AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಮೊದಲ ಪಂದ್ಯದಲ್ಲೇ ‘ಚಿನ್ನದ ಪದಕ’ ಗೆದ್ದ ವಿರಾಟ್ ಕೊಹ್ಲಿ

India vs Australia: ಇಶಾನ್ ಕಿಶನ್ (0), ರೋಹಿತ್ ಶರ್ಮಾ (0) ಹಾಗೂ ಶ್ರೇಯಸ್ ಅಯ್ಯರ್ (0) ಶೂನ್ಯಕ್ಕೆ ಔಟಾಗಿ ಅಚ್ಚರಿ ಮೂಡಿಸಿದರು. ಇದಾಗ್ಯೂ ವಿರಾಟ್ ಕೊಹ್ಲಿ (85) ಹಾಗೂ ಕೆಎಲ್ ರಾಹುಲ್ (97) 4ನೇ ವಿಕೆಟ್​ಗೆ 165 ರನ್​ಗಳ ಜೊತೆಯಾಟವಾಡಿದರು. ಅಂತಿಮವಾಗಿ 41.2 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 201 ರನ್​ಗಳಿಸುವ ಮೂಲಕ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

VIDEO: ಮೊದಲ ಪಂದ್ಯದಲ್ಲೇ 'ಚಿನ್ನದ ಪದಕ' ಗೆದ್ದ ವಿರಾಟ್ ಕೊಹ್ಲಿ
Virat Kohli
TV9 Web
| Updated By: ಝಾಹಿರ್ ಯೂಸುಫ್|

Updated on: Oct 09, 2023 | 3:55 PM

Share

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 5ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಭಾನುವಾರ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಟೀಮ್ ಇಂಡಿಯಾ ದಾಳಿಗೆ ತತ್ತರಿಸಿತು. ಜಸ್​ಪ್ರೀತ್ ಬುಮ್ರಾ ಎಸೆದ ಪಂದ್ಯದ ಮೂರನೇ ಓವರ್​ನ 2ನೇ ಎಸೆತದಲ್ಲಿ ಮಿಚೆಲ್ ಮಾರ್ಷ್​ ಅವರ ಬ್ಯಾಟ್​ಗೆ ತಾಗಿ ಚೆಂಡು ಸ್ಲಿಪ್​ನತ್ತ ಸಾಗಿತ್ತು. ಕ್ಷಣಾರ್ಧದಲ್ಲೇ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ವಿರಾಟ್ ಕೊಹ್ಲಿ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟಿದ್ದರು.

ಇದಾದ ಬಳಿಕ ಸ್ಪಿನ್ನರ್​ಗಳ ಮೋಡಿಗೆ ತಲೆಬಾಗಿದ ಆಸ್ಟ್ರೇಲಿಯನ್ನರು 49.3 ಓವರ್​ಗಳಲ್ಲಿ 199 ರನ್​ಗಳಿಗೆ ಆಲೌಟ್ ಆಗಿದ್ದರು. ಇನ್ನು 200 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿತ್ತು.

ಇಶಾನ್ ಕಿಶನ್ (0), ರೋಹಿತ್ ಶರ್ಮಾ (0) ಹಾಗೂ ಶ್ರೇಯಸ್ ಅಯ್ಯರ್ (0) ಶೂನ್ಯಕ್ಕೆ ಔಟಾಗಿ ಅಚ್ಚರಿ ಮೂಡಿಸಿದರು. ಇದಾಗ್ಯೂ ವಿರಾಟ್ ಕೊಹ್ಲಿ (85) ಹಾಗೂ ಕೆಎಲ್ ರಾಹುಲ್ (97) 4ನೇ ವಿಕೆಟ್​ಗೆ 165 ರನ್​ಗಳ ಜೊತೆಯಾಟವಾಡಿದರು. ಅಂತಿಮವಾಗಿ 41.2 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 201 ರನ್​ಗಳಿಸುವ ಮೂಲಕ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಕಿಂಗ್ ಕೊಹ್ಲಿಗೆ ಚಿನ್ನದ ಪದಕ:

ಈ ಗೆಲುವಿನ ಬಳಿಕ ಡ್ರೆಸ್ಸಿಂಗ್ ರೂಮ್​ನಲ್ಲಿ ನಡೆದ ಪ್ರಶಂಸಾ ಮೀಟ್​ನಲ್ಲಿ ವಿರಾಟ್ ಕೊಹ್ಲಿಗೆ ವಿಶೇಷ ಗೌರವ ನೀಡಲಾಯಿತು. ವಿಶ್ವಕಪ್​ನ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡುವ ಆಟಗಾರನಿಗೆ ಚಿನ್ನದ ಬಣ್ಣದ ಪದಕವನ್ನು ನೀಡುವ ಸಾಂಪ್ರದಾಯಕ್ಕೆ ಟೀಮ್ ಇಂಡಿಯಾ ನಾಂದಿಯಾಡಿದೆ.

ಅದರಂತೆ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಫೀಲ್ಡಿಂಗ್ ಮೂಲಕ ಟೀಮ್ ಇಂಡಿಯಾಗೆ ಗೆಲುವಿನಲ್ಲಿ ಎಲ್ಲಾ ರೀತಿಯಲ್ಲೂ ಕೊಡುಗೆ ನೀಡಿದ ವಿರಾಟ್ ಕೊಹ್ಲಿಗೆ ಮೊದಲ ಪದಕ ಒಲಿದಿದೆ. ಭಾರತ ತಂಡದ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಅವರು ಕೊಹ್ಲಿಗೆ ಪದಕ ನೀಡಿ ಗೌರವಿಸಿದ್ದು, ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Virat Kohli: ದಾಖಲೆಗಳ ಮೇಲೆ ದಾಖಲೆ ಬರೆದ ಕಿಂಗ್ ಕೊಹ್ಲಿ

ಭಾರತದ ಮುಂದಿನ ಪಂದ್ಯ ಯಾವಾಗ?

ಟೀಮ್ ಇಂಡಿಯಾ ತನ್ನ 2ನೇ ಪಂದ್ಯವನ್ನು ಅಕ್ಟೋಬರ್ 11 ರಂದು ಆಡಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು ಎದುರಿಸಲಿದೆ.