AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 1 ಶತಕದೊಂದಿಗೆ 15 ದಾಖಲೆಗಳು ನಿರ್ಮಿಸಿದ ಕಿಂಗ್ ಕೊಹ್ಲಿ

Virat Kohli: ಈ ಒಂದು ಭರ್ಜರಿ ಸೆಂಚುರಿಯೊಂದಿಗೆ ಕಿಂಗ್ ಕೊಹ್ಲಿ ಬರೋಬ್ಬರಿ 15 ದಾಖಲೆಗಳನ್ನು ನಿರ್ಮಿಸಿರುವುದು ವಿಶೇಷ. ಹಾಗಿದ್ರೆ ಆ ದಾಖಲೆಗಳಾವುವು ಎಂಬುದನ್ನು ನೋಡೋಣ...

Virat Kohli: 1 ಶತಕದೊಂದಿಗೆ 15 ದಾಖಲೆಗಳು ನಿರ್ಮಿಸಿದ ಕಿಂಗ್ ಕೊಹ್ಲಿ
Virat Kohli
TV9 Web
| Edited By: |

Updated on: Sep 10, 2022 | 11:24 AM

Share

ಅಫ್ಘಾನಿಸ್ತಾನ್ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಕೇವಲ 53 ಎಸೆತಗಳಲ್ಲಿ  ಭರ್ಜರಿ ಶತಕ ಸಿಡಿಸಿದ್ದರು. ಅಷ್ಟೇ ಅಲ್ಲದೆ ಅಂತಿಮ 61 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 122 ರನ್​ ಬಾರಿಸಿ ಮಿಂಚಿದ್ದರು. ವಿಶೇಷ ಎಂದರೆ ಇದು ವಿರಾಟ್ ಕೊಹ್ಲಿ 71ನೇ ಶತಕ. ಅಂದರೆ ಕೊಹ್ಲಿ 70 ಶತಕ ಬಾರಿಸಿ ಬರೋಬ್ಬರಿ 1020 ದಿನಗಳಾಗಿತ್ತು. ಇದೀಗ ಬರೋಬ್ಬರಿ 3 ವರ್ಷಗಳ ಬಳಿಕ ಕೊಹ್ಲಿ ಶತಕ ಬಾರಿಸಿದ್ದಾರೆ. ಇಲ್ಲಿ ಮತ್ತೊಂದು ವಿಶೇಷ ಎಂದರೆ ಇದು ವಿರಾಟ್ ಕೊಹ್ಲಿಯ ಮೊದಲ ಟಿ20 ಶತಕ ಎಂಬುದು. ಅಂದರೆ ಕೊಹ್ಲಿ ಐಪಿಎಲ್​ನಲ್ಲಿ ಶತಕ ಬಾರಿಸಿದ್ರೂ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ್ದು ಇದೇ ಮೊದಲು. ಇನ್ನು ಈ ಒಂದು ಭರ್ಜರಿ ಸೆಂಚುರಿಯೊಂದಿಗೆ ಕಿಂಗ್ ಕೊಹ್ಲಿ ಬರೋಬ್ಬರಿ 15 ದಾಖಲೆಗಳನ್ನು ನಿರ್ಮಿಸಿರುವುದು ವಿಶೇಷ. ಹಾಗಿದ್ರೆ ಆ ದಾಖಲೆಗಳಾವುವು ಎಂಬುದನ್ನು ನೋಡೋಣ…

  1.  ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ 4ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ಕೊಹ್ಲಿ ಬರೆದಿದ್ದಾರೆ.
  2. ವಿಶೇಷ ಎಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆ ಟ್​ನಲ್ಲಿ ಅತ್ಯಧಿಕ ಮೊತ್ತ ಬಾರಿಸಿದ ದಾಖಲೆ ಕೂಡ ಕೊಹ್ಲಿ ಪಾಲಾಗಿದೆ. ಈ ಹಿಂದೆ ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ದ 118 ರನ್​ ಬಾರಿಸಿದ್ದು ದಾಖಲೆಯಾಗಿತ್ತು.ಇದೀಗ ವಿರಾಟ್ ಕೊಹ್ಲಿ 122 ರನ್ ಬಾರಿಸಿ ಹೊಸ ದಾಖಲೆ ಬರೆದಿದ್ದಾರೆ.
  3. ಇನ್ನು ಅಫ್ಘಾನಿಸ್ತಾನ್ ವಿರುದ್ದ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೊಹ್ಲಿ ಬರೆದಿದ್ದಾರೆ.
  4. ಇದಲ್ಲದೆ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಶತಕ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ನಿರ್ಮಿಸಿದ್ದಾರೆ.ಸದ್ಯ ಈ ಪಟ್ಟಿಯಲ್ಲಿ 100 ಶತಕ ಬಾರಿಸಿದ ಸಚಿನ್ ಅಗ್ರಸ್ಥಾನದಲ್ಲಿದ್ದಾರೆ. ಇದೀಗ ಕೊಹ್ಲಿ 71 ಶತಕ ಬಾರಿಸಿ 2ನೇ ಸ್ಥಾನಕ್ಕೇರಿದ್ದಾರೆ.
  5. ಇನ್ನು ಟಿ20 ಕ್ರಿಕೆಟ್​ನಲ್ಲಿ ಇದು ವಿರಾಟ್ ಕೊಹ್ಲಿಯ ಅತ್ಯಧಿಕ ಮೊತ್ತ ಎಂಬುದು ವಿಶೇಷ. ಅಂದರೆ ಈ ಹಿಂದೆ ಆರ್​ಸಿಬಿ ಪರ ಕೊಹ್ಲಿ 113 ರನ್​ ಬಾರಿಸಿದ್ದರು. ಇದೀಗ 122 ರನ್ ಬಾರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.
  6. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 50 ಪ್ಲಸ್ ರನ್ ಬಾರಿಸಿದ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೊಹ್ಲಿ ಬರೆದಿದ್ದಾರೆ. ಅಂದರೆ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 32 ಅರ್ಧಶತಕ ಹಾಗೂ 1 ಶತಕ ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ.
  7. ಇದಲ್ಲದೆ ಟಿ20 ಕ್ರಿಕೆಟ್​ನಲ್ಲಿ 3500 ರನ್​ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ.
  8. ಹಾಗೆಯೇ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಶತಕ ಸಿಡಿಸಿ ಅಜೇಯರಾಗಿ ಉಳಿದ ದಾಖಲೆಯನ್ನೂ ಸಹ ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ.
  9. ಇನ್ನು ಏಷ್ಯಾಕಪ್ ಟಿ20 ಯಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ಬರೆದಿದ್ದಾರೆ.
  10. ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ಶತಕ ಗಳಿಸಿದ ನಾಲ್ಕನೇ ಭಾರತೀಯ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಸುರೇಶ್ ರೈನಾ, ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಈ ಸಾಧನೆ ಮಾಡಿದ್ದರು.
  11. ಟಿ20 ಕ್ರಿಕೆಟ್​ನಲ್ಲಿ 100 ಸಿಕ್ಸ್​ಗಳನ್ನು ಸಿಡಿಸಿದ 2ನೇ ಭಾರತೀಯ ಆಟಗಾರ ಹಾಗೂ ವಿಶ್ವದ 10ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ.
  12. ಯುಎಇ ಮೈದಾನದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಮೊತ್ತ ಬಾರಿಸಿದ ಬ್ಯಾಟ್ಸ್​ಮನ್ ಎಂಬ ದಾಖಲೆ ಕೂಡ ಇದೀಗ ವಿರಾಟ್ ಕೊಹ್ಲಿ (122)ಯ ಪಾಲಾಗಿದೆ.
  13. ಈ ಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 24 ಸಾವಿರ ರನ್​ಗಳ ಗಡಿದಾಟಿದ 7ನೇ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ 3ನೇ ಭಾರತೀಯ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ಮಾತ್ರ ಈ ಸಾಧನೆ ಮಾಡಿದ್ದರು.
  14. ಅತೀ ಕಡಿಮೆ ಇನಿಂಗ್ಸ್​ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 24 ಸಾವಿರ ರನ್ ಪೂರೈಸಿದ ದಾಖಲೆ ಕೂಡ ಈ ಶತಕದೊಂದಿಗೆ ಕೊಹ್ಲಿ ತಮ್ಮದಾಗಿಸಿಕೊಂಡಿರುವುದು ವಿಶೇಷ. ಕಿಂಗ್ ಕೊಹ್ಲಿ ಕೇವಲ 522 ಇನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
  15. ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಭಾರತೀಯ ಆಟಗಾರ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಟಿ20ಯಲ್ಲಿ 13 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿರುವ ಕೊಹ್ಲಿ ಅಫ್ಘಾನಿಸ್ತಾನದ ಮೊಹಮ್ಮದ್ ನಬಿಯ ಈ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

ಒಟ್ಟಿನಲ್ಲಿ 1 ಶತಕದ ಮೂಲಕ ಕಿಂಗ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಹಲವು ದಾಖಲೆ ಬರೆದು ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್