ವಿಭಜಿತ ನಾಯಕತ್ವ ವದಂತಿ ಸುಳ್ಳು! ಎಲ್ಲಾ ಸ್ವರೂಪದ ಕ್ರಿಕೆಟ್​ಗೆ ಕೊಹ್ಲಿಯೇ ನಾಯಕ; ಬಿಸಿಸಿಐ ಸ್ಪಷ್ಟನೆ

ಇವೆಲ್ಲವೂ ಮಾಧ್ಯಮ ಸೃಷ್ಟಿಸಿರುವ ಸುಳ್ಳು ವದಂತಿಗಳು. ವಿಭಜಿತ ನಾಯಕತ್ವದ ಬಗ್ಗೆ ಮಂಡಳಿಯು ಚರ್ಚಿಸಿಲ್ಲ ಅಥವಾ ಯೋಚಿಸಿಲ್ಲ. ಸತ್ಯವೆಂದರೆ ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ನಾಯಕನಾಗಿ ಉಳಿಯುತ್ತಾರೆ.

ವಿಭಜಿತ ನಾಯಕತ್ವ ವದಂತಿ ಸುಳ್ಳು! ಎಲ್ಲಾ ಸ್ವರೂಪದ ಕ್ರಿಕೆಟ್​ಗೆ ಕೊಹ್ಲಿಯೇ ನಾಯಕ; ಬಿಸಿಸಿಐ ಸ್ಪಷ್ಟನೆ
ವಿರಾಟ್ ಕೊಹ್ಲಿ
Follow us
| Updated By: ಪೃಥ್ವಿಶಂಕರ

Updated on: Sep 13, 2021 | 2:35 PM

ಟಿ 20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಏಕದಿನ ಮತ್ತು ಟಿ 20 ತಂಡದ ನಾಯಕತ್ವ ತ್ಯಜಿಸಲಿದ್ದಾರೆ ಎಂಬ ಸುದ್ದಿಯ ಕೆಲವೇ ಗಂಟೆಗಳ ನಂತರ, ಬಿಸಿಸಿಐ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ. ಟಿ 20 ವಿಶ್ವಕಪ್ ನಂತರ ವಿರಾಟ್ ಬದಲಿಗೆ ರೋಹಿತ್ ಶರ್ಮಾ ಅವರನ್ನು ಏಕದಿನ ಮತ್ತು ಟಿ 20 ತಂಡಗಳ ನಾಯಕನನ್ನಾಗಿ ನೇಮಿಸುವುದಾಗಿ ಹೇಳಿದ್ದ ವರದಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರಾಕರಿಸಿದೆ. ಮಂಡಳಿಯ ಖಜಾಂಚಿ ಅರುಣ್ ಧುಮಾಲ್ ಸೋಮವಾರ ಆ ವರದಿಯನ್ನು ಆಧಾರರಹಿತ ಎಂದು ಬಣ್ಣಿಸಿದ್ದಾರೆ ಮತ್ತು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯಾಗಿಯೇ ಇರುತ್ತಾರೆ ಎಂದು ಹೇಳಿದ್ದಾರೆ. ನಾಯಕತ್ವ ತೊರೆಯುವ ಸುದ್ದಿ ಸುಳ್ಳು. ಭಾರತೀಯ ಕ್ರಿಕೆಟ್ ನಲ್ಲಿ ಆ ರೀತಿ ಏನೂ ಆಗುವುದಿಲ್ಲ ಎಂದಿದ್ದಾರೆ.

ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಸುದ್ದಿ ಸಂಸ್ಥೆ ಐಎಎನ್ಎಸ್ ಜೊತೆಗಿನ ಸಂಭಾಷಣೆಯಲ್ಲಿ, ಇವೆಲ್ಲವೂ ಮಾಧ್ಯಮ ಸೃಷ್ಟಿಸಿರುವ ಸುಳ್ಳು ವದಂತಿಗಳು. ವಿಭಜಿತ ನಾಯಕತ್ವದ ಬಗ್ಗೆ ಮಂಡಳಿಯು ಚರ್ಚಿಸಿಲ್ಲ ಅಥವಾ ಯೋಚಿಸಿಲ್ಲ. ಸತ್ಯವೆಂದರೆ ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ನಾಯಕನಾಗಿ ಉಳಿಯುತ್ತಾರೆ.

ಹಿಂದಿನ ವರದಿ ಏನು ಹೇಳುತ್ತಿತ್ತು? ಆದಾಗ್ಯೂ, ಹಿಂದಿನ ವರದಿಯ ಪ್ರಕಾರ, ವಿರಾಟ್ ಕೊಹ್ಲಿ ಟಿ 20 ವಿಶ್ವಕಪ್ ನಂತರ ಕ್ರಿಕೆಟ್​ನ ಚಿಕ್ಕ ಸ್ವರೂಪದ ನಾಯಕತ್ವವನ್ನು ತೊರೆಯಲಿದ್ದಾರೆ. ಅವರ ಸ್ಥಾನದಲ್ಲಿ ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿ ಮಾಡಲಾಗುತ್ತದೆ ಎಂಬ ವರದಿಗಳು ಕೇಳಿಬಂದಿದ್ದವು. ಟೈಮ್ಸ್ ಆಫ್ ಇಂಡಿಯಾ ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ, ಟಿ 20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಅವರೇ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸುತ್ತಾರೆ. ಅವರು ತಮ್ಮ ಬ್ಯಾಟಿಂಗ್ ಮೇಲೆ ಗಮನಹರಿಸಲು ಈ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಲಾಗಿತ್ತು. ಮೂಲಗಳು ವಿರಾಟ್, ಪ್ರಸ್ತುತ ತಂಡದ ನಾಯಕ ರೋಹಿತ್‌ನೊಂದಿಗೆ ಅವರ ನಾಯಕತ್ವದ ಜವಾಬ್ದಾರಿಯನ್ನು ಹಂಚಿಕೊಳ್ಳಲು ಭಾರತ ನಿರ್ಧರಿಸಿದೆ. ಬಿಸಿಸಿಐನ ಉನ್ನತ ಅಧಿಕಾರಿಗಳ ಸಭೆಯನ್ನು ಕೂಡ ಆ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿತ್ತು. ಇದನ್ನು ಮಂಡಳಿ ಪರಿಗಣಿಸುತ್ತಿದೆ ಎಂದು ಕೂಡ ಹೇಳಲಾಗಿತ್ತು. ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಕಳೆದುಕೊಂಡ ನಂತರ ಈ ವದಂತಿಗಳಿಗೆ ಹೆಚ್ಚಿನ ರೆಕ್ಕೆಪುಕ್ಕ ಕಟ್ಟಲಾಗಿತ್ತು.

ವಿರಾಟ್ ನಾಯಕನಾಗಿರುತ್ತಾರೆ – ಬಿಸಿಸಿಐ ಆದರೆ, ಈಗ ಅರುಣ್ ಧುಮಾಲ್ ಅವರು ಮಂಡಳಿಯ ಯಾವುದೇ ಸಭೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೇರೆ ಸ್ವರೂಪಕ್ಕಾಗಿ ಬೇರೆ ಕ್ಯಾಪ್ಟನ್ ಬಗ್ಗೆ ಯಾವುದೇ ಚರ್ಚೆ ನಡೆದಿಲಿಲ್ಲ. ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲೂ ನಾಯಕರಾಗಿ ಮುಂದುವರೆಯಲ್ಲಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ:Virat Kohli: ಆರ್​ಸಿಬಿ ತಂಡ ಸೇರಿಕೊಂಡ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್