AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಇರಬೇಕಿತ್ತು..!

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ನೀಡಿದ 188 ರನ್​ಗಳ ಗುರಿಯನ್ನು ಬೆನ್ನತ್ತಲು ವಿಫಲವಾದ ಟೀಮ್ ಇಂಡಿಯಾ ಬರೋಬ್ಬರಿ 76 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ನೆನಪಾಗಿದ್ದಾರೆ.

Virat Kohli: ವಿರಾಟ್ ಕೊಹ್ಲಿ ಇರಬೇಕಿತ್ತು..!
Virat Kohli
ಝಾಹಿರ್ ಯೂಸುಫ್
|

Updated on:Feb 23, 2026 | 10:35 AM

Share

ಟಿ20 ವಿಶ್ವಕಪ್​ ಇತಿಹಾಸದಲ್ಲಿ ಟೀಮ್ ಇಂಡಿಯಾ 150 ಕ್ಕಿಂತ ಹೆಚ್ಚಿನ ಸ್ಕೋರ್ ಬೆನ್ನತ್ತಿ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಈ ಮೂರು ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಇರಬೇಕಿತ್ತು ಎಂಬ ಮಾತುಗಳು ಕೇಳಿ ಬರಲಾರಂಭಿಸಿದೆ.

ಭಾರತ ತಂಡವು ಮೊದಲ ಬಾರಿಗೆ ಟಿ20 ವಿಶ್ವಕಪ್​ನಲ್ಲಿ 150+ ಸ್ಕೋರ್ ಚೇಸ್ ಮಾಡಿ ಗೆದ್ದಿದ್ದು 2014 ರಲ್ಲಿ. ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದಿದ್ದ 2014ರ ಟಿ20 ವಿಶ್ವಕಪ್​ನ ಸೆಮಿಫೈನಲ್​ನಲ್ಲಿ ಸೌತ್ ಆಫ್ರಿಕಾ ನೀಡಿದ 173 ರನ್​ಗಳನ್ನು ಟೀಮ್ ಇಂಡಿಯಾ ಚೇಸ್ ಮಾಡಿ ಗೆದ್ದಿತ್ತು. ಈ ಭರ್ಜರಿ ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. ಈ ಪಂದ್ಯದಲ್ಲಿ ಕೇವಲ 44 ಎಸೆತಗಳನ್ನು ಎದುರಿಸಿದ್ದ ಕೊಹ್ಲಿ ಅಜೇಯ 72 ರನ್ ಬಾರಿಸಿ ಮಿಂಚಿದ್ದರು.

ಟೀಮ್ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ ಎರಡನೇ ಬಾರಿ 150+ ಸ್ಕೋರ್ ಚೇಸ್ ಮಾಡಿದ್ದು 2016 ರಲ್ಲಿ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ 51 ಎಸೆತಗಳಲ್ಲಿ ಅಜೇಯ 82 ರನ್ ಬಾರಿಸಿದ್ದರು. ಕೊಹ್ಲಿಯ ಈ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ ಟೀಮ್ ಇಂಡಿಯಾ 161 ರನ್​ಗಳ ಗುರಿ ಬೆನ್ನತ್ತಿ 6 ವಿಕೆಟ್​ಗಳ ಜಯ ಸಾಧಿಸಿತ್ತು.

ಭಾರತ ತಂಡವು ಮೂರನೇ ಬಾರಿ 150 ಕ್ಕಿಂತ ಹೆಚ್ಚಿನ ರನ್ ಚೇಸ್ ಮಾಡಿರುವುದು 2022ರ ಟಿ20 ವಿಶ್ವಕಪ್​ನಲ್ಲಿ. ಅಂದು ಪಾಕಿಸ್ತಾನ್ ತಂಡ ನೀಡಿದ 160 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಇದಾಗ್ಯೂ ಏಕಾಂಗಿಯಾಗಿ ಹೋರಾಟ ಮುಂದುವರೆಸಿದ ವಿರಾಟ್ ಕೊಹ್ಲಿ 53 ಎಸೆತಗಳಲ್ಲಿ ಅಜೇಯ 82 ರನ್ ಬಾರಿಸಿ ಭಾರತ ತಂಡಕ್ಕೆ 4 ವಿಕೆಟ್​ಗಳ ಭರ್ಜರಿ ಗೆಲುವು ತಂದು ಕೊಟ್ಟಿದ್ದರು.

ಅಂದರೆ ಟೀಮ್ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ 150+ ರನ್ ಚೇಸ್ ಮಾಡಿ ಗೆದ್ದಾಗೆಲ್ಲಾ ವಿರಾಟ್ ಕೊಹ್ಲಿ ಅಜೇಯರಾಗಿ ಉಳಿದಿದ್ದರು. ಅಜೇಯರಾಗಿಯೇ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಆದರೆ ಈ ಬಾರಿ ಕಿಂಗ್ ಕೊಹ್ಲಿ ಇರಲಿಲ್ಲ.

ಇದನ್ನೂ ಓದಿ: ಸೌತ್ ಆಫ್ರಿಕಾ ಮನಸ್ಸು ಮಾಡಿದ್ರೆ ಭಾರತ ಡೈರೆಕ್ಟ್ ಸೆಮಿಫೈನಲ್​ಗೆ!

ಪರಿಣಾಮ ಸೌತ್ ಆಫ್ರಿಕಾ ತಂಡ ನೀಡಿದ 188 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 111 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ ಬರೋಬ್ಬರಿ 76 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬೆನ್ನಲ್ಲೇ ಕೇಳಿ ಬಂದಿದ್ದೇ… ವಿರಾಟ್ ಕೊಹ್ಲಿ ಇರಬೇಕಿತ್ತು!

Published On - 10:30 am, Mon, 23 February 26

Follow Us
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ