AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಏನ್ ಆಡ್ತಿರೋ… RCB ಆಟಗಾರರ ಮೇಲೆ ಕೋಪಗೊಂಡು ಕ್ಯಾಪ್ ಎಸೆದ ವಿರಾಟ್ ಕೊಹ್ಲಿ

IPL 2025 MI vs RCB: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2025) ಸೀಸನ್-18ರ 20ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ತಂಡ ಭರ್ಜರಿ ರೋಚಕ ಜಯ ಸಾಧಿಸಿದೆ.

VIDEO: ಏನ್ ಆಡ್ತಿರೋ... RCB ಆಟಗಾರರ ಮೇಲೆ ಕೋಪಗೊಂಡು ಕ್ಯಾಪ್ ಎಸೆದ ವಿರಾಟ್ ಕೊಹ್ಲಿ
Virat Kohli
ಝಾಹಿರ್ ಯೂಸುಫ್
|

Updated on:Apr 08, 2025 | 5:46 PM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರೋಚಕ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ (67) (Virat Kohli) ಅತ್ಯುತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ರಜತ್ ಪಾಟಿದಾರ್ 64 ರನ್ ಬಾರಿಸಿದರೆ, ಜಿತೇಶ್ ಶರ್ಮಾ 40 ರನ್ ಸಿಡಿಸಿದರು. ಈ ಮೂಲಕ ಆರ್​ಸಿಬಿ 20 ಓವರ್​ಗಳಲ್ಲಿ 221 ರನ್​ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 38 ರನ್​ಗಳಿಸುವಷ್ಟರಲ್ಲಿ ಆರಂಭಿಕರಿಬ್ಬರನ್ನು ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ರನ್​ಗಳಿಸಲು ಪರದಾಡಿದರು. ಅದರಲ್ಲೂ ಸೂರ್ಯಕುಮಾರ್ ನೀಡಿದ ಸುಲಭ ಕ್ಯಾಚ್​ಗಳನ್ನು ಆರ್​ಸಿಬಿ ಆಟಗಾರರು ಕೈಚೆಲ್ಲಿದರು.

ಕೋಪಗೊಂಡ ವಿರಾಟ್ ಕೊಹ್ಲಿ:

ಸುಯಶ್ ಶರ್ಮಾ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ನೀಡಿದ ಕ್ಯಾಚ್​ವೊಂದನ್ನು ಬೌಂಡರಿ ಲೈನ್​ನಲ್ಲಿ ಹಿಡಿಯಲು ಕೃನಾಲ್ ಪಾಂಡ್ಯ ವಿಫಲರಾಗಿದ್ದರು. ಈ ಜೀವದಾನದ ಬೆನ್ನಲ್ಲೇ ಮತ್ತೊಂದು ಸುಲಭ ಕ್ಯಾಚ್​ವೊಂದನ್ನು ಆರ್​ಸಿಬಿ ಆಟಗಾರರು ಕೈ ಬಿಟ್ಟಿದ್ದರು.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಯಶ್ ದಯಾಳ್ ಎಸೆದ ಮುಂಬೈ ಇನಿಂಗ್ಸ್​ನ 12ನೇ ಓವರ್​ನಲ್ಲಿ ಸೂರ್ಯಕುಮಾರ್ ಯಾದವ್ ಭರ್ಜರಿ ಹೊಡೆತಕ್ಕೆ ಮುಂದಾಗಿದ್ದರು. ಆದರೆ ಚೆಂಡು ಬೌಲರ್​ ಬಳಿಯೇ ಗಾಳಿಯಲ್ಲಿ ಚಿಮ್ಮಿತು. ಇತ್ತ ಯಶ್ ದಯಾಳ್ ಕ್ಯಾಚ್ ಹಿಡಿಯಲು ಮುಂದಾದರೆ, ಅತ್ತ ಕಡೆಯಿಂದ ವಿಕೆಟ್ ಕೀಪರ್ ಜಿತೇಶ್ ಶರ್ಮಾ ಕ್ಯಾಚ್​ಗಾಗಿ ಓಡಿ ಬಂದರು.

ಇದನ್ನೂ ಓದಿ: ಒಂದು ಬೌಂಡರಿಗೆ 19 ಎಸೆತಗಳು: ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಧೋನಿ

ಆದರೆ ಜಿತೇಶ್ ಶರ್ಮಾ ಆಗಮಿಸಿರುವುದನ್ನು ಯಶ್ ದಯಾಳ್ ಗಮನಿಸಿರಲಿಲ್ಲ. ಪರಿಣಾಮ ಇಬ್ಬರು ಡಿಕ್ಕಿಯಾಗಿ ಸುಲಭ ಕ್ಯಾಚ್ ಅನ್ನು ಕೈಚೆಲ್ಲಿದರು. ಇತ್ತ ಸೂರ್ಯಕುಮಾರ್ ಯಾದವ್ ಕ್ಯಾಚ್ ಕೈತಪ್ಪುತ್ತಿದ್ದಂತೆ ವಿರಾಟ್ ಕೊಹ್ಲಿಯ ಸಿಟ್ಟು ನೆತ್ತಿಗೇರಿದೆ. ಅಲ್ಲದೆ ಇದೇ ಕೋಪದಿಂದ ತನ್ನ ಕ್ಯಾಪ್​ ಅನ್ನು ನೆಲಕ್ಕೆ ಎಸೆಯುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇದೀಗ ವಿರಾಟ್ ಕೊಹ್ಲಿಯ ಕೋಪ ತಾಪದ ವಿಡಿಯೋ ವೈರಲ್ ಆಗಿದೆ.

ವಿರಾಟ್ ಕೊಹ್ಲಿ ವಿಡಿಯೋ:

ಈ ಪಂದ್ಯದಲ್ಲಿ ಆರ್​ಸಿಬಿ ಕೆಲ ಕ್ಯಾಚ್​ಗಳನ್ನು ಕೈ ಚೆಲ್ಲಿದರೂ. ಫಿಲ್ ಸಾಲ್ಟ್ ಅತ್ಯದ್ಭುತ ಕ್ಯಾಚ್ ಹಿಡಿಯುವ ಮೂಲಕ ನಿಬ್ಬೆರಗಾಗಿಸಿದ್ದರು. ಈ ಕ್ಯಾಚ್ ಕೂಡ ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು.

ಫಿಲ್​ ಸಾಲ್ಟ್ ಕ್ಯಾಚ್ ವಿಡಿಯೋ:

ಇನ್ನು ಈ ಪಂದ್ಯದಲ್ಲಿ 222 ರನ್​ಗಳ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು ಅಂತಿಮವಾಗಿ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 12 ರನ್​ಗಳ ಗೆಲುವು ದಾಖಲಿಸಿದೆ.

Published On - 6:55 am, Tue, 8 April 25

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ