ವಕಪ್​ನ ಆರಂಭದಲ್ಲಿ ಸೋಲು ಕಾಣುವ ಮೂಲಕ ಅಭಿಯಾನ ಆರಂಭಿಸಿದ್ದ ಭಾರತ ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ಇಂದು ಟೀಮ್ ಇಂಡಿಯಾ ಸ್ಕಾಟ್ಲೆಂಡ್ ತಂಡವನ್ನು ಎದುರಿಸಲಿದ್ದು ಈ ಪಂದ್ಯವನ್ನು ಕೂಡ ದೊಡ್ಡ ಮೊತ್ತದ ಅಂತರದಲ್ಲಿ ಗೆಲ್ಲಬೇಕಿದೆ.

India vs Scotland: ಸ್ಕಾಟ್ಲೆಂಡ್ ವಿರುದ್ಧ ಮತ್ತೊಂದು ಅಗ್ನಿ ಪರೀಕ್ಷೆ: ಕೊಹ್ಲಿ ಬರ್ತ್​ ಡೇಗೆ ಗೆಲುವಿನ ಗಿಫ್ಟ್ ನೀಡುತ್ತಾ ಭಾರತ?
india vs scotland
Follow us
TV9 Web
| Updated By: Vinay Bhat

Updated on: Nov 05, 2021 | 9:06 AM

ಟಿ20 ವಿಶ್ವಕಪ್​ನಲ್ಲಿಂದು (T20 World Cup) ಭಾರತ ಮತ್ತೊಂದು ಮಾಡು ಇಲ್ಲವೇ ಮಡಿ ಪಂದ್ಯ ಆಡಲಿದೆ. ಈ ಬಾರಿ ಕೊಹ್ಲಿ ಪಡೆಯ ಎದುರಾಳಿ ಸ್ಕಾಟ್ಲೆಂಡ್ (India vs Scotland). ಸೆಮಿ ಫೈನಲ್​ಗೇರಲು ಕೂದಲೆಳೆ ಅವಕಾಶ ಹೊಂದಿರುವ ಟೀಮ್ ಇಂಡಿಯಾ (Team India) ಈ ಪಂದ್ಯವನ್ನು ಕೂಡ ದೊಡ್ಡ ಮೊತ್ತದ ಅಂತರದಲ್ಲಿ ಗೆಲ್ಲಬೇಕಿದೆ. ಇಂದು ನಾಯಕ ವಿರಾಟ್ ಕೊಹ್ಲಿ (Virat Kohli Birthday) ಅವರ ಹುಟ್ಟುಹಬ್ಬ ಕೂಡ. ಹೀಗಾಗಿ ಕೊಹ್ಲಿ ಜನ್ಮ ದಿನಕ್ಕೆ ಗೆಲುವಿನ ಉಡುಗೊರೆ ನೀಡುತ್ತಾ ಎಂಬುದು ಕುತೂಹಲ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಮೇಲೂ ಸಾಕಷ್ಟು ನಿರೀಕ್ಷೆಗಳಿವೆ.

ಟಿ20 ವಿಶ್ವಕಪ್​ನ ಆರಂಭದಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಸೋಲು ಕಾಣುವ ಮೂಲಕ ಅಭಿಯಾನ ಆರಂಭಿಸಿದ್ದ ಭಾರತ ಕಳೆದ ಅಫ್ಘಾನಿಸ್ತಾನ ವಿರುದ್ಧ ಜಯಿಸಿ ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದರು. ಮನಬಂದಂತೆ ಆಟವಾಡಿದ್ದರು. ಇವರಿಬ್ಬರ ಕಡೆಯಿಂದ ಇಂದುಕೂಡ ಈರೀತಿಯ ಮತ್ತೊಂದು ಆಟ ಬರಬೇಕಿದೆ.

ರಿಷಭ್ ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ಕೂಡ ಫಾರ್ಮ್​ಗೆ ಮರಳಿರುವುದು ಟೀಮ್ ಇಂಡಿಯಾ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಸೂರ್ಯಕುಮಾರ್ ಯಾದವ್ ಆಡುವ ಬಳಗಕ್ಕೆ ಕಮ್​ಬ್ಯಾಕ್ ಮಾಡಿದ್ದರೂ ಅವಕಾಶ ಸಿಕ್ಕಿರಲಿಲ್ಲ. ರವೀಂದ್ರ ಜಡೇಜಾ ತಮ್ಮ ಕೈಲಾದಷ್ಟು ಪ್ರಯತ್ನ ಪಡುತ್ತಿದ್ದಾರೆ. ರವಿಚಂದ್ರನ್ ಅಶ್ವಿನ್ ಮೊದಲ ಪಂದ್ಯದಲ್ಲೇ ಮಾರಕವಾಗಿ ಪರಿಣಮಿಸಿದ್ದಾರೆ. ಶಾರ್ದೂಲ್ ಠಾಕೂರ್ ದುಬಾರಿಯಾಗುತ್ತಿದ್ದಾರೆ. ಮೊಹಮ್ಮ್ ಶಮಿ ಮತ್ತು ಜಸ್​ಪ್ರೀತ್ ಬುಮ್ರಾ ವಿಕೆಟ್ ಕೀಳುವತ್ತ ಇನ್ನಷ್ಟು ಗಮನ ಹರಿಸಬೇಕಿದೆ.

ಇತ್ತ ಸ್ಕಾಟ್ಲೆಂಡ್ ತಂಡ ಇದೇ ಮೊದಲ ಬಾರಿಗೆ ಭಾರತವನ್ನು ಎದುರಿಸುತ್ತಿದೆ. 2007ರಲ್ಲಿ ಉಭಯ ತಂಡಗಳ ಪಂದ್ಯವು ಟಾಸ್ ನಂತರ ಪ್ರತಿಕೂಲ ಹವಾಮಾನದ ಕಾರಣ ರದ್ದಾಗಿತ್ತು. ಕೈಲ್ ಕೋಯ್ಜರ್ ನೇತೃತ್ವದ ತಂಡವು ಇದೇ ಮೊದಲ ಬಾರಿ ವಿಶ್ವಕಪ್ ಪ್ರಧಾನ ಸುತ್ತಿಗೆ ಪ್ರವೇಶಿಸಿದೆ. ಆದರೆ ಒಂದೂ ಪಂದ್ಯದಲ್ಲಿ ಜಯಿಸಿಲ್ಲ. ಕಿವೀಸ್ ಎದುರಿನ ಪಂದ್ಯದಲ್ಲಿ ದಿಟ್ಟತನದಿಂದ ಆಡಿತ್ತು.

ಸೂಪರ್-12ರ ಗ್ರೂಪ್-2ರಿಂದ ಈಗಾಗಲೆ ಪಾಕ್ ತಂಡ ಸತತ 4 ಜಯದೊಂದಿಗೆ ಸೆಮಿಫೈನಲ್ ಸ್ಥಾನ ಖಾತ್ರಿಪಡಿಸಿಕೊಂಡಿದ್ದರೆ, ಸದ್ಯಕ್ಕೆ ನ್ಯೂಜಿಲೆಂಡ್ ತಂಡವೇ ಸೆಮೀಸ್‌ಗೇರುವ 2ನೇ ನೆಚ್ಚಿನ ತಂಡವಾಗಿದೆ. ಆದರೆ ಕಿವೀಸ್ ಕೊನೇ 2 ಪಂದ್ಯಗಳ ಪೈಕಿ ಒಂದರಲ್ಲಿ ಸೋತರೆ ಆಗ ಭಾರತಕ್ಕೂ ಸೆಮಿಫೈನಲ್‌ಗೇರುವ ಬಾಗಿಲು ತೆರೆಯಲಿದೆ.

ಇನ್ನು ಇಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ನಮೀಬಿಯ ತಂಡವನ್ನು ಎದುರಿಸಲಿದೆ. ಸ್ಕಾಟ್ಲೆಂಡ್ ವಿರುದ್ಧ ಆಘಾತ ಎದುರಾಗುವುದರಿಂದ ಪಾರಾಗಿರುವ ಕಿವೀಸ್, ಆಡಿದ ಚೊಚ್ಚಲ ಟಿ20 ವಿಶ್ವಕಪ್‌ನಲ್ಲೇ 2ನೇ ಸುತ್ತಿಗೇರಿ ಗಮನ ಸೆಳೆದಿರುವ ನಮೀಬಿಯ ವಿರುದ್ಧವೂ ಎಚ್ಚರಿಕೆಯ ಆಟವಾಡಬೇಕಾಗಿದೆ. ನಂತರ ಆಫ್ಘನ್ ವಿರುದ್ಧವೂ ಗೆದ್ದರೆ ಸುಲಭವಾಗಿ ಉಪಾಂತ್ಯಕ್ಕೇರುವ ಅವಕಾಶ ಕೇನ್ ವಿಲಿಯಮ್ಸನ್ ಬಳಗದ ಮುಂದಿದೆ. ಕಿವೀಸ್ ಸೋಲಿಗಾಗಿ ಭಾರತೀಯ ಕ್ರಿಕೆಟ್ ಪ್ರೇಮಿಗಳು ಪ್ರಾರ್ಥಿಸುತ್ತಿದ್ದಾರೆ.

Happy Birthday Virat Kohli: ಕಿಂಗ್ ಕೊಹ್ಲಿಗೆ ಹುಟ್ಟುಹಬ್ಬದ ಸಂಭ್ರಮ: 33ನೇ ವಸಂತಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ನಾಯಕ ವಿರಾಟ್​

WI vs SL, T20 WC: ಹಾಲಿ ಚಾಂಪಿಯನ್ ವೆಸ್ಟ್​ ಇಂಡೀಸ್ ಟೂರ್ನಿಯಿಂದ ಔಟ್: ನಿವೃತ್ತಿ ಘೋಷಿಸಲು ಮುಂದಾದ ಡ್ವೇನ್ ಬ್ರಾವೋ

(Virat Kohli Team India Play another must-win contest against Scotland in T20 World Cup)

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?