AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೆಲ್ಲ ನಂಗೆ ಇಷ್ಟ ಆಗಲ್ಲ… ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಖಡಕ್ ಸೂಚನೆ

India vs New Zealand, 1st ODI: ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 50 ಓವರ್​ಗಳಲ್ಲಿ 300 ರನ್ ಬಾರಿಸಿದರೆ, ಟೀಮ್ ಇಂಡಿಯಾ 49 ಓವರ್​ಗಳಲ್ಲಿ 306 ರನ್​ಗಳಿಸಿ ಭರ್ಜರಿ ಜಯ ಸಾಧಿಸಿದೆ.

ಇದೆಲ್ಲ ನಂಗೆ ಇಷ್ಟ ಆಗಲ್ಲ... ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಖಡಕ್ ಸೂಚನೆ
Virat Kohli
ಝಾಹಿರ್ ಯೂಸುಫ್
|

Updated on:Jan 12, 2026 | 10:54 AM

Share

ವಡೋದರಾದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬಳಿಕ ವಿರಾಟ್ ಕೊಹ್ಲಿ ಅಭಿಮಾನಿಗಳ ವರ್ತನೆಗೆ ಅಸಮಾಧಾನ ಹೊರಹಾಕಿದ್ದಾರೆ. ಈ ಪಂದ್ಯದಲ್ಲಿ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50ನ ಓವರ್​ಗಳಲ್ಲಿ 300 ರನ್ ಕಲೆಹಾಕಿದ್ದರು.

301 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್​​ಮನ್ ಗಿಲ್ ಕಣಕ್ಕಿಳಿದಿದ್ದರು. ಭಾರತ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ಯಶಸ್ವಿಯಾದರೂ ಹಿಟ್​ಮ್ಯಾನ್ ಕೇವಲ 26 ರನ್​ಗಳಿಸಿ ಔಟಾಗಿದ್ದರು.

ಇತ್ತ ರೋಹಿತ್ ಶರ್ಮಾ ಔಟಾಗಿ ಪೆವಿಲಿಯನ್​ಗೆ ಮರಳುತ್ತಿದ್ದಂತೆ ವಿರಾಟ್ ಕೊಹ್ಲಿ ಮೈದಾನಕ್ಕೆ ಆಗಮಿಸಿದ್ದರು. ಆದರೆ ಅದಕ್ಕೂ ಮುನ್ನ ಬಿಸಿಎ ಸ್ಟೇಡಿಯಂನಲ್ಲಿ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಅಂದರೆ ರೋಹಿತ್ ಶರ್ಮಾ ಔಟಾಗುತ್ತಿದ್ದಂತೆ ಅಭಿಮಾನಿಗಳು ವಿರಾಟ್ ಕೊಹ್ಲಿ ಬ್ಯಾಟಿಂಗ್​ಗೆ ಬರಲಿದ್ದಾರೆಂದು ಸಂಭ್ರಮಿಸಲಾರಂಭಿಸಿದ್ದರು.

ಇವೆಲ್ಲನ್ನೂ ಗಮನಿಸಿದ ವಿರಾಟ್ ಕೊಹ್ಲಿ ಪಂದ್ಯದ ಬಳಿಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಮ್ಯಾಚ್ ಮುಗಿದ ಬಳಿಕ ಈ ಬಗ್ಗೆ ಮಾತನಾಡಿದ ಕೊಹ್ಲಿ, ಭಾರತ ತಂಡದ ಮೊದಲ ವಿಕೆಟ್ ಬಿದ್ದಾಗ ಎಲ್ಲರೂ ಸಂಭ್ರಮಿಸುತ್ತಿದ್ದರು. ಔಟಾಗಿ ಹೋಗುವ ಬ್ಯಾಟರ್​ ಇಂತಹದ್ದೆಲ್ಲಾ ನೋಡಲು ಬಯಸುವುದಿಲ್ಲ.

ಪ್ರಾಮಾಣಿಕವಾಗಿ ಹೇಳಬೇಕೆಂದರೆ ನನಗೂ ಇಂತಹ ಸಂಭ್ರಮ ಇಷ್ಟವಾಗುವುದಿಲ್ಲ. ಐಪಿಎಲ್​ನಲ್ಲಿ ಮಹೇಂದ್ರ ಸಿಂಗ್ ಧೋನಿ ವಿಚಾರದಲ್ಲೂ ಇದೇ ರೀತಿ ಆಗಿರುವುದನ್ನು ನಾನು ನೋಡಿದ್ದೀನಿ. ಈ ರೀತಿಯ ಸಂಭ್ರಮ ಔಟಾಗಿ ಹೋಗುವ ಬ್ಯಾಟರ್​ಗೆ ಉತ್ತಮ ಭಾವನೆ ಮೂಡಿಸುವುದಿಲ್ಲ.

ನನಗಂತೂ ಇಂತಹ ಸಂಭ್ರಮ ನಿಜವಾಗಿಯೂ ಇಷ್ಟವಾಗಲ್ಲ. ಹೀಗಾಗಿ ಇಂತಹ ಸಂಭ್ರಮವನ್ನು ನಿಲ್ಲಿಸಬೇಕೆಂದು ವಿರಾಟ್ ಕೊಹ್ಲಿ ಪರೋಕ್ಷವಾಗಿ ಅಭಿಮಾನಿಗಳಿಗೆ ಸೂಚಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 91 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 93 ರನ್ ಬಾರಿಸಿ ಔಟಾದರು. ಈ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 49 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 306 ರನ್​ಗಳಿಸಿತು. ಈ ಮೂಲಕ ಭಾರತ ತಂಡವು ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ನಲ್ಲಿ 4 ವಿಕೆಟ್​ಗಳ ಜಯ ಸಾಧಿಸಿದೆ.

ಇದನ್ನೂ ಓದಿ: ಜೊತೆಯಾಗಿ ಕಣಕ್ಕಿಳಿದು ಹೊಸ ವಿಶ್ವ ದಾಖಲೆ ಬರೆದ ತಂದೆ-ಮಗ

ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದರು. ಇದು ಕಿಂಗ್ ಕೊಹ್ಲಿಯ 71ನೇ ಪ್ಲೇಯರ್ ಆಫ್ ದಿ ಮ್ಯಾಚ್ ಅವಾರ್ಡ್ ಎಂಬುದು ವಿಶೇಷ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ (76) ಅಗ್ರಸ್ಥಾನದಲ್ಲಿದ್ದು, ಮುಂಬರುವ ಪಂದ್ಯಗಳ ಮೂಲಕ ಸಚಿನ್ ಅವರ ಈ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದರೂ ಅಚ್ಚರಿಪಡಬೇಕಿಲ್ಲ.

Published On - 10:54 am, Mon, 12 January 26

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ