Virat Kohli: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಬಾಲ್ಯದ ಕೋಚ್

Virat Kohli: ಭಾರತದ ಪರ 125 ಟಿ20 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 1 ಭರ್ಜರಿ ಶತಕ ಹಾಗೂ 38 ಅರ್ಧಶತಕಗಳೊಂದಿಗೆ 4188 ರನ್ ಕಲೆಹಾಕಿದ್ದಾರೆ. ಈ ಅಮೋಘ ಪ್ರದರ್ಶನದೊಂದಿಗೆ ಕಿಂಗ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್​ನಲ್ಲಿ ಕೊಹ್ಲಿ ಒಂದಷ್ಟು ವರ್ಷಗಳ ಮುಂದುವರೆಯಲಿದ್ದಾರೆ ಎಂದು ಬಾಲ್ಯ ಕೋಚ್ ತಿಳಿಸಿದ್ದಾರೆ.

Virat Kohli: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಬಾಲ್ಯದ ಕೋಚ್
Virat Kohli-Rajkumar Sharma
Follow us
ಝಾಹಿರ್ ಯೂಸುಫ್
|

Updated on: Jul 09, 2024 | 9:53 AM

ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ವಿರಾಟ್ ಕೊಹ್ಲಿ (Virat Kohli) ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದರು. ವಿಶ್ವಕಪ್ ಗೆದ್ದ ಬಳಿಕ ಮಾತನಾಡಿದ್ದ ಕೊಹ್ಲಿ, ಇದು ನನ್ನ ಕೊನೆಯ ಟಿ20 ವಿಶ್ವಕಪ್. ಯುವ ಆಟಗಾರರಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಈ ಸ್ವರೂಪಕ್ಕೆ ವಿದಾಯ ಹೇಳುತ್ತಿದ್ದೇನೆ ಎಂದು ತಿಳಿಸಿದ್ದರು.

ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಶೀಘ್ರದಲ್ಲೇ ಎಲ್ಲಾ ಮಾದರಿಯ ಕ್ರಿಕೆಟ್​ಗೂ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಬಳಿಕ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಈ ಬಗ್ಗೆ ಇದೀಗ ವಿರಾಟ್ ಕೊಹ್ಲಿ ಅವರ ಬಾಲ್ಯದ ಕೋಚ್ ರಾಜ್‌ಕುಮಾರ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ. ಕಿಂಗ್ ಕೊಹ್ಲಿ ಇನ್ನೂ ಹಲವು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಟೀಮ್ ಇಂಡಿಯಾ ಭಾರತಕ್ಕೆ ಆಗಮಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ತಮ್ಮ ಬಾಲ್ಯದ ಕೋಚ್ ಅನ್ನು ಭೇಟಿಯಾಗಿದ್ದರು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ ರಾಜ್​ಕುಮಾರ್ ಶರ್ಮಾ ವಿದಾಯದ ಬಗ್ಗೆ ಕೂಡ ಮಾತನಾಡಿದ್ದಾರೆ.

ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಗೆದ್ದಿರುವುದು ಖುಷಿಯ ವಿಚಾರ. ನಾನು ವಿರಾಟ್ ಜೊತೆ ಮಾತನಾಡಿದ್ದೇನೆ. ಅವರು ಮುಂದಿನ ಹಲವು ವರ್ಷಗಳವರೆಗೆ ಭಾರತದ ಪರ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಇನ್ನೂ ಕೆಲ ವರ್ಷಗಳ ಕಾಲ ಏಕದಿನ ಮತ್ತು ಟೆಸ್ಟ್ ಆಡುಂವುದನ್ನು ಮುಂದುವರಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ರಾಜ್​ಕುಮಾರ್ ಶರ್ಮಾ ತಿಳಿಸಿದ್ದಾರೆ.

ಇದರೊಂದಿಗೆ 2025 ರಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸುವುದಿಲ್ಲ ಎಂಬುದು ಖಚಿತವಾಗಿದೆ. ಅಲ್ಲದೆ ಸದ್ಯ ಟಿ20 ಅಂತಾರಾಷ್ಟ್ರಿಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಕಾರಣ ಒಂದಷ್ಟು ವರ್ಷಗಳ ಕಾಲ ಏಕದಿನ ಮತ್ತು ಟೆಸ್ಟ್ ಸ್ವರೂಪಗಳಲ್ಲಿ ಮುಂದುವರೆಯುವುದನ್ನು ಎದುರು ನೋಡಬಹುದು.

ಇದನ್ನೂ ಓದಿ: Team India: ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ವಿರಾಟ್ ಕೊಹ್ಲಿ ಟಿ20ಐ ವೃತ್ತಿಜೀವನ:

ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಒಟ್ಟು 117 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 3056 ಎಸೆತಗಳನ್ನು ಎದುರಿಸಿ 4188 ರನ್​ ಕಲೆಹಾಕಿದ್ದಾರೆ. ಇದರ ನಡುವೆ 38 ಅರ್ಧಶತಕ ಹಾಗೂ 1 ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ಹಲವು ದಾಖಲೆಗಳೊಂದಿಗೆ ಕಿಂಗ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ