- Kannada News Sports Cricket news Virat Kohli to joined Sachin Tendulkar, MS Dhoni, Yuvraj Singh in elite list
Virat Kohli: ಮೈದಾನಕ್ಕಿಳಿಯುವ ಮೂಲಕ ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ
Virat Kohli: 259 ಏಕದಿನ ಪಂದ್ಯವಾಡಿರುವ ಕೊಹ್ಲಿ ಇದೀಗ ಭಾರತದಲ್ಲೇ 100 ಏಕದಿನ ಪಂದ್ಯವಾಡಿದ ವಿಶೇಷ ಸಾಧಕರ ಸಾಲಿಗೆ ಸೇರ್ಪಡೆಯಾಗಿದ್ದಾರೆ.
Updated on: Feb 09, 2022 | 3:35 PM

ಭಾರತ-ವೆಸ್ಟ್ ಇಂಡೀಸ್ ನಡುವಣ 2ನೇ ಏಕದಿನ ಪಂದ್ಯದ ಮೂಲಕ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 30 ಎಸೆತಗಳಲ್ಲಿ 18 ರನ್ ಬಾರಿಸಿ ಔಟಾಗಿದ್ದರು.

ಆದರೆ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕೊಹ್ಲಿ ತವರಿನಲ್ಲಿ 100 ಏಕದಿನ ಪಂದ್ಯವಾಡಿದ ವಿಶೇಷ ದಾಖಲೆ ಮಾಡಿದರು. 259 ಏಕದಿನ ಪಂದ್ಯವಾಡಿರುವ ಕೊಹ್ಲಿ ಇದೀಗ ಭಾರತದಲ್ಲೇ 100 ಏಕದಿನ ಪಂದ್ಯವಾಡಿದ ವಿಶೇಷ ಸಾಧಕರ ಸಾಲಿಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ 5ನೇ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಟೀಮ್ ಇಂಡಿಯಾ ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ, ಮೊಹಮ್ಮದ್ ಅಜರುದ್ದೀನ್ ಮತ್ತು ಯುವರಾಜ್ ಸಿಂಗ್ ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ವಿಶೇಷ ಪಟ್ಟಿಗೆ ವಿರಾಟ್ ಕೊಹ್ಲಿ ಕೂಡ ಎಂಟ್ರಿಯಾಗಿದ್ದಾರೆ.

ಸಚಿನ್ ತೆಂಡೂಲ್ಕರ್ ಭಾರತದಲ್ಲಿ 164 ಏಕದಿನ ಪಂದ್ಯಗಳನ್ನಾಡುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಮಹೇಂದ್ರ ಸಿಂಗ್ ಧೋನಿ (127 ಪಂದ್ಯಗಳು) 2ನೇ ಸ್ಥಾನದಲ್ಲಿದ್ದಾರೆ. ಇನ್ನು ಮೊಹಮ್ಮದ್ ಅಜರುದ್ದೀನ್ (113 ಪಂದ್ಯಗಳು) 3ನೇ ಸ್ಥಾನದಲ್ಲಿದ್ದರೆ, ಯುವರಾಜ್ ಸಿಂಗ್ (108 ಪಂದ್ಯಗಳು) ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇದೀಗ 33ನೇ ವಯಸ್ಸಿನಲ್ಲಿ ಭಾರತದಲ್ಲಿ 100 ಏಕದಿನ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಮುಂಬರುವ ದಿನಗಳಲ್ಲಿ ತವರಿನಲ್ಲಿ ಅತೀ ಹೆಚ್ಚು ಏಕದಿನ ಪಂದ್ಯವಾಡುವ ಮೂಲಕ ಹೊಸ ಇತಿಹಾಸ ನಿರ್ಮಿಸುವ ವಿಶ್ವಾಸದಲ್ಲಿದ್ದಾರೆ.
