AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಗೆದ್ವಿ ಅನುಷ್ಕಾ.. ನಾವು ಗೆದ್ವಿ… ವಿರಾಟ್ ಕೊಹ್ಲಿ ವಿಡಿಯೋ ವೈರಲ್

India vs Australia: ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್​ನಲ್ಲಿ ಗೆದ್ದು ಭಾರತ ತಂಡ ಫೈನಲ್​ಗೆ ಪ್ರವೇಶಿಸಿದೆ. ಈ ಮಹತ್ವದ ಪಂದ್ಯದ ವೇಳೆ ವಿರಾಟ್ ಕೊಹ್ಲಿಯ ಪತ್ನಿ ಅನುಷ್ಕಾ ಶರ್ಮಾ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು. ಇತ್ತ ಭಾರತ ತಂಡ ಗೆಲ್ಲುತ್ತಿದ್ದಂತೆ ಕೊಹ್ಲಿ ಪತ್ನಿಯ ಮುಂದೆ ಮೈಮರೆತು ಸಂಭ್ರಮಿಸಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ನಾವು ಗೆದ್ವಿ ಅನುಷ್ಕಾ.. ನಾವು ಗೆದ್ವಿ... ವಿರಾಟ್ ಕೊಹ್ಲಿ ವಿಡಿಯೋ ವೈರಲ್
Virat Kohli - Anushaka Sharma
ಝಾಹಿರ್ ಯೂಸುಫ್
|

Updated on: Mar 05, 2025 | 8:25 AM

Share

ಚಾಂಪಿಯನ್ಸ್ ಟ್ರೋಫಿಯ ನಾಕೌಟ್ ಪಂದ್ಯದಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 4 ವಿಕೆಟ್​ಗಳಿಂದ ಸೋಲಿಸಿ ಟೀಮ್ ಇಂಡಿಯಾ ಫೈನಲ್​ಗೆ ಲಗ್ಗೆಯಿಟ್ಟಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಆಸೀಸ್ ಪರ ಸ್ಟೀವ್ ಸ್ಮಿತ್ (73) ಹಾಗೂ ಅಲೆಕ್ಸ್ ಕ್ಯಾರಿ (63) ಅರ್ಧಶತಕ ಬಾರಿಸಿದ್ದರು. ಈ ಹಾಫ್ ಸೆಂಚುರಿಗಳ ನೆರವಿನಿಂದ ಆಸ್ಟ್ರೇಲಿಯಾ ತಂಡವು 49.3 ಓವರ್​ಗಳಲ್ಲಿ 264 ರನ್​ಗಳಿಸಿ ಆಲೌಟ್ ಆಯಿತು.

265 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಕೇವಲ 8 ರನ್​ಗಳಿಸಿ ಔಟಾದರೆ, ಇದರ ಬೆನ್ನಲ್ಲೇ ರೋಹಿತ್ ಶರ್ಮಾ (28) ಕೂಡ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ ಮೂರನೇ ವಿಕೆಟ್​ಗೆ ಈ ಜೋಡಿ 91 ರನ್​ಗಳ ಪಾಲುದಾರಿಕೆ ಪ್ರದರ್ಶಿಸಿದರು. ಆದರೆ ತಂಡದ ಮೊತ್ತ 134 ರನ್ ಆಗಿದ್ದ ವೇಳೆ ಶ್ರೇಯಸ್ ಅಯ್ಯರ್ (45) ಬೌಲ್ಡ್ ಆದರು.

ಇದಾಗ್ಯೂ ಏಕಾಂಗಿ ಹೋರಾಟ ಮುಂದುವರೆಸಿದ ವಿರಾಟ್ ಕೊಹ್ಲಿ 98 ಎಸೆತಗಳಲ್ಲಿ 84 ರನ್ ಬಾರಿಸಿ ಔಟಾದರು. ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಅಜೇಯ 42 ರನ್ ಬಾರಿಸುವ ಮೂಲಕ 48.1 ಓವರ್​ಗಳಲ್ಲಿ ಟೀಮ್ ಇಂಡಿಯಾವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಭಾರತ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ.

ಇತ್ತ ಟೀಮ್ ಇಂಡಿಯಾ ಗೆಲುವು ಸಾಧಿಸುತ್ತಿದ್ದಂತೆ ಡ್ರೆಸ್ಸಿಂಗ್ ರೂಮ್​ನಿಂದ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆ ಗೆಲುವಿನ ಖುಷಿ ಹಂಚಿಕೊಂಡರು. ಅದು ಸಹ ನಾವು ಗೆದ್ವಿ ಅನುಷ್ಕಾ ಎಂಬ ಹಾವಭಾವ ಪ್ರದರ್ಶಿಸುವ ಮೂಲಕ ಎಂಬುದು ವಿಶೇಷ. ಇದೀಗ ಕಿಂಗ್ ಕೊಹ್ಲಿಯ ಈ ಸಂಭ್ರಮದ ವಿಡಿಯೋ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ವಿರಾಟ್ ಕೊಹ್ಲಿ ವಿಡಿಯೋ:

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.

ಇದನ್ನೂ ಓದಿ: Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಕೂಪರ್ ಕೊನೊಲಿ, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ಡ್ವಾರ್ಷಿಯಸ್, ನಾಥನ್ ಎಲ್ಲಿಸ್, ಆ್ಯಡಂ ಝಂಪಾ, ತನ್ವೀರ್ ಸಂಘ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ