AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ ಘೋಷಣೆ

virat kohli: 2013 ರಿಂದ ವಿರಾಟ್ ಕೊಹ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದಾಗ್ಯೂ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಿಲ್ಲ.

IPL 2021: RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ ಘೋಷಣೆ
ವಿರಾಟ್ ಕೊಹ್ಲಿ
TV9 Web
| Edited By: |

Updated on:Sep 19, 2021 | 11:52 PM

Share

RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ (Virat Kohli) ಘೋಷಿಸಿದ್ದಾರೆ. ಮುಂದಿನ ಸೀಸನ್​ನಲ್ಲಿ ನಾನು ಆರ್​ಸಿಬಿ (RCB) ತಂಡವನ್ನು ಮುನ್ನಡೆಸುವುದಿಲ್ಲ. ಆರ್​ಸಿಬಿ ನಾಯಕನಾಗಿ ಇದು ನನ್ನ ಕೊನೆಯ ಐಪಿಎಲ್​ ಸೀಸನ್​ ಆಗಿರಲಿದೆ ಎಂದು ತಿಳಿಸಿದ್ದಾರೆ. ಅದರಂತೆ ಐಪಿಎಲ್​ 2022ರಲ್ಲಿ ಕೊಹ್ಲಿ ಆರ್​ಸಿಬಿ ತಂಡದ ನಾಯಕನಾಗಿರುವುದಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಮುಂಬರು ಟಿ20 ವಿಶ್ವಕಪ್​ ಬಳಿಕ ಕೊಹ್ಲಿ ನಾಯಕನ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಇದೀಗ ಐಪಿಎಲ್​ನಲ್ಲೂ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿ ಅಚ್ಚರಿ ಮೂಡಿಸಿದ್ದಾರೆ. ಈ ಬಗ್ಗೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಅಧಿಕೃತ ಟ್ವಿಟರ್​ ಖಾತೆಯಲ್ಲಿ ವಿಶೇಷ ವಿಡಿಯೋವನ್ನು ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ರಾಜೀನಾಮೆ ಬಗ್ಗೆ ಮಾತನಾಡಿದ್ದಾರೆ.

ಆರ್‌ಸಿಬಿಯ ನಾಯಕನಾಗಿ ಇದು ನನ್ನ ಕೊನೆಯ ಐಪಿಎಲ್. ನನ್ನ ಕೊನೆಯ ಐಪಿಎಲ್ ಪಂದ್ಯವನ್ನು ಆಡುವವರೆಗೂ ನಾನು ಆರ್‌ಸಿಬಿ ಆಟಗಾರನಾಗಿ ಮುಂದುವರಿಯುತ್ತೇನೆ. ನನ್ನನ್ನು ಬೆಂಬಲಿಸಿದ ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳು ಎಂದು ಕೊಹ್ಲಿ ವಿಡಿಯೋ ಮೂಲಕ ತಿಳಿಸಿದ್ದಾರೆ.

2013 ರಿಂದ ವಿರಾಟ್ ಕೊಹ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದಾಗ್ಯೂ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಿಲ್ಲ. ಇದೀಗ ಸೀಸನ್​ 14 ರ ದ್ವಿತಿಯಾರ್ಧದ ಮೊದಲ ಪಂದ್ಯ ಆರಂಭಕ್ಕೂ ಮುನ್ನ ಕೊಹ್ಲಿ ಮಹತ್ವದ ನಿರ್ಧಾರ ಪ್ರಕಟಿಸಿ ಆರ್​ಸಿಬಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಇನ್ನು ಮುಂಬರುವ ಐಪಿಎಲ್​ ಸೀಸನ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ ಮೆಗಾ ಹರಾಜು ನಡೆಯಲಿದೆ. ಈ ಕಾರಣದಿಂದ ಆರ್​ಸಿಬಿ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

ಸೆಪ್ಟೆಂಬರ್ 16 ರಂದು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಮುಂದಿನ ಟಿ20 ವಿಶ್ವಕಪ್​ ಬಳಿಕ ನಾಯಕನ ಸ್ಥಾನದಿಂದ ಕೆಳಗಿಳಿಯುವುದಾಗಿ ತಿಳಿಸಿದ್ದರು. ಮೂರು ಮಾದರಿಯಲ್ಲೂ ತಂಡವನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಟಿ20 ಕ್ರಿಕೆಟ್​ನ ನಾಯಕತ್ವ ಜವಾಬ್ದಾರಿಯಿಂದ ಕೆಳಗಿಳಿಯುವುದಾಗಿ ಕೊಹ್ಲಿ ತಿಳಿಸಿದ್ದರು.

ಇದರ ಬೆನ್ನಲ್ಲೇ ಕೊಹ್ಲಿ ಆರ್​ಸಿಬಿ ತಂಡದ ನಾಯಕತ್ವಕ್ಕೂ ರಾಜೀನಾಮೆ ನೀಡಲಿದ್ದಾರೆ ಎಂಬ ಸುಳಿವನ್ನು ಬಾಲ್ಯದ ಕೋಚ್ ರಾಜ್ ಕುಮಾರ್ ಶರ್ಮಾ ನೀಡಿದ್ದರು. ಇದೀಗ ಮುಂದಿನ ಐಪಿಎಲ್​ನಲ್ಲಿ ಆಟಗಾರನಾಗಿ ಕಾಣಿಸಿಕೊಳ್ಳುವುದಾಗಿ ಕೊಹ್ಲಿ ಘೋಷಿಸಿದ್ದಾರೆ. ಇದರೊಂದಿಗೆ 8 ವರ್ಷಗಳ ಬಳಿಕ ಆರ್​ಸಿಬಿ ತಂಡಕ್ಕೆ ಹೊಸ ನಾಯಕ ಆಯ್ಕೆಯಾಗಲಿದ್ದಾರೆ.

ಇದನ್ನೂ ಓದಿ: IPL 2021: 5 ತಂಡಗಳಲ್ಲಿ 10 ಹೊಸ ವಿದೇಶಿ ಆಟಗಾರರು

ಇದನ್ನೂ ಓದಿ: IPL 2021: RCB ತಂಡದ ಗೇಮ್ ಚೇಂಜರ್ ಆಗಲಿದ್ದಾರೆ ಟಿಮ್ ಡೇವಿಡ್

ಇದನ್ನೂ ಓದಿ: ಗೂಗಲ್ ಬಿಗ್ ಆಫರ್: ಸ್ಮಾರ್ಟ್​ಫೋನ್ ಜೊತೆ ಕೇವಲ 1 ರೂ.ಗೆ ಸ್ಮಾರ್ಟ್​ ಸ್ಪೀಕರ್

(Virat Kohli to step down from RCB captaincy)

Published On - 10:40 pm, Sun, 19 September 21