AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಜಿಮ್​ನಲ್ಲಿ ವಿರಾಟ್ ಕೊಹ್ಲಿ ಸಖತ್ ವರ್ಕೌಟ್: ಮೈ ಜುಮ್ ಎನಿಸುವ ವಿಡಿಯೋ ನೋಡಿ

India vs Western Australia: ದ್ವಿತೀಯ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ (Team India) ಆಟಗಾರರು ಜಿಮ್​ನಲ್ಲಿ ಬೆವರಿ ಹರಿಸುತ್ತಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ ಜಿಮ್​ನಲ್ಲಿ ಸಖತ್ ಆಗಿ ವರ್ಕೌಟ್ ಮಾಡುತ್ತಿದ್ದಾರೆ.

Virat Kohli: ಜಿಮ್​ನಲ್ಲಿ ವಿರಾಟ್ ಕೊಹ್ಲಿ ಸಖತ್ ವರ್ಕೌಟ್: ಮೈ ಜುಮ್ ಎನಿಸುವ ವಿಡಿಯೋ ನೋಡಿ
Virat Kohli
TV9 Web
| Updated By: Vinay Bhat|

Updated on:Oct 13, 2022 | 9:27 AM

Share

ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್​ಗಾಗಿ (T20I World Cup) ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಬೀಡುಬಿಟ್ಟಿದ್ದು ಇಂದು ಎರಡನೇ ಅಭ್ಯಾಸ ಪಂದ್ಯವನ್ನು ಆಡಲಿದೆ. ಪರ್ತ್​ನಲ್ಲಿ ವೆಸ್ಟರ್ನ್​ ಆಸ್ಟ್ರೇಲಿಯಾ ವಿರುದ್ಧದ ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ ಜಯ ಕಂಡಿತ್ತು. ಇದೀಗ ದ್ವಿತೀಯ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ (Team India) ಆಟಗಾರರು ಜಿಮ್​ನಲ್ಲಿ ಬೆವರಿ ಹರಿಸುತ್ತಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ ಜಿಮ್​ನಲ್ಲಿ ಸಖತ್ ಆಗಿ ವರ್ಕೌಟ್ ಮಾಡುತ್ತಿದ್ದಾರೆ. ಮೊದಲ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಕಣಕ್ಕಿಳಿದಿರಲಿಲ್ಲ. ಬದಲಾಗಿ ನೆಟ್​​ನಲ್ಲಿ ಒಬ್ಬರೆ ಸತತವಾಗಿ ಬೆವರು ಹರಿಸುತ್ತಿದ್ದರು. ಇವರಿಗೆ ಕೋಚ್ ರಾಹುಲ್ ದ್ರಾವಿಡ್ ವಿಶೇಷ ತರಬೇತಿ ನೀಡುತ್ತಿದ್ದರು. ಇಂದಿ ದ್ವಿತೀಯು ವಾರ್ಮ್​-ಅಪ್ ಮ್ಯಾಚ್​ನಲ್ಲಿ ಕೊಹ್ಲಿ ಆಡುವ ನಿರೀಕ್ಷಿಯಿದೆ.

ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ ಗೆದ್ದಿತಾದರೂ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಿರಲಿಲ್ಲ. ರೋಹಿತ್ ಶರ್ಮಾ ಹಾಗೂ ರಿಷಭ್ ಪಂತ್ ಸಂಪೂರ್ಣ ವೈಫಲ್ಯ ಅನುಭವಿಸಿದ್ದರು. ಹರ್ಷಲ್ ಪಟೇಲ್ ಬೌಲಿಂಗ್​ನಲ್ಲಿ ಬಲು ದುಬಾರಿ ಆಗಿದ್ದರು. ಇಂದು ಈ ತಪ್ಪುಗಳನ್ನು ಸರಿ ಪಡಿಸಿಕೊಳ್ಳಬೇಕಿದೆ. ದೀಪಕ್ ಹೂಡಗಾ ವಿಶ್ರಾಂತಿ ನೀಡಿ ಅವರ ಜಾಗದಲ್ಲಿ ಕೊಹ್ಲಿ ಆಡುವ ಸಂಭವವಿದೆ. ವಾರ್ಮ್​-ಅಪ್ ಮ್ಯಾಚ್​ಗೂ ಮುನ್ನ ಕೊಹ್ಲಿ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
ICC T20I rankings: ಐಸಿಸಿ ಟಿ20 ರ‍್ಯಾಂಕಿಂಗ್ ಪ್ರಕಟ: ನಂಬರ್ ಒನ್ ಸ್ಥಾನದಲ್ಲಿ ಯಾರು?
Image
INDW vs THAIW: ಮಹಿಳಾ ಏಷ್ಯಾಕಪ್​ನಲ್ಲಿಂದು ಸೆಮಿ ಫೈನಲ್ ಕದನ: ಭಾರತಕ್ಕೆ ಥೈಲೆಂಡ್ ಎದುರಾಳಿ
Image
ಭಾರತದ 2ನೇ ಅಭ್ಯಾಸ ಪಂದ್ಯ: ಎಷ್ಟು ಗಂಟೆಗೆ, ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಹೊಸ ನಿಯಮ: ಈ ಬಾರಿ ಪಂದ್ಯ ಮತ್ತಷ್ಟು ರೋಚಕ
View this post on Instagram

A post shared by Virat Kohli (@virat.kohli)

ಆಸೀಸ್​ ದ್ವೀಪದಲ್ಲಿ ಟೀಮ್ ಇಂಡಿಯಾ ಮಸ್ತಿ:

ವಿರಾಮದ ಸಮಯದಲ್ಲಿ ಟೀಮ್ ಇಂಡಿಯಾ ಆಟಗಾರರು ವಿಶ್ರಾಂತಿಗಾಗಿ ಆಸ್ಟ್ರೇಲಿಯಾದ ರಾಟ್ನೆಸ್ಟ್ ದ್ವೀಪಕ್ಕೆ ಭೇಟಿ ನೀಡಿದ್ದಾರೆ. ರೊಟ್ನೆಸ್ಟ್ ದ್ವೀಪವನ್ನು ವಿಶ್ವದ ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದೆಂದು ಪರಿಗಣಿಸಲಾಗಿದ್ದು, ಭಾರತದ ಆಟಗಾರರು ಸೇರಿದಂತೆ ಸಹಾಯಕ ಸಿಬ್ಬಂದಿಯೂ ಸಹ ಭೇಟಿ ನೀಡಿ ಮೋಜು ಮಸ್ತಿ ಮಾಡಿದ್ದಾರೆ. ಇಲ್ಲಿ ಕೊಹ್ಲಿ ಅಪರೂಪದ ಜಾತಿಯ ಕ್ವೊಕಾ ಪ್ರಾಣಿಯೊಂದಿಗೆ ಫೋಟೋವನ್ನು ಕ್ಲಿಕ್ಕಿಸಿಕೊಂಡಿದ್ದು ವೈರಲ್ ಆಗಿದೆ. ರೋಟ್ನೆಸ್ಟ್ ದ್ವೀಪವು ಪರ್ತ್ ಕರಾವಳಿಯಿಂದ ಕೇವಲ 19 ಕಿಲೋಮೀಟರ್ ದೂರದಲ್ಲಿದ್ದು, ಸುಮಾರು 50,000 ವರ್ಷಗಳಷ್ಟು ಹಳೆಯದು ಎಂದು ಹೇಳಲಾಗುತ್ತದೆ.

ಸದ್ಯ ಭಾರತ ಇಂದು ವೆಸ್ಟರ್ನ್ ಆಸ್ಟ್ರೇಲಿಯಾ ಇಲೆವೆನ್ ಪರ್ತ್​ನ ಡಬ್ಲ್ಯುಎಸಿಎ ಮೈದಾನದಲ್ಲಿ ಎರಡನೇ ಅಭ್ಯಾಸ ಪಂದ್ಯ ಆಡಲಿದೆ. ಪಂದ್ಯ ಬೆಳಗ್ಗೆ 11 ಗಂಟೆಗೆ ಶುರುವಾಗಲಿದೆ. ಅಕ್ಟೋಬರ್‌ 16 ರಿಂದ ಆರಂಭವಾಗುವ ಈ ಮಹತ್ವದ ಟೂರ್ನಿಯು ನವೆಂಬರ್‌ 13 ರಂದು ಫೈನಲ್‌ ಪಂದ್ಯದ ಮೂಲಕ ಅಂತ್ಯವಾಗಲಿದೆ. ಅಕ್ಟೋಬರ್‌ 23 ರಂದು ಮೆಲ್ಬೋರ್ನ್‌ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸುವ ಮೂಲಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಟೂರ್ನಿಯನ್ನು ಆರಂಭಿಸಲಿದೆ.

ಭಾರತ ಸಂಭವನೀಯ ಪ್ಲೇಯಿಂಗ್: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್.

Published On - 9:27 am, Thu, 13 October 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!