ಮಾಜಿ RCB ಆಟಗಾರನಿಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

ICC World Cup 2023: 2009 ರಲ್ಲಿ ಆರ್​ಸಿಬಿ ಪರ ಒಟ್ಟು 10 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರೋಲೋಫ್ ವ್ಯಾನ್ ಡೆರ್ ಮೆರ್ವ್ 9 ವಿಕೆಟ್ ಕಬಳಿಸಿದ್ದರು. ಹಾಗೆಯೇ 122 ರನ್​ಗಳ ಕೊಡುಗೆ ನೀಡಿದ್ದರು. ಆದರೆ 2010 ರಲ್ಲಿ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಅವರಿಗೆ ಅವಕಾಶ ಲಭಿಸಿತ್ತು.

ಮಾಜಿ RCB ಆಟಗಾರನಿಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ
Virat Kohli - Roelof van der Merwe
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 13, 2023 | 3:56 PM

ಏಕದಿನ ವಿಶ್ವಕಪ್ 2023ರ ಲೀಗ್ ಹಂತದ ಪಂದ್ಯಗಳು ಮುಗಿದಿದೆ. ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೊನೆಯ ಲೀಗ್​ ಪಂದ್ಯದಲ್ಲಿ ಭಾರತ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ (61) ಹಾಗೂ ಶುಭ್​ಮನ್ ಗಿಲ್ (51) ಉತ್ತಮ ಆರಂಭ ಒದಗಿಸಿದ್ದರು.

ಇನ್ನು ಆ ಬಳಿಕ ಬಂದ ವಿರಾಟ್ ಕೊಹ್ಲಿ (51) ಕೂಡ ಅರ್ಧಶತಕದ ಕೊಡುಗೆ ನೀಡಿದರು. ಇದಾದ ಬಳಿಕ ಜೊತೆಗೂಡಿದ ಶ್ರೇಯಸ್ ಅಯ್ಯರ್ (128) ಹಾಗೂ ಕೆಎಲ್ ರಾಹುಲ್ (102) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 50 ಓವರ್​ಗಳಲ್ಲಿ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 410 ರನ್ ಕಲೆಹಾಕಿತು.

ಈ ಬೃಹತ್ ಗುರಿಯನ್ನು ಬೆನ್ನತ್ತಿದ ನೆದರ್​ಲೆಂಡ್ಸ್ ತಂಡವು 47.5 ಓವರ್​ಗಳಲ್ಲಿ 250 ರನ್​ಗಳಿಸಿ ಸರ್ವಪತನ ಕಂಡಿದೆ. ಈ ಮೂಲಕ ಟೀಮ್ ಇಂಡಿಯಾ 160 ರನ್​ಗಳ ಭರ್ಜರಿ ಜಯ ಸಾಧಿಸಿತು.

ಈ ಗೆಲುವಿನ ಬಳಿಕ ಉಭಯ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ನೀಡುವ ಮೂಲಕ ಡ್ರೆಸ್ಸಿಂಗ್ ರೂಮ್​ಗೆ ಮರಳಿದ್ದರು. ಆದರೆ ಇದರ ನಡುವೆ ನೆದರ್​ಲೆಂಡ್ಸ್ ತಂಡದ ಆಟಗಾರ ರೋಲೋಫ್ ವ್ಯಾನ್ ಡೆರ್ ಮೆರ್ವ್ ಮಾತ್ರ ವಿರಾಟ್ ಕೊಹ್ಲಿ ಜೊತೆ ಕುಶಲೋಪರಿ ಮುಂದುವರೆಸಿದ್ದರು. ಇದೇ ವೇಳೆ  ರೋಲೋಫ್​ಗೆ ಕಿಂಗ್ ಕೊಹ್ಲಿ ತಮ್ಮ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು.

ಅಂದಹಾಗೆ ರೋಲೋಫ್ ವ್ಯಾನ್ ಡೆರ್ ಮೆರ್ವ್ ಹಾಗೂ ವಿರಾಟ್ ಕೊಹ್ಲಿ ಸಹ ಆಟಗಾರರು. ಅಂದರೆ 2009-10 ರ ಐಪಿಎಲ್​ ಸೀಸನ್​ನಲ್ಲಿ ಇಬ್ಬರು ಆರ್​ಸಿಬಿ ಪರ ಕಣಕ್ಕಿಳಿದಿದ್ದರು. ಅಂದು ಸೌತ್ ಆಫ್ರಿಕಾ ಆಟಗಾರನಾಗಿ ಐಪಿಎಲ್​ನಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದ ರೋಲೋಫ್ 2015 ರಿಂದ ನೆದರ್​ಲೆಂಡ್ಸ್​ ಪರ ಆಡುತ್ತಿದ್ದಾರೆ.

ರೋಲೋಫ್ ಆರ್​ಸಿಬಿ ಸಾಧನೆ:

2009 ರಲ್ಲಿ ಆರ್​ಸಿಬಿ ಪರ ಒಟ್ಟು 10 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರೋಲೋಫ್ ವ್ಯಾನ್ ಡೆರ್ ಮೆರ್ವ್ 9 ವಿಕೆಟ್ ಕಬಳಿಸಿದ್ದರು. ಹಾಗೆಯೇ 122 ರನ್​ಗಳ ಕೊಡುಗೆ ನೀಡಿದ್ದರು. ಆದರೆ 2010 ರಲ್ಲಿ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಅವರಿಗೆ ಅವಕಾಶ ಲಭಿಸಿತ್ತು.

ಇದಾದ ಬಳಿಕ 2011 ರಲ್ಲಿ ಡೆಲ್ಲಿ ಡೇರ್​ ಡೆವಿಲ್ಸ್​ (ಡೆಲ್ಲಿ ಕ್ಯಾಪಿಟಲ್ಸ್​) ಫ್ರಾಂಚೈಸಿ ಪರ ಕಣಕ್ಕಿಳಿದಿದ್ದ ರೋಲೋಫ್ 3 ಸೀಸನ್​​ ಆಡಿದ್ದರು. ಈ ವೇಳೆ ಒಟ್ಟು 10 ಪಂದ್ಯಗಳಿಂದ 10 ವಿಕೆಟ್​ ಕಬಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ಅವರ ಐಪಿಎಲ್ ಕೆರಿಯರ್ ಕೂಡ ಅಂತ್ಯವಾಗಿತ್ತು.

View this post on Instagram

A post shared by ICC (@icc)

ಇತ್ತ ಈ ಬಾರಿಯ ವಿಶ್ವಕಪ್​ನೊಂದಿಗೆ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳುವ ಹೊಸ್ತಿಲಲ್ಲಿರುವ 38 ವರ್ಷದ ರೋಲೋಫ್ ವ್ಯಾನ್ ಡೆರ್ ಮೆರ್ವ್​ ಭಾರತದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ವಿಕೆಟ್ ಪಡೆದಿರುವುದು ವಿಶೇಷ. ಈ ವಿಕೆಟ್​ ಜೊತೆ ಕಿಂಗ್ ಕೊಹ್ಲಿಯ ಜೆರ್ಸಿ ಉಡುಗೊರೆಯೊಂದಿಗೆ ರೋಲೋಫ್ ವ್ಯಾನ್ ಡೆರ್ ಮೆರ್ವ್ ಈ ಬಾರಿಯ ಏಕದಿನ ವಿಶ್ವಕಪ್​ಗೆ ವಿದಾಯ ಹೇಳಿದ್ದಾರೆ.

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್