AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಣಕಲು ಯತ್ನಿಸಿದ ಕೊಹ್ಲಿ, ಡೋಂಟ್ ಕೇರ್ ಎಂದ ಫಿಲಿಪ್ಸ್​!

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 40.2 ಓವರ್​ಗಳಲ್ಲಿ 185 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಭಾರತ ತಂಡ 22.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಕೆಣಕಲು ಯತ್ನಿಸಿದ ಕೊಹ್ಲಿ, ಡೋಂಟ್ ಕೇರ್ ಎಂದ ಫಿಲಿಪ್ಸ್​!
Virat Kohli - Glenn PhilipsImage Credit source: Sony Sports
ಝಾಹಿರ್ ಯೂಸುಫ್
|

Updated on: Nov 05, 2026 | 12:05 PM

Share

ವಿರಾಟ್ ಕೊಹ್ಲಿ ಮೈದಾನದಲ್ಲಿ ಕೇವಲ ಬ್ಯಾಟಿಂಗ್ ಮಾತ್ರವಲ್ಲದೆ, ತಮ್ಮ ವಿಭಿನ್ನ ನಡೆ ಹಾಗೂ ವರ್ತನೆಗಳಿಂದಲೂ ಪ್ರೇಕ್ಷಕರ ಗಮನ ಸೆಳೆಯುತ್ತಿರುತ್ತಾರೆ. ಆಕ್ಲೆಂಡ್​ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೂ ಅಂತಹದ್ದೇ ಒಂದು ಹಾವಭಾವ ಪ್ರದರ್ಶಿಸಿರುವ ಅವರು, ಕಿವೀಸ್ ಬ್ಯಾಟರ್ ಗ್ಲೆನ್ ಫಿಲಿಪ್ಸ್ ಅವರನ್ನು ಕೆಣಕಲು ಯತ್ನಿಸಿದ್ದಾರೆ.

WWE ದಿಗ್ಗಜ ಜಾನ್ ಸೀನಾ ಅವರ ಪ್ರಸಿದ್ಧ “ಯೂ ಕಾಂಟ್ ಸೀ ಮೀ” ಹಾವಭಾವವನ್ನು ಪ್ರದರ್ಶಿಸಿದ ಕೊಹ್ಲಿ, ಕ್ರೀಸ್‌ಗೆ ಆಗಮಿಸುತ್ತಿದ್ದ ಬ್ಯಾಟರ್ ಗ್ಲೆನ್ ಫಿಲಿಪ್ಸ್ ಎದುರು ಈ ಸವಾಲಿನ ನಡೆ ತೋರುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.”

ಆಕ್ಲೆಂಡ್‌ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆದ ಈ ತಮಾಷೆಯ ಪ್ರಸಂಗದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

WWE ಮ್ಯೂಸಿಕ್​ಗೆ ಕೊಹ್ಲಿ ಎಂಟ್ರಿ!

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಮಧ್ಯಮ ಕ್ರಮಾಂಕದ ಬ್ಯಾಟರ್ ಗ್ಲೆನ್ ಫಿಲಿಪ್ಸ್ ಕ್ರೀಸ್‌ಗೆ ಆಗಮಿಸಿದರು. ವಿಶೇಷವೆಂದರೆ, ಫಿಲಿಪ್ಸ್ ಬ್ಯಾಟಿಂಗ್‌ಗೆ ಬರುವಾಗ ಸ್ಟೇಡಿಯಂನಲ್ಲಿ WWE ಸ್ಟಾರ್ ಜಾನ್ ಸೀನಾರ ಪ್ರಸಿದ್ಧ ಎಂಟ್ರಿ ಥೀಮ್ ಮ್ಯೂಸಿಕ್ “ದಿ ಟೈಮ್ ಈಸ್ ನೌ” ಪ್ಲೇ ಮಾಡಿದ್ದರು.

ಸ್ಟೇಡಿಯಂನಲ್ಲಿ ಜಾನ್ ಸೀನಾ ಮ್ಯೂಸಿಕ್ ಮೊಳಗುತ್ತಿದ್ದಂತೆ ಅಲರ್ಟ್ ಆದ ವಿರಾಟ್ ಕೊಹ್ಲಿ, ಇದನ್ನು ಕೇವಲವಾಗಿ ಬಿಡಲಿಲ್ಲ. ಫಿಲಿಪ್ಸ್ ಗಾರ್ಡ್ ತಗೆದುಕೊಳ್ಳಲು ನಡೆಯುತ್ತಿದ್ದಾಗ, ಅವರ ಮುಂದೆಯೇ ಸಾಗಿದ ಕೊಹ್ಲಿ ತಮ್ಮ ಕೈಯನ್ನು ಮುಖದ ಮುಂದೆ ಆಡಿಸುವ ಮೂಲಕ ಜಾನ್ ಸೀನಾರ ಸಿಗ್ನೇಚರ್ ಸ್ಟೆಪ್ ಹಾಕಿ ಕೆಣಕಲು ಯತ್ನಿಸಿದರು.

ಇತ್ತ ವಿರಾಟ್ ಕೊಹ್ಲಿ ತಮ್ಮನ್ನು ಕೆಣಕಲು ಮುಂದಾಗಿರುವುದನ್ನು ಅರಿತರೂ ಗ್ಲೆನ್ ಫಿಲಿಪ್ಸ್, ಡೋಂಟ್ ಕೇರ್ ಹಾವಭಾವದಲ್ಲಿ ಡ್ಯಾರಿಲ್ ಮಿಚೆಲ್ ಜೊತೆ ಮಾತುಕತೆಯಲ್ಲಿ ತೊಡಗಿಕೊಂಡರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಒಟ್ಟಾರೆಯಾಗಿ, ಮೈದಾನದಲ್ಲಿ ವಿರಾಟ್ ಕೊಹ್ಲಿ ತೋರಿದ ಈ ಆಕ್ರಮಣಕಾರಿ ಹಾಗೂ ತಮಾಷೆಯ ನಡೆ ಮತ್ತು ಅದಕ್ಕೆ ಫಿಲಿಪ್ಸ್ ನೀಡಿದ ಶಾಂತ ಪ್ರತಿಕ್ರಿಯೆ ಕ್ರಿಕೆಟ್ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಸಖತ್ ಸೌಂಡ್ ಮಾಡುತ್ತಿದ್ದು, ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಪೈಪೋಟಿಗೆ ಮತ್ತಷ್ಟು ರಂಗು ತಂದಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ರಾಮಾಯಣ’ ಸಿನಿಮಾ ನೋಡಿದ ಯಶ್ ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲ: ವಿಡಿಯೋ
‘ರಾಮಾಯಣ’ ಸಿನಿಮಾ ನೋಡಿದ ಯಶ್ ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲ: ವಿಡಿಯೋ
ನಂಜನಗೂಡಿನ ಆಕಳ ಸುತ್ತಮುತ್ತ ನಾಲ್ಕು ಹುಲಿಗಳ ಓಡಾಟ
ನಂಜನಗೂಡಿನ ಆಕಳ ಸುತ್ತಮುತ್ತ ನಾಲ್ಕು ಹುಲಿಗಳ ಓಡಾಟ
ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್​​ಗೆ ನುಗ್ಗಿದ ನೀರು
ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್​​ಗೆ ನುಗ್ಗಿದ ನೀರು
‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್
‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್
ಸೌಂದರ್ಯಾ-ಧನುಷ್​​ಗೆ ಓಪನ್ ಆಯ್ತು ಬಿಗ್ ಬಾಸ್ ಮುಖ್ಯದ್ವಾರ
ಸೌಂದರ್ಯಾ-ಧನುಷ್​​ಗೆ ಓಪನ್ ಆಯ್ತು ಬಿಗ್ ಬಾಸ್ ಮುಖ್ಯದ್ವಾರ
ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ
ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ
ಈ ರಾಶಿಯವರ ಆದಾಯ ವೃದ್ಧಿ ಮತ್ತು ಜವಾಬ್ದಾರಿಗಳು ಹೆಚ್ಚಾಗಲಿ
ಈ ರಾಶಿಯವರ ಆದಾಯ ವೃದ್ಧಿ ಮತ್ತು ಜವಾಬ್ದಾರಿಗಳು ಹೆಚ್ಚಾಗಲಿ
ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು
ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ