Virat Kohli: ಧೋನಿ ಫಿನಿಶಿಂಗ್ ಆಟ ಕಂಡು ಬೆರಗಾದ ವಿರಾಟ್ ಕೊಹ್ಲಿ: ಏನಂದ್ರು ಗೊತ್ತೇ?
MS Dhoni, DC vs CSK IPL 2021: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ಎಂ. ಎಸ್ ಧೋನಿ ಅವರನ್ನು ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಡಿ ಹೊಗಳಿದ್ದಾರೆ.
ಐಪಿಎಲ್ 2020 (IPL 2020) ರಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿದ್ದ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡ ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿತ್ತು. ಆದರೆ, ಆ ಸಂದರ್ಭ ನಾಯಕ ಎಂ ಎಸ್ ಧೋನಿ (MS Dhoni) ಒಂದು ಮಾತನ್ನೇಳಿದ್ದರು. ಮುಂದಿನ ಆವೃತ್ತಿಯಲ್ಲಿ ನಾವು ಖಂಡಿತ ಕಮ್ಬ್ಯಾಕ್ ಮಾಡುತ್ತೇವೆ ಎಂದು. ಸಿಎಸ್‌ಕೆ (CSK) ಈ ಮಾತನ್ನು ಅಕ್ಷರಶಹಃ ನಿಜವಾಗಿಸಿದೆ. ಮೂರು ಬಾರಿಯ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ದಾಖಲೆಯ 9ನೇ ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಇತಿಹಾಸದಲ್ಲಿ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2021ರ (IPL 2021) ಮೊದಲ ಕ್ವಾಲಿಫೈಯರ್ (Qualifier 1) ಪಂದ್ಯದಲ್ಲಿ ಬೊಂಬಾಟ್ ಪ್ರದರ್ಶನ ತೋರಿದ ಸಿಎಸ್‌ಕೆ ಡೆಲ್ಲಿ ಕ್ಯಾಪಿಟಲ್ಸ್ (DC vs CSK) ತಂಡವನ್ನು 4 ವಿಕೆಟ್‌ಗಳಿಂದ ಮಣಿಸಿ ಫೈನಲ್‌ಗೆ ದಾಪುಗಾಲಿಟ್ಟಿತು.
ರುತುರಾಜ್ ಗಾಯಕ್ವಾಡ್ ಮತ್ತು ರಾಬಿನ್ ಉತ್ತಪ್ಪ ಪಂದ್ಯವನ್ನು ಗೆಲುವಿನ ಅಂಚಿಗೆ ತಂದಿಟ್ಟರೆ ಫಿನಿಶ್ ಮಾಡುವ ಜವಾಬ್ದಾರಿ ಹೊತ್ತಿದ್ದು ಎಂ. ಎಸ್ ಧೋನಿ. ತಮ್ಮ ನೈಜ ಆಟ ಪ್ರದರ್ಶಿಸಿದ ಧೋನಿ ಕೇವಲ 6 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 18 ರನ್ ಗಳಿಸಿ ಔಟಾಗದೆ ಉಳಿದರು. ಕೊನೆಯ ಹಂತದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ಎಂ. ಎಸ್ ಧೋನಿ ಅವರನ್ನು ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಡಿ ಹೊಗಳಿದ್ದಾರೆ.
ಪಂದ್ಯ ಮುಗಿದ ತಕ್ಷಣ ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ, ‘ಕಿಂಗ್ ಈಸ್ ಬ್ಯಾಕ್. ಗ್ರೆಟೆಸ್ಟ್ ಫಿನಿಶರ್ ಆಟಕ್ಕೆ ಮರಳಿದ್ದಾನೆ. ಸೀಟಿನ ತುದಿಯಲ್ಲಿ ಕುಳಿತು ಆಟ ನೊಡುವ ಅವಕಾಶ ಸಿಕ್ಕಿತು. ಈ ರಾತ್ರಿ ನಾನು ಮತ್ತೊಮ್ಮೆ ಕುಳಿತಲ್ಲಿಂದ ಎದ್ದು ಜಿಗಿಯುವಂತಾಯಿತು’ ಎಂದು ಬರೆದು ಧೋನಿ ಅವರನ್ನು ಟ್ಯಾಗ್ ಮಾಡಿದ್ದಾರೆ.
Anddddd the king is back ❤️the greatest finisher ever in the game. Made me jump Outta my seat once again tonight.@msdhoni
— Virat Kohli (@imVkohli) October 10, 2021
ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ, ಪೃಥ್ವಿ ಷಾ (60 ರನ್, 34 ಎಸೆತ, 7 ಬೌಂಡರಿ, 3 ಸಿಕ್ಸರ್) ಹಾಗೂ ನಾಯಕ ರಿಷಭ್ ಪಂತ್ (51*ರನ್, 35 ಎಸೆತ, 3 ಬೌಂಡರಿ, 2 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ಫಲವಾಗಿ 5 ವಿಕೆಟ್‌ಗೆ 172 ರನ್‌ಗಳಿಸಿತು. ಪ್ರತಿಯಾಗಿ ಸಿಎಸ್‌ಕೆ 19.4 ಓವರ್‌ಗಳಲ್ಲಿ 6 ವಿಕೆಟ್‌ಗೆ 173 ರನ್‌ಗಳಿಸಿ ಜಯದ ನಗೆ ಬೀರಿತು.
ಚೆನ್ನೈ ಪರ ರಾಬಿನ್ ಉತ್ತಪ್ಪ (63 ರನ್, 44ಎಸೆತ, 7 ಬೌಂಡರಿ, 2 ಸಿಕ್ಸರ್) ಹಾಗೂ ಆರಂಭಿಕ ರುತುರಾಜ್ ಗಾಯಕ್ವಾಡ್ (70 ರನ್, 50 ಎಸೆತ, 5 ಬೌಂಡರಿ, 2 ಸಿಕ್ಸರ್) ಜೋಡಿಯ ಪ್ರತಿಹೋರಾಟದ ಫಲವಾಗಿ ಐಪಿಎಲ್ 14ನೇ ಆವೃತ್ತಿಯ ಫೈನಲ್‌ಗೇರಿದೆ. ಇಲ್ಲಿ ಡೆಲ್ಲಿ ತಂಡ ಸೋತರೂ ಫೈನಲ್‌ಗೇರಲು ಇನ್ನೊಂದು ಅವಕಾಶವಿದ್ದು, ಆರ್‌ಸಿಬಿ-ಕೆಕೆಆರ್ ನಡುವಿನ ವಿಜೇತರನ್ನು ಬುಧವಾರ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎದುರಿಸಲಿದೆ.
IPL 2021 Eliminator, RCB vs KKR: ಇಂದು ಆರ್‌ಸಿಬಿ-ಕೆಕೆಆರ್ ನಡುವೆ ಎಲಿಮಿನೇಟರ್ ಪಂದ್ಯ: ಸೋತರೆ ಟೂರ್ನಿಯಿಂದ ಔಟ್
DC vs CSK, IPL 2021 Qualifier 1: ಸೂಪರ್ ಗೆಲುವಿನೊಂದಿಗೆ ಫೈನಲ್‌ಗೆ ಎಂಟ್ರಿಕೊಟ್ಟ ಚೆನ್ನೈ ಸೂಪರ್ ಕಿಂಗ್ಸ್
(Virat Kohli took to Twitter to share his excitement seeing MS Dhoni do what he does again on DC vs CSK IPL 2021 Match)