ICC Award: ಮೊದಲ ಬಾರಿಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಕಿಂಗ್ ಕೊಹ್ಲಿ..!

Virat Kohli: ಟಿ20 ವಿಶ್ವಕಪ್​ನಲ್ಲಿ ರನ್ ಮಳೆ ಹರಿಸುತ್ತಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ ಪ್ರಶಸ್ತಿ ಒಲಿದಿದೆ.

ICC Award: ಮೊದಲ ಬಾರಿಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಕಿಂಗ್ ಕೊಹ್ಲಿ..!
Virat Kohli
Follow us
TV9 Web
| Updated By: ಪೃಥ್ವಿಶಂಕರ

Updated on:Nov 07, 2022 | 5:29 PM

ಟಿ20 ವಿಶ್ವಕಪ್​ನಲ್ಲಿ (T20 World Cup) ರನ್ ಮಳೆ ಹರಿಸುತ್ತಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ (Virat Kohli) ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ ಪ್ರಶಸ್ತಿ ಒಲಿದಿದೆ. ಏಷ್ಯಾಕಪ್​ನಿಂದ ತನ್ನ ಹಳೆಯ ಫಾರ್ಮ್​ಗೆ ಮರಳಿರುವ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ತಮ್ಮ ಚೊಚ್ಚಲ ಶತಕ ಸೇರಿದಂತೆ ಹಲವು ಅರ್ಧಶತಕಗಳನ್ನು ಬಾರಿಸಿ ರನ್​ಗಳ ಗುಡ್ಡೆ ಹಾಕಿದ್ದರು. ಇದೀಗ ಅಕ್ಟೋಬರ್ ತಿಂಗಳ ಆಟಗಾರ ಪ್ರಶಸ್ತಿ (ICC Player of the Month) ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದ್ದು, ಪುರುಷರ ವಿಭಾಗದಲ್ಲಿ ಕಿಂಗ್ ಕೊಹ್ಲಿಗೆ ಈ ಪ್ರಶಸ್ತಿ ಲಭಿಸಿದೆ. ಪುರುಷರ ವಿಭಾಗದಲ್ಲಿ ಈ ಪ್ರಶಸ್ತಿಗೆ ಕೊಹ್ಲಿ ಜೊತೆ ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ ಮತ್ತು ಜಿಂಬಾಬ್ವೆಯ ಸಿಕಂದರ್ ರಾಜಾ ಕೂಡ ನಾಮನಿರ್ದೇಶನಗೊಂಡಿದ್ದರು.

ಈ ಕ್ಯಾಲೆಂಡರ್ ತಿಂಗಳಿನಲ್ಲಿ 205 ರನ್ ಗಳಿಸಿರುವ ವಿರಾಟ್ ತಮ್ಮ ಅತ್ಯುತ್ತಮ ಫಾರ್ಮ್ ಮುಂದುವರೆಸಿದ್ದಾರೆ. ಈ ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಗೆಲುವಿನ ನಾಯಕನಾಗಿ ಹೊರಹೊಮ್ಮಿರುವ ವಿರಾಟ್, ಪಾಕ್ ವಿರುದ್ಧದ ಮೊದಲ ಪಂದ್ಯದಲ್ಲಿ 53 ಎಸೆತಗಳಲ್ಲಿ ಅಜೇಯ 82 ರನ್‌ಗಳ ಅವಿಸ್ಮರಣೀಯ ಇನ್ನಿಂಗ್ಸ್ ಆಡಿದ್ದರು. ಕೊಹ್ಲಿಯ ಈ ಏಕಾಂಗಿ ಹೋರಾಟದ ಫಲವಾಗಿ ಟೀಂ ಇಂಡಿಯಾ ಬದ್ಧವೈರಿ ಪಾಕಿಸ್ತಾನವನ್ನು ಸೋಲಿಸಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿತ್ತು. ಆ ಬಳಿಕ ನೆದರ್ಲ್ಯಾಂಡ್ಸ್ ವಿರುದ್ಧ ಅಜೇಯ 62 ರನ್ ಗಳಿಸಿದ್ದ ವಿರಾಟ್, ಬಾಂಗ್ಲಾ ವಿರುದ್ಧದ ಪಂದ್ಯದಲ್ಲೂ ಅಜೇಯ ಅರ್ಧಶತಕ ಸಿಡಿಸಿ ಮಿಂಚಿದ್ದರು.

ಈ ಪುರಸ್ಕಾರವನ್ನು ಇನ್ನಷ್ಟು ವಿಶೇಷವಾಗಿಸಿದೆ

ಪ್ರಶಸ್ತಿ ಪ್ರಕಟವಾದ ಬಳಿಕ ಮಾತನಾಡಿದ ಬಳಿಕ ಈ ಬಗ್ಗೆ ಮಾತನಾಡಿದ ಕೊಹ್ಲಿ, ಅಕ್ಟೋಬರ್ ತಿಂಗಳ ಐಸಿಸಿ ಪುರುಷರ ತಿಂಗಳ ಆಟಗಾರನಾಗಿ ಆಯ್ಕೆಯಾಗಿರುವುದು ನನಗೆ ದೊಡ್ಡ ಗೌರವವಾಗಿದೆ. ಪ್ರಪಂಚದಾದ್ಯಂತದ ಅಭಿಮಾನಿಗಳು ಮತ್ತು ಪ್ಯಾನೆಲ್‌ನಿಂದ ಈ ತಿಂಗಳ ಆಟಗಾರನಾಗಿ ಆಯ್ಕೆಯಾಗಿರುವುದು ನನಗೆ ಈ ಪುರಸ್ಕಾರವನ್ನು ಇನ್ನಷ್ಟು ವಿಶೇಷವಾಗಿಸಿದೆ. ಜೊತೆಗೆ ಅಕ್ಟೋಬರ್‌ ತಿಂಗಳಲ್ಲಿ ಉತ್ತಮ ಆಟ ಪ್ರದರ್ಶಿಸಿ ಈ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದ ಇತರ ಆಟಗಾರರಿಗು ನಾನು ಗೌರವ ಸಲ್ಲಿಸಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

Published On - 4:39 pm, Mon, 7 November 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ