Virat Kohli: ಕಿಂಗ್ ಕೊಹ್ಲಿಯ ಸಹ ಆಟಗಾರರು ಈಗ ಅಂಪೈರ್ಸ್​..!

ಅಜಿತೇಶ್ ಮತ್ತು ತನ್ಮಯ್ ಅವರು ಆಗಸ್ಟ್ 17-19 ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿರುವ ಬಿಸಿಸಿಐ ಓರಿಯಂಟೇಶನ್ ಕಾರ್ಯಕ್ರಮ ಮತ್ತು ಸೆಮಿನಾರ್‌ಗಳಲ್ಲಿ ಭಾಗವಹಿಸಲಿದ್ದಾರೆ.

Virat Kohli: ಕಿಂಗ್ ಕೊಹ್ಲಿಯ ಸಹ ಆಟಗಾರರು ಈಗ ಅಂಪೈರ್ಸ್​..!
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 01, 2023 | 5:28 PM

2008 ರಲ್ಲಿ ವಿರಾಟ್ ಕೊಹ್ಲಿ (Virat Kohli) ನಾಯಕತ್ವದಲ್ಲಿ ಭಾರತ ಕಿರಿಯರ ತಂಡ ಅಂಡರ್​ 19 ವಿಶ್ವಕಪ್​ನಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಅಂದು ಕೊಹ್ಲಿಯ ಜೊತೆಗಿದ್ದ ಇಬ್ಬರು ಆಟಗಾರರು ಇದೀಗ ಹೊಸ ಇನಿಂಗ್ಸ್​ ಆರಂಭಿಸುತ್ತಿದ್ದಾರೆ. ಅದು ಕೂಡ ಅಂಪೈರ್​ಗಳಾಗಿ ಎಂಬುದು ವಿಶೇಷ. ವಿರಾಟ್ ಕೊಹ್ಲಿಯ ಜೊತೆಗೆ ಕ್ರಿಕೆಟ್​ ಕೆರಿಯರ್ ಆರಂಭಿಸಿದ್ದ ತನ್ಮಯ್ ಶ್ರೀವಾಸ್ತವ್ (33 ವರ್ಷ) ಮತ್ತು ಅಜಿತೇಶ್ ಅರ್ಗಲ್ (34 ವರ್ಷ) ಕೆಲ ವರ್ಷಗಳ ಹಿಂದೆ ವೃತ್ತಿ ಬದುಕಿಗೆ ವಿದಾಯ ಹೇಳಿದ್ದರು.

ಇದೀಗ ಈ ಇಬ್ಬರು ಕ್ರಿಕೆಟಿಗರು ಬಿಸಿಸಿಐ ನಡೆಸಿದ ಅಂಪೈರಿಂಗ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಅದರಂತೆ ಅಜಿತೇಶ್ ಮತ್ತು ತನ್ಮಯ್ ದೇಶೀಯ ಅಂಗಳದಲ್ಲಿ ಅಂಪೈರ್​ಗಳಾಗಿ ಕಾಣಿಸಿಕೊಳ್ಳುವ ದಿನ ದೂರವಿಲ್ಲ.

ತನ್ಮಯ್ ಶ್ರೀವಾಸ್ತವ್ – ಅಜಿತೇಶ್ ಅರ್ಗಲ್

ಬಿಸಿಸಿಐ ಸಮಿತಿಯ ಭಾಗ:

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಅಜಿತೇಶ್ ಮತ್ತು ತನ್ಮಯ್ ಅವರು ಆಗಸ್ಟ್ 17-19 ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿರುವ ಬಿಸಿಸಿಐ ಓರಿಯಂಟೇಶನ್ ಕಾರ್ಯಕ್ರಮ ಮತ್ತು ಸೆಮಿನಾರ್‌ಗಳಲ್ಲಿ ಭಾಗವಹಿಸಲಿದ್ದಾರೆ. ಆ ಬಳಿಕ ಮಂಡಳಿ ಆಯೋಜಿಸುವ ಪಂದ್ಯಗಳಲ್ಲಿ ಅಧಿಕೃತವಾಗಿ ಕಾಣಿಸಿಕೊಳ್ಳಲಿದ್ದಾರೆ.

ಅದರಂತೆ ವಿರಾಟ್ ಕೊಹ್ಲಿಯ ಸಹ ಆಟಗಾರರು ಪ್ರಥಮ ದರ್ಜೆ ಪಂಧ್ಯಗಳಲ್ಲಿ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇದಾದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅಂಪೈರಿಂಗ್ ಮಾಡಬೇಕೆಂದರೆ ಐಸಿಸಿ ನಡೆಸುವ ತೀರ್ಪುಗಾರರ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕಾಗುತ್ತದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾದ ಈ ಇಬ್ಬರು ಆಟಗಾರರು ಅಂತಾರಾಷ್ಟ್ರೀಯ ಪಂದ್ಯಗಳಲ್ಲೂ ಅಂಪೈರ್​ಗಳಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ