AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 15 ವರ್ಷಗಳ ನಂತರ ಡೆಲ್ಲಿ ಪರ ಕಣಕ್ಕಿಳಿಯಲಿರುವ ಕಿಂಗ್ ಕೊಹ್ಲಿ

Virat Kohli Vijay Hazare Trophy: ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಲು ಸಜ್ಜಾಗಿದ್ದಾರೆ. ದೆಹಲಿ ಸಂಭಾವ್ಯ ತಂಡದಲ್ಲಿ ಆಯ್ಕೆಯಾದ ಕೊಹ್ಲಿ, ರಿಷಭ್ ಪಂತ್ ಜೊತೆ ಕಣಕ್ಕಿಳಿಯಲಿದ್ದಾರೆ. 2027ರ ವಿಶ್ವಕಪ್ ದೃಷ್ಟಿಯಿಂದ ಕೊಹ್ಲಿಗೆ ಇದು ನಿರ್ಣಾಯಕವಾಗಿದೆ. ಇವರೊಂದಿಗೆ ರೋಹಿತ್ ಶರ್ಮಾ ಕೂಡ ಈ ದೇಶಿ ಟೂರ್ನಿಯಲ್ಲಿ ಆಡುವ ಸಾಧ್ಯತೆ ಇದೆ. ಇದು ದೇಶಿ ಕ್ರಿಕೆಟ್‌ಗೆ ಹೊಸ ಮೆರುಗು ನೀಡಲಿದೆ.

ಬರೋಬ್ಬರಿ 15 ವರ್ಷಗಳ ನಂತರ ಡೆಲ್ಲಿ ಪರ ಕಣಕ್ಕಿಳಿಯಲಿರುವ ಕಿಂಗ್ ಕೊಹ್ಲಿ
Virat Kohli
ಪೃಥ್ವಿಶಂಕರ
|

Updated on:Dec 11, 2025 | 6:08 PM

Share

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಫಾರ್ಮ್​ನ ಉತ್ತುಂಗದಲ್ಲಿದ್ದ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ( Virat Kohli) ಇದೀಗ ದೇಶಿ ಅಂಗಳಕ್ಕೆ ಬಹಳ ವರ್ಷಗಳ ಬಳಿಕ ಕಾಲಿಡಲು ಸಜ್ಜಾಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಆಡಲು ಕಿಂಗ್ ಕೊಹ್ಲಿ ಸಜ್ಜಾಗಿದ್ದಾರೆ. ಡಿಡಿಸಿಎ, ವಿರಾಟ್ ಕೊಹ್ಲಿಯನ್ನು ದೆಹಲಿ ಸಂಭಾವ್ಯ ವಿಜಯ್ ಹಜಾರೆ ತಂಡದಲ್ಲಿ ಆಯ್ಕೆ ಮಾಡಿದೆ. ವಿರಾಟ್ ಕೊಹ್ಲಿ ಮಾತ್ರವಲ್ಲದೆ, ರಿಷಭ್ ಪಂತ್ ಕೂಡ ದೆಹಲಿ ತಂಡದ ಸಂಭಾವ್ಯ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಸಮಯದಲ್ಲಿ ವಿರಾಟ್ ಕೊಹ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುವುದು ಖಚಿತವಾಗಿತ್ತು. ಅದರಂತೆ ಕೊಹ್ಲಿ ಈ ದೇಶಿ ಟೂರ್ನಿಯ ಮೂರು ಪಂದ್ಯಗಳಲ್ಲಿ ದೆಹಲಿ ಪರ ಆಡಬಹುದು ಎಂದು ವರದಿಯಾಗಿದೆ.

15 ವರ್ಷಗಳ ನಂತರ ವಿಜಯ್ ಹಜಾರೆಯಲ್ಲಿ ವಿರಾಟ್

ವಿರಾಟ್ ಕೊಹ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುವುದು ದೇಶಿ ಕ್ರಿಕೆಟ್​ನ ಮೆರಗನ್ನು ಮತ್ತಷ್ಟು ಹೆಚ್ಚಿಸಲಿದೆ. ಏಕೆಂದರೆ ಕಿಂಗ್ ಕೊಹ್ಲಿ 15 ವರ್ಷಗಳ ನಂತರ ಈ ಪಂದ್ಯಾವಳಿಯಲ್ಲಿ ಆಡುತ್ತಿದ್ದಾರೆ. ಕೊಹ್ಲಿ ಕೊನೆಯ ಬಾರಿಗೆ ಈ ಪಂದ್ಯಾವಳಿಯಲ್ಲಿ 2010 ರಲ್ಲಿ ಆಡಿದ್ದರು. ಕೊಹ್ಲಿ ಇದುವರೆಗೆ 13 ವಿಜಯ್ ಹಜಾರೆ ಪಂದ್ಯಗಳನ್ನು ಆಡಿದ್ದು, 819 ರನ್ ಗಳಿಸಿದ್ದಾರೆ. ಇದರಲ್ಲಿ ನಾಲ್ಕು ಶತಕಗಳು ಸೇರಿವೆ.

2027 ರ ವಿಶ್ವಕಪ್ ಮೇಲೆ ಕೊಹ್ಲಿ ಗಮನ

2027 ರ ವಿಶ್ವಕಪ್ ದೃಷ್ಟಿಯಿಂದ ಈ ದೇಶಿ ಟೂರ್ನಿ ವಿರಾಟ್ ಕೊಹ್ಲಿಗೆ ಬಹಳ ಮುಖ್ಯವಾಗಿದೆ. ಏಕೆಂದರೆ ಏಕದಿನ ಕ್ರಿಕೆಟ್‌ನಲ್ಲಿ ಉಳಿಯಲು ದೇಶೀಯ ಕ್ರಿಕೆಟ್ ಆಡುವಂತೆ ಕೊಹ್ಲಿಗೆ ಬಿಸಿಸಿಐ ಸಲಹೆ ನೀಡಿತ್ತು. ಆ ಪ್ರಕಾರ ಕೊಹ್ಲಿ ಇದೀಗ ಈ ಟೂರ್ನಿಯಲ್ಲಿ ಆಡಲಿದ್ದಾರೆ. ಆದಾಗ್ಯೂ, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಸಮಯದಲ್ಲಿ, ವಿರಾಟ್ ಕೊಹ್ಲಿ ತಮ್ಮ ತಯಾರಿ ದೈಹಿಕಕ್ಕಿಂತ ಮಾನಸಿಕವಾಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿ 307 ರನ್ ಕೂಡ ಬಾರಿಸಿದ್ದರು. ಇದರಲ್ಲಿ ಎರಡು ಸತತ ಶತಕಗಳು ಹಾಗೂ 1 ಅರ್ಧಶತಕವೂ ಸೇರಿತ್ತು.

IND vs SA: ‘ಹೌದು ಕಳೆದ 2-3 ವರ್ಷಗಳು..’ ಸರಣಿ ಶ್ರೇಷ್ಠ ಗೆದ್ದ ಬಳಿಕ ಕಿಂಗ್ ಕೊಹ್ಲಿ ಹೇಳಿದ್ದೇನು?

ವಿರಾಟ್ ಜೊತೆಗೆ ರೋಹಿತ್ ಶರ್ಮಾ

ವಿರಾಟ್ ಕೊಹ್ಲಿ ಮಾತ್ರವಲ್ಲ, ರೋಹಿತ್ ಶರ್ಮಾ ಕೂಡ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಲು ಸಜ್ಜಾಗಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನ ಮೂಲಗಳ ಪ್ರಕಾರ, ರೋಹಿತ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುವುದು ಖಚಿತ. ವಿರಾಟ್‌ನಂತೆಯೇ, ರೋಹಿತ್ ಕೂಡ ಒಂದೇ ಸ್ವರೂಪದಲ್ಲಿ ಆಡುತ್ತಿದ್ದು, ಈಗಾಗಲೇ ಟೆಸ್ಟ್ ಮತ್ತು ಟಿ20ಗಳಿಂದ ನಿವೃತ್ತರಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Thu, 11 December 25

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​