Virat Kohli: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ
ಮೊಹಮ್ಮದ್ ಶಮಿ ಟೀಮ್ ಇಂಡಿಯಾದ ಪ್ರಮುಖ ಭಾಗ. ಅವರು ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಇಂತಹ ಟೀಕೆಗಳನ್ನು ಮಾಡುವವರಿಗಾಗಿ ನನ್ನ ಸಮಯವನ್ನು ವ್ಯರ್ಥ ಮಾಡಲು ನಾನು ಬಯಸುವುದಿಲ್ಲ.
ಐಸಿಸಿ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಹೀನಾಯ ಪ್ರದರ್ಶನ ನೀಡಿರುವುದು ಕ್ರಿಕೆಟ್ ಪ್ರೇಮಿಗಳಲ್ಲಿ ನಿರಾಸೆ ಮೂಡಿಸಿದೆ. ಅದರಲ್ಲೂ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಸೋತಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದಾಗಿ ವಾರಗಳು ಕಳೆದಿವೆ. ಆದರೆ ಇದೇ ನೆಪವನ್ನು ಮುಂದಿಟ್ಟು ಇದೀಗ ವಿಕೃತರು ಸೋಷಿಯಲ್ ಮೀಡಿಯಾ ಮೂಲಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಮಗಳಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ.
ಅಕ್ಟೋಬರ್ 24 ರಂದು ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಭಾರತ 10 ವಿಕೆಟ್ಗಳ ಅಂತರದಿಂದ ಹೀನಾಯವಾಗಿ ಸೋಲನುಭವಿಸಿತ್ತು. ಈ ಪಂದ್ಯದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ದ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಕೋಮು ದಾಳಿ ನಡೆಸಿದ್ದರು. ಈ ಬಗ್ಗೆ ಸಚಿನ್ ತೆಂಡೂಲ್ಕರ್, ಹರ್ಭಜನ್ ಸಿಂಗ್, ಸೆಹ್ವಾಗ್ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿ, ಶಮಿ ಪರವಾಗಿ ನಿಂತಿದ್ದರು.
ಇದಾದ ಬಳಿಕ ನ್ಯೂಜಿಲೆಂಡ್ ವಿರುದ್ದದ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೇ ವಿಷಯವನ್ನು ಪ್ರಸ್ತಾಪಿಸಿದ್ದರು. ಶಮಿ ವಿರುದ್ದದ ಕೋಮು ನಿಂದನೆಯನ್ನು ಖಂಡಿಸಿದ ಕೊಹ್ಲಿ, ಒಂದು ಧರ್ಮವನ್ನು ಗುರಿಯಾಗಿಸಿ ಆಕ್ರಮಣ ಮಾಡುವುದು ಒಬ್ಬ ಮನುಷ್ಯ ಮಾಡಬಹುದಾದ ಅತ್ಯಂತ ಹೀನಾಯ ಕೃತ್ಯ. ಏಕೆಂದರೆ ಧರ್ಮ ಎಂಬುದು ಅತ್ಯಂತ ಪವಿತ್ರ ಮತ್ತು ವೈಯಕ್ತಿಕ ವಿಷಯವಾಗಿದೆ. ಯಾವುದೇ ವ್ಯಕ್ತಿಯನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಬಾರದು ಎಂದು ವಿರಾಟ್ ಕೊಹ್ಲಿ ಸ್ಪಷ್ಟವಾಗಿ ಹೇಳಿದರು.
ಅಷ್ಟೇ ಅಲ್ಲದೆ ಮೊಹಮ್ಮದ್ ಶಮಿ ಟೀಮ್ ಇಂಡಿಯಾದ ಪ್ರಮುಖ ಭಾಗ. ಅವರು ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಇಂತಹ ಟೀಕೆಗಳನ್ನು ಮಾಡುವವರಿಗಾಗಿ ನನ್ನ ಸಮಯವನ್ನು ವ್ಯರ್ಥ ಮಾಡಲು ನಾನು ಬಯಸುವುದಿಲ್ಲ. ನಾವು ಶಮಿ ಜೊತೆ ಶೇಕಡಾ 200 ರಷ್ಟು ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೊಹ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದರು.
ಕೊಹ್ಲಿಯ ಈ ಹೇಳಿಕೆಯ ಬೆನ್ನಲ್ಲೇ ಇದೀಗ ವಿಕೃತರು ಟೀಮ್ ಇಂಡಿಯಾ ನಾಯಕನ ವಿರುದ್ದ ತಿರುಗಿದ್ದಾರೆ. ಅನ್ಯಧರ್ಮೀಯನ ಪರ ನಿಂತಿದ್ದಕ್ಕಾಗಿ ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಕೊಹ್ಲಿಯ 10 ತಿಂಗಳ ಮಗುವಿನ ಮೇಲೆ ಅತ್ಯಾಚಾರ ಎಸೆಗುವುದಾಗಿ ಬೆದರಿಕೆಗಳ ಕಮೆಂಟ್ ಮಾಡುತ್ತಿದ್ದಾರೆ. ಈ ಕಮೆಂಟ್ಗಳು ಈಗ ವೈರಲ್ ಆಗುತ್ತಿದ್ದು, ಪಾಕ್ ಆಟಗಾರ ಮೊಹಮ್ಮದ್ ಅಮೀರ್ ಸೇರಿದಂತೆ ಅನೇಕರು ಇಂತಹ ನೀಚ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಕೋಮುಕಾರುವ ಕೆಲ ಕಿಡಿಗೇಡಿಗಳು ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತೆ ನಡೆದುಕೊಳ್ಳುತ್ತಿರುವುದು ದುರಂತ ಎನ್ನದೇ ವಿಧಿಯಿಲ್ಲ.
Kohli and Anushka’s 10-month-old daughter is getting rape threats because he decided to stand by his Muslim teammate, call out bigotry, and say discrimination on the basis of religion is wrong.
A 10-month-old child.
This is the India that we let happen.
— Andre Borges (@borges) October 31, 2021
The fact that Kohli and Anushka’s daughter is recieving rape threats and hate because of Kohli’s stand shows how much this country can stoop down and hate the girls and women here without an ounce of shame. How is this okay? It’s scary to think these people exist.
— anannya ✨ tANI SUPREMACY (@anxioushours7) October 31, 2021
ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ
ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ
(Virat Kohli’s 10-month-old daughter Vamika receives rape threats)