AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli ವೆಲ್ಕಮ್ ಬ್ಯಾಕ್ ಕಿಂಗ್ ಕೊಹ್ಲಿ: 741 ದಿನಗಳ ಬಳಿಕ ದೊಡ್ಡ ನಿರೀಕ್ಷೆ

India vs New Zealand: ಮಯಾಂಕ್ ಅಗರ್ವಾಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಾಹ.

Virat Kohli ವೆಲ್ಕಮ್ ಬ್ಯಾಕ್ ಕಿಂಗ್ ಕೊಹ್ಲಿ: 741 ದಿನಗಳ ಬಳಿಕ ದೊಡ್ಡ ನಿರೀಕ್ಷೆ
Virat kohli
TV9 Web
| Edited By: |

Updated on: Dec 02, 2021 | 6:02 PM

Share

ಭಾರತ-ನ್ಯೂಜಿಲೆಂಡ್ (India vs New Zealand 2nd Test) ನಡುವಣ ಎರಡು ಪಂದ್ಯಗಳ ಟೆಸ್ಟ್​ ಸರಣಿಯ ಮೊದಲ ಪಂದ್ಯ ಡ್ರಾನಲ್ಲಿ ಅಂತ್ಯ ಕಂಡಿದೆ. ರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಕಾನ್ಪುರ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (Virat Kohli) ಆಡಿರಲಿಲ್ಲ ಎಂಬುದು ವಿಶೇಷ. ಟಿ20 ವಿಶ್ವಕಪ್​ ಬಳಿಕ ವಿಶ್ರಾಂತಿ ಪಡೆದಿದ್ದ ಕೊಹ್ಲಿ ಇದೀಗ 2ನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದ್ದಾರೆ. ಅದರಂತೆ ಡಿಸೆಂಬರ್ 3 ರಿಂದ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹಂಗಾಮಿ ನಾಯಕ ಅಜಿಂಕ್ಯ ರಹಾನೆ ಬದಲಿಗೆ ವಿರಾಟ್ ಕೊಹ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಅದರಲ್ಲೂ ರಾಹುಲ್ ದ್ರಾವಿಡ್ ಕೋಚಿಂಗ್ ಅಡಿಯಲ್ಲಿ ಇದೇ ಮೊದಲ ಬಾರಿಗೆ ಕೊಹ್ಲಿ ಆಡುತ್ತಿರುವುದು ವಿಶೇಷ. ಹೀಗಾಗಿಯೇ ಮುಂಬೈ ಟೆಸ್ಟ್​ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಇನ್ನೊಂದೆಡೆ ಟೆಸ್ಟ್ ಕ್ರಿಕೆಟ್​ನಲ್ಲಿ ಕೊಹ್ಲಿ ಶತಕ ಬಾರಿಸಿ ಎರಡು ವರ್ಷಗಳೇ ಕಳೆದಿವೆ. ಕಳೆದ ಎರಡು ವರ್ಷಗಳಲ್ಲಿ ಕೊಹ್ಲಿ ಅತ್ಯುತ್ತಮ ಇನಿಂಗ್ಸ್ ಆಡಿದರೂ ಶತಕ ಬಾರಿಸಲು ಮಾತ್ರ ಸಾಧ್ಯವಾಗಿಲ್ಲ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 70 ಶತಕ ಬಾರಿಸಿ ದಾಖಲೆ ನಿರ್ಮಿಸಲು ಹೊರಟಿರುವ ಕೊಹ್ಲಿ ಕೊನೆಯ ಸಲ ಸೆಂಚುರಿ ಸಿಡಿಸಿದ್ದು ನವೆಂಬರ್ 23, 2019 ರಂದು. ಬಾಂಗ್ಲಾದೇಶದ ವಿರುದ್ಧದ ಬಾರಿಸಿದ ಆ ಶತಕದ ಬಳಿಕ ಕೊಹ್ಲಿ ಬ್ಯಾಟ್​ನಿಂದ ಮೂರಂಕಿ ಇನಿಂಗ್ಸ್​ ಮೂಡಿಬಂದಿಲ್ಲ.

ಇದೀಗ ಶತಕ ಬಾರಿಸಿ 741 ದಿನಗಳು ಕಳೆದಿದ್ದು, ಹೀಗಾಗಿಯೇ ಭಾರತ-ನ್ಯೂಜಿಲೆಂಡ್​ ನಡುವಣ 2ನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಬ್ಯಾಟ್​ನಿಂದ ಭರ್ಜರಿ ಸೆಂಚುರಿಯನ್ನು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಏಕೆಂದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕೊಹ್ಲಿ ಅವರ ದಾಖಲೆ ಅತ್ಯುತ್ತಮವಾಗಿದೆ. ಈ ಮೈದಾನದಲ್ಲಿ 4 ಟೆಸ್ಟ್ ಪಂದ್ಯಗಳನ್ನು ಆಡಿರುವ ಕೊಹ್ಲಿ 72.17 ಸರಾಸರಿಯಲ್ಲಿ 433 ರನ್ ಕಲೆಹಾಕಿದ್ದಾರೆ. ಅಂದರೆ 6 ಇನ್ನಿಂಗ್ಸ್‌ಗಳಲ್ಲಿ 1 ಶತಕ ಮತ್ತು 3 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಇನ್ನು 2016ರಲ್ಲಿ ಇದೇ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ವಿರಾಟ್ 235 ರನ್‌ಗಳ ಇನಿಂಗ್ಸ್ ಆಡಿದ್ದರು. ಈ ಎಲ್ಲಾ ಕಾರಣಗಳಿಂದಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ಕೊಹ್ಲಿ ಬ್ಯಾಟ್​ನಿಂದ ಶತಕ ಮೂಡಿಬರುವ ನಿರೀಕ್ಷೆಯಲ್ಲಿದ್ದಾರೆ ಅಭಿಮಾನಿಗಳು.

ದಾಖಲೆ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸಚಿನ್ ಅಂತಾರಾಷ್ಟ್ರೀಯ ಮಟ್ಟದಲ್ಲಿ 100 ಶತಕಗಳನ್ನು ಬಾರಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ರಿಕಿ ಪಾಂಟಿಂಗ್ 2ನೇ ಸ್ಥಾನದಲ್ಲಿದ್ದಾರೆ. ಪಾಂಟಿಂಗ್ 71 ಶತಕಗಳನ್ನು ಬಾರಿಸಿದ್ದಾರೆ. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ 70 ಸೆಂಚುರಿ ಸಿಡಿಸಿದ್ದಾರೆ. ಈ ದಾಖಲೆ ಪಟ್ಟಿಯಲ್ಲಿ ಜಂಟಿಯಾಗಿ 2ನೇ ಸ್ಥಾನ ಅಲಂಕರಿಸಲು ಕೊಹ್ಲಿಗೆ ಕೇವಲ ಒಂದು ಶತಕದ ಅವಶ್ಯಕತೆಯಿದೆ. ಇತ್ತ 741 ದಿನಗಳಿಂದ ಶತಕದ ಬರ ಎದುರಿಸುತ್ತಿರುವ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ನ್ಯೂಜಿಲೆಂಡ್ ವಿರುದ್ದ ಭರ್ಜರಿ ಸೆಂಚುರಿ ಮೂಡಿಬರಲಿದೆಯಾ ಕಾದು ನೋಡಬೇಕಿದೆ.

ಉಭಯ ತಂಡಗಳು ಹೀಗಿವೆ:

ಭಾರತ ತಂಡ: ಮಯಾಂಕ್ ಅಗರ್ವಾಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಉಮೇಶ್ ಯಾದವ್, ಇಶಾಂತ್ ಶರ್ಮಾ, ಜಯಂತ್ ಯಾದವ್, ಮೊಹಮ್ಮದ್ ಸಿರಾಜ್ , ಶ್ರೀಕರ್ ಭರತ್, ಪ್ರಸಿದ್ಧ್ ಕೃಷ್ಣ, ಸೂರ್ಯಕುಮಾರ್ ಯಾದವ್

ನ್ಯೂಜಿಲೆಂಡ್ ತಂಡ: ಟಾಮ್ ಲಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ನಾಯಕ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಕೈಲ್ ಜೇಮಿಸನ್, ಟಿಮ್ ಸೌಥಿ, ವಿಲಿಯಂ ಸೋಮರ್‌ವಿಲ್ಲೆ, ಎಜಾಜ್ ಪಟೇಲ್, ಮಿಚೆಲ್ ಸ್ಯಾಂಟ್ನರ್, ಗಿಲೆನ್ ವ್ಯಾಗ್ನರ್ ಫಿಲಿಪ್ಸ್, ಡೇರಿಲ್ ಮಿಚೆಲ್

ಇದನ್ನೂ ಓದಿ: IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್

ಇದನ್ನೂ ಓದಿ: 8 ಫ್ರಾಂಚೈಸಿ ಉಳಿಸಿಕೊಂಡ ಆಟಗಾರರ ಪಟ್ಟಿ ಹೀಗಿದೆ

ಇದನ್ನೂ ಓದಿ: 27 ಆಟಗಾರರು ರಿಟೈನ್: ಬಿಡುಗಡೆಯಾದ ಆಟಗಾರರ ಪಟ್ಟಿ ಇಲ್ಲಿದೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ