Virat Kohli: ವಿರಾಟ್ ಕೊಹ್ಲಿಗೆ ಮತ್ತೆ ನಾಯಕತ್ವ ಚರ್ಚೆ… ಆದರೆ

Virat Kohli Test retirement: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡ ಟೆಸ್ಟ್​ ಕ್ರಿಕೆಟ್​ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ಬಿಸಿಸಿಐಗೆ ತಿಳಿಸಿದ್ದಾರೆ.

Virat Kohli: ವಿರಾಟ್ ಕೊಹ್ಲಿಗೆ ಮತ್ತೆ ನಾಯಕತ್ವ ಚರ್ಚೆ... ಆದರೆ
Virat Kohli

Updated on: May 11, 2025 | 10:53 AM

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿಯನ್ನು (Virat Kohli) ನಾಯಕನನ್ನಾಗಿ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಚರ್ಚಿಸಿದ್ದರು ಎಂಬ ಮಾಹಿತಿ ಹೊರಬಿದ್ದಿದೆ. ಆದರೆ ಭವಿಷ್ಯದ ದೃಷ್ಟಿಯಿಂದ ಯುವ ಆಟಗಾರನಿಗೆ ಕ್ಯಾಪ್ಟನ್ ಪಟ್ಟ ನೀಡಲು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

ರೋಹಿತ್ ಶರ್ಮಾ ನಿವೃತ್ತಿಯ ನಂತರ ವಿರಾಟ್ ಕೊಹ್ಲಿ ಅವರನ್ನು ಭಾರತ ಟೆಸ್ಟ್ ತಂಡಕ್ಕೆ ನಾಯಕರನ್ನಾಗಿ ಮರು ಆಯ್ಕೆ ಮಾಡುವ ಬಗ್ಗೆ ಚರ್ಚಿಸಲಾಗಿತ್ತು. ಆದರೆ ಶುಭ್​ಮನ್ ಗಿಲ್ ಅವರನ್ನು ಭಾರತದ ದೀರ್ಘಕಾಲೀನ ನಾಯಕರನ್ನಾಗಿ ಮಾಡುವ ಸಲುವಾಗಿ ಕೊಹ್ಲಿಯನ್ನು ಕಡೆಗಣಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿದೆ.

ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕಾಗಿ ತೆರೆಮರೆಯ ಪ್ರಯತ್ನ ಮಾಡಿದ್ದರು ಎಂದು ವರದಿಯಾಗಿತ್ತು. ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಕೊಹ್ಲಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್​ ಮುಂದೆ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ಇದೇ ಕಾರಣದಿಂದಾಗಿ ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೇ ವಿರಾಟ್ ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಚರ್ಚೆ ನಡೆಸಿದೆ. ಆದರೆ ಇದೀಗ ವಿರಾಟ್ ಕೊಹ್ಲಿಗೆ 36 ವರ್ಷ. ಅವರು ನಿವೃತ್ತಿ ಹೊಸ್ತಿಲಲ್ಲಿರುವ ಕಾರಣ ಯುವ ಆಟಗಾರನಿಗೆ ಕ್ಯಾಪ್ಟನ್ ಪಟ್ಟ ನೀಡುವುದು ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಗಿದೆ. ಹೀಗಾಗಿ ವಿರಾಟ್ ಕೊಹ್ಲಿ ಬದಲಿಗೆ ಶುಭ್​ಮನ್ ಗಿಲ್​ಗೆ ನಾಯಕತ್ವ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ವಿರಾಟ್ ಕೊಹ್ಲಿ ನಿವೃತ್ತಿ?

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ತನ್ನನ್ನು ಆಯ್ಕೆ ಮಾಡಬೇಡಿ. ತಾನು ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತನಾಗಲು ನಿರ್ಧರಿಸಿದ್ದೇನೆ ಎಂದು ವಿರಾಟ್ ಕೊಹ್ಲಿ ಬಿಸಿಸಿಐ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಇತ್ತ ರೋಹಿತ್ ಶರ್ಮಾ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದ ಬೆನ್ನಲ್ಲೇ ಕೊಹ್ಲಿಯ ಈ ನಿರ್ಧಾರ ಅಚ್ಚರಿಗೆ ಕಾರಣವಾಗಿದೆ.

ಇದಾಗ್ಯೂ ವಿರಾಟ್ ಕೊಹ್ಲಿಯ ನಿವೃತ್ತಿಯನ್ನು ಬಿಸಿಸಿಐ ಅಂಗೀಕರಿಸಿಲ್ಲ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಆಯ್ಕೆ ಸಮಿತಿ ಕೊಹ್ಲಿಯಲ್ಲಿ ಮನವಿ ಮಾಡಿದ್ದಾರೆ. ಹೀಗಾಗಿ ಇನ್ನೆರಡು ವಾರಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇದನ್ನೂ ಓದಿ: IPL 2025: ಮುಂದಿನ ಪಂದ್ಯಕ್ಕೆ RCB ನಾಯಕನೇ ಅಲಭ್ಯ..!

ಒಂದು ವೇಳೆ ವಿರಾಟ್ ಕೊಹ್ಲಿ ತಮ್ಮ ನಿರ್ಧಾರದಲ್ಲಿ ಅಚಲವಾಗಿ ನಿಂತರೆ, ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ. ಆದರೆ ಇದೀಗ ಬಿಸಿಸಿಐನ ಉನ್ನತ ವ್ಯಕ್ತಿಯೊಬ್ಬರು ವಿರಾಟ್ ಕೊಹ್ಲಿ ಮನವೊಲಿಸಲು ಮುಂದಾಗಿದ್ದು, ಹೀಗಾಗಿ ನಿವೃತ್ತಿ ನಿರ್ಧಾರದಿಂದ ಕೊಹ್ಲಿ ಹಿಂದೆ ಸರಿಯಲಿದ್ದಾರಾ ಕಾದು ನೋಡಬೇಕಿದೆ.