Virat Kohli: ರಾಸ್ ಟೇಲರ್ ವಿಶ್ವ ದಾಖಲೆ ಸರಿಗಟ್ಟಿದ ಕಿಂಗ್ ಕೊಹ್ಲಿ..!

Virat Kohli: ರೋಹಿತ್ ಶರ್ಮಾ ಬಳಿಕ ಟೀಮ್ ಇಂಡಿಯಾ ಪರ 100 ಟಿ20 ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ಬರೆದಿದ್ದಾರೆ.

Virat Kohli: ರಾಸ್ ಟೇಲರ್ ವಿಶ್ವ ದಾಖಲೆ ಸರಿಗಟ್ಟಿದ ಕಿಂಗ್ ಕೊಹ್ಲಿ..!
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 29, 2022 | 3:55 PM

Asia Cup 2022: ದುಬೈ ಇಂಟರ್​ನ್ಯಾಷನಲ್​ ಮೈದಾನದಲ್ಲಿ ಭಾನುವಾರ ನಡೆದ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿತ್ತು. ವಿಶೇಷ ಎಂದರೆ ಇದು ವಿರಾಟ್ ಕೊಹ್ಲಿ ಪಾಲಿನ 100ನೇ ಟಿ20 ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕಿಂಗ್ ಕೊಹ್ಲಿ ಕ್ರಿಕೆಟ್ ಇತಿಹಾಸ ಅಪರೂಪದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಂದರೆ ಮೂರು ಮಾದರಿ ಕ್ರಿಕೆಟ್​ನಲ್ಲಿ 100 ಪಂದ್ಯಗಳನ್ನಾಡಿದ ವಿಶ್ವದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

ಅಂದರೆ 100 ಟೆಸ್ಟ್, 100 ಏಕದಿನ ಮತ್ತು 100 ಟಿ20 ಪಂದ್ಯವಾಡಿದ ಭಾರತದ ಮೊದಲ ಆಟಗಾರ ಹಾಗೂ ವಿಶ್ವದ ಎರಡನೇ ಕ್ರಿಕೆಟಿಗ ಎಂಬ ವಿಶ್ವ ದಾಖಲೆಯನ್ನು ಕೊಹ್ಲಿ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ನ್ಯೂಜಿಲೆಂಡ್​ನ ರಾಸ್ ಟೇಲರ್ ಮೂರು ಮಾದರಿಯಲ್ಲೂ 100 ಪಂದ್ಯಗಳನ್ನಾಡಿದ್ದರು. ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದ ಟೇಲರ್ 112 ಟೆಸ್ಟ್, 236 ಏಕದಿನ ಹಾಗೂ 102 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಈ ಮೂಲಕ ಮೂರು ಮಾದರಿಯ ಕ್ರಿಕೆಟ್​ನಲ್ಲಿ 100 ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು.

ಇದೀಗ ವಿರಾಟ್ ಕೊಹ್ಲಿ 100 ಟಿ20 ಪಂದ್ಯ, 262 ಏಕದಿನ ಹಾಗೂ 102 ಟೆಸ್ಟ್​ ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ರಾಸ್ ಟೇಲರ್​ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ ಮೊದಲ ಕ್ರಿಕೆಟಿಗ ಎಂಬ ದಾಖಲೆ ನಿರ್ಮಿಸಿದ್ದಾರೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ರೋಹಿತ್ ಶರ್ಮಾ ಬಳಿಕ ಟೀಮ್ ಇಂಡಿಯಾ ಪರ 100 ಟಿ20 ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ಬರೆದಿದ್ದಾರೆ. ಭಾರತದ ಪರ ರೋಹಿತ್ ಶರ್ಮಾ 132 ಟಿ20 ಪಂದ್ಯಗಳನ್ನಾಡಿದ್ದಾರೆ. ಇದೀಗ ಕೊಹ್ಲಿ ನೂರು ಪಂದ್ಯಗಳಲ್ಲಿ ಕಣಕ್ಕಿಳಿದು ಈ ಸಾಧನೆ ಮಾಡಿದ 2ನೇ ಭಾರತೀಯ ಎನಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ 100 ಟಿ20 ಪಂದ್ಯಗಳಲ್ಲಿ 92 ಇನಿಂಗ್ಸ್​ಗಳನ್ನು ಆಡಿರುವ ವಿರಾಟ್ ಕೊಹ್ಲಿ, 50 ಸರಾಸರಿಯಲ್ಲಿ 3343 ರನ್ ಕಲೆಹಾಕಿದ್ದಾರೆ. ಈ ವೇಳೆ 30 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ವಿಶ್ವದ ಮೂರನೇ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಪಾಕ್ ವಿರುದ್ದ ಕಣಕ್ಕಿಳಿಯುವ ಮೂಲಕ ಅಪರೂಪದ ವಿಶ್ವ ದಾಖಲೆಯನ್ನು ನಿರ್ಮಿಸುವ ಮೂಲಕ ಕಿಂಗ್ ಕೊಹ್ಲಿ ತಮ್ಮ ಹೆಸರಿಗೆ ಮತ್ತೊಂದು ದಾಖಲೆಯನ್ನು ಸೇರ್ಪಡೆಗೊಳಿಸಿದ್ದಾರೆ.

ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ
ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್
ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್