AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB…RCB ಎಂದು ಕೂಗಿದ ಅಭಿಮಾನಿಗಳಿಗೆ ಖಡಕ್ ಸೂಚನೆ ನೀಡಿದ ವಿರಾಟ್ ಕೊಹ್ಲಿ

Virat Kohli: ವಿರಾಟ್ ಕೊಹ್ಲಿಗೆ ಇಂತಹ ಅನುಭವ ಇದು ಮೊದಲೇನಲ್ಲ. ಈ ಹಿಂದೆ ಅಂದರೆ ಕಳೆದ ವರ್ಷ ನಡೆದ ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯ ವೇಳೆಯೂ ಆರ್​ಸಿಬಿ ಅಭಿಮಾನಿಗಳು ಘೋಷವಾಕ್ಯ ಮೊಳಗಿಸಿದ್ದರು.

Virat Kohli: RCB...RCB ಎಂದು ಕೂಗಿದ ಅಭಿಮಾನಿಗಳಿಗೆ ಖಡಕ್ ಸೂಚನೆ ನೀಡಿದ ವಿರಾಟ್ ಕೊಹ್ಲಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 21, 2023 | 5:35 PM

Share

India vs Australia: ಭಾರತ-ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ (Team India)  2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಅದರಲ್ಲೂ ದೆಹಲಿ ಟೆಸ್ಟ್​ನಲ್ಲಿ ಭಾರತ ತಂಡವು 6 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿತ್ತು. ಇದೀಗ ಈ ಪಂದ್ಯದ ವಿಡಿಯೋ ಕ್ಲಿಪ್ಪಿಂಗ್​ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅರುಣ್ ಜೇಟ್ಲಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದ ಆರ್​ಸಿಬಿ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ವೇಳೆ ಸ್ಟೇಡಿಯಂನಲ್ಲಿದ್ದ ಅಭಿಮಾನಿಗಳು ಆರ್​ಸಿಬಿ ಆರ್​ಸಿಬಿ…ಘೋಷವಾಕ್ಯ ಮೊಳಗಿಸಲಾರಂಭಿಸಿದರು. ಇತ್ತ ತಮ್ಮನೇ ನೋಡಿ ಆರ್​ಸಿಬಿ ಅಭಿಮಾನಿಗಳು ಘೋಷಣೆ ಕೂಗುತ್ತಿರುವುದು ವಿರಾಟ್ ಕೊಹ್ಲಿಗೂ ಸ್ಪಷ್ಟವಾಗಿತ್ತು.

ತಕ್ಷಣವೇ ವಿರಾಟ್ ಕೊಹ್ಲಿ ತಾನು ಧರಿಸಿರುವ ಭಾರತ ತಂಡದ ಜೆರ್ಸಿಯನ್ನು ತೋರಿಸಿದ್ದಾರೆ. ಅಲ್ಲದೆ ಆರ್‌ಸಿಬಿ ಬದಲಿಗೆ ಟೀಮ್ ಇಂಡಿಯಾವನ್ನು ಹುರಿದುಂಬಿಸಲು ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದರು. ಇದನ್ನು ಗಮನಿಸಿದ ಅಭಿಮಾನಿಗಳು ಆರ್​ಸಿಬಿ ಬದಲಿಗೆ ಇಂಡಿಯಾ, ಇಂಡಿಯಾ… ಎಂಬ ಘೋಷಣೆಗಳನ್ನು ಕೂಗಲಾರಂಭಿಸಿದರು. ಇತ್ತ ಖುಷಿ ವ್ಯಕ್ತಪಡಿಸಿದ ವಿರಾಟ್ ಕೊಹ್ಲಿ ಮತ್ತಷ್ಟು ಜೋರಾಗಿ ಕೂಗುವಂತೆ ಅಭಿಮಾನಿಗಳನ್ನು ಹುರಿದುಂಬಿಸಿದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಈ ಹಿಂದೆ ಕೂಡ ಬದ್ಧತೆ ಮರೆದಿದ್ದ ಕೊಹ್ಲಿ:

ವಿರಾಟ್ ಕೊಹ್ಲಿಗೆ ಇಂತಹ ಅನುಭವ ಇದೇ ಮೊದಲೇನಲ್ಲ. ಈ ಹಿಂದೆ ಅಂದರೆ ಕಳೆದ ವರ್ಷ ನಡೆದ ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯ ವೇಳೆಯೂ ಆರ್​ಸಿಬಿ ಅಭಿಮಾನಿಗಳು ಘೋಷವಾಕ್ಯ ಮೊಳಗಿಸಿದ್ದರು. ತಕ್ಷಣವೇ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಜೆರ್ಸಿ ಮೇಲಿರುವ ಲೋಗೋವನ್ನು ತೋರಿಸಿದರು. ಈ ಮೂಲಕ ನಾನು ಭಾರತವನ್ನು ಪ್ರತಿನಿಧಿಸುತ್ತಿದ್ದೇನೆ ಹೊರತು ಐಪಿಎಲ್ ಫ್ರಾಂಚೈಸಿ ಅಲ್ಲ ಎಂದು ಅಭಿಮಾನಿಗಳಿಗೆ ಸನ್ನೆ ಮಾಡಿದರು.

ಕೊಹ್ಲಿಯ ಸನ್ನೆಯನ್ನು ಗಮನಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಅಭಿಮಾನಿಗಳು ತಕ್ಷಣವೇ ಆರ್​ಸಿಬಿ ಘೋಷಣೆಗಳನ್ನು ನಿಲ್ಲಿಸಿದ್ದರು. ಇದೀಗ ದೆಹಲಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಫ್ರಾಂಚೈಸಿಯ ಬದಲಿಗೆ ಟೀಮ್ ಇಂಡಿಯಾವನ್ನು ಹುರಿದುಂಬಿಸುವಂತೆ ತಿಳಿಸಿ ಎಲ್ಲರ ಮನಗೆದ್ದಿದ್ದಾರೆ.

Published On - 5:35 pm, Tue, 21 February 23

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ