AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಒಂದೇ ಪಂದ್ಯದಲ್ಲಿ ಚೇಸ್ ಮಾಸ್ಟರ್​ ಹೆಸರಿಗೆ 10 ದಾಖಲೆಗಳು ಸೇರ್ಪಡೆ

IPL 2026 RCB vs SRH: ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 69 ರನ್ ಬಾರಿಸಿದ್ದರು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 15.4 ಓವರ್​ಗಳಲ್ಲಿ ಗುರಿ ತಲುಪಿ 6 ವಿಕೆಟ್​ಗಳ ಭರ್ಜರಿ ಜಯ ತಂದುಕೊಟ್ಟಿದ್ದಾರೆ.

Virat Kohli: ಒಂದೇ ಪಂದ್ಯದಲ್ಲಿ ಚೇಸ್ ಮಾಸ್ಟರ್​ ಹೆಸರಿಗೆ 10 ದಾಖಲೆಗಳು ಸೇರ್ಪಡೆ
Virat Kohli
ಝಾಹಿರ್ ಯೂಸುಫ್
|

Updated on: Mar 29, 2026 | 1:28 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದ ಮೂಲಕವೇ ವಿರಾಟ್ ಕೊಹ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಕೇವಲ 38 ಎಸೆತಗಳಲ್ಲಿ 69 ರನ್ ಸಿಡಿಸುವ ಮೂಲಕ. ಈ 69 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಬರೆದಿರುವ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

  • 4000 ರನ್​: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಚೇಸಿಂಗ್​ನಲ್ಲಿ 4000 ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್ ಐಪಿಎಲ್​ನಲ್ಲಿ ಚೇಸಿಂಗ್​ ವೇಳೆ 4 ಸಾವಿರ ರನ್​ಗಳ ಗಡಿ ಮುಟ್ಟಿಲ್ಲ ಎಂಬುದು ವಿಶೇಷ.
  • ಟಾಪ್ ಸ್ಕೋರರ್: ಐಪಿಎಲ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಬಾರಿ ತಂಡದ ಪರ ಅತ್ಯಧಿಕ ರನ್ ಗಳಿಸಿದ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಈ ಹಿಂದೆ ಈ ದಾಖಲೆ ಡೇವಿಡ್ ವಾರ್ನರ್ (66) ಹೆಸರಿನಲ್ಲಿತ್ತು. ಇದೀಗ 67ನೇ ಬಾರಿ ಟಾಪ್ ಸ್ಕೋರರ್ ಆಗಿ ಹೊರಹೊಮ್ಮುವ ಮೂಲಕ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
  • ಗೆಲುವಿನ ಸರದಾರ: ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟ ಆಟಗಾರ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ. ಈ ಹಿಂದೆ ಈ ದಾಖಲೆ ಡೇವಿಡ್ ವಾರ್ನರ್ (41) ಹೆಸರಿನಲ್ಲಿತ್ತು. ಇದೀಗ ಆರ್‌ಸಿಬಿ ಗೆದ್ದ ಪಂದ್ಯಗಳಲ್ಲಿ ಕೊಹ್ಲಿ 42 ಬಾರಿ 50+ ಸ್ಕೋರ್​ಗಳಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
  • ಅಜೇಯ ದಾಂಡಿಗ: ಐಪಿಎಲ್‌ನಲ್ಲಿ 50+ ಸ್ಕೋರ್​ಗಳಿಸಿ ಅತ್ಯಧಿಕ ಬಾರಿ ಅಜೇಯರಾಗಿ ಉಳಿದ ಬ್ಯಾಟರ್ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ಎಬಿ ಡಿವಿಲಿಯರ್ಸ್ (23) ಹೆಸರಿನಲ್ಲಿತ್ತು. ಇದೀಗ 24ನೇ ಬಾರಿ ಅಜೇಯರಾಗಿ ಉಳಿಯುವ ಮೂಲಕ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ.
  • ಚೇಸಿಂಗ್​ನಲ್ಲಿ ಫಿಫ್ಟಿ: ಯಶಸ್ವಿ ಚೇಸಿಂಗ್ ವೇಳೆ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿದ ದಾಖಲೆ ಕೂಡ ಕಿಂಗ್ ಕೊಹ್ಲಿಯ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಡೇವಿಡ್ ವಾರ್ನರ್ (20) ಹಾಗೂ ಶಿಖರ್ ಧವನ್ (20) ಹೆಸರಿನಲ್ಲಿತ್ತು. ಇದೀಗ 21ನೇ ಬಾರಿ ಯಶಸ್ವಿ ಚೇಸಿಂಗ್​​ನಲ್ಲಿ 50 ಕ್ಕಿಂತ ಅಧಿಕ ಸ್ಕೋರ್​ಗಳಿಸಿ ಕೊಹ್ಲಿ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.
  • ಎಸ್‌ಆರ್‌ಹೆಚ್​ ವಿರುದ್ಧ ಅತ್ಯಧಿಕ ರನ್: ಸನ್​ರೈಸರ್ಸ್​ ಹೈದರಾಬಾದ್ ತಂಡದ ವಿರುದ್ಧ ಅತಿ ಹೆಚ್ಚು ರನ್ (874) ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.
  • ಸಿಕ್ಸರ್ ಸರದಾರ: ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಭಾರತೀಯ ಓಪನರ್ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕೆಎಲ್ ರಾಹುಲ್ (179) ಹೆಸರಿನಲ್ಲಿತ್ತು. ಇದೀಗ 181 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಸಿಕ್ಸರ್ ಸರದಾರ ಎನಿಸಿಕೊಂಡಿದ್ದಾರೆ.
  • ಅತ್ಯುತ್ತಮ ಸ್ಟ್ರೈಕ್ ರೇಟ್‌: ಐಪಿಎಲ್ ಇತಿಹಾಸದಲ್ಲಿ 150+ ಸ್ಟ್ರೈಕ್ ರೇಟ್​ನಲ್ಲಿ ಅತಿ ಹೆಚ್ಚು ಬಾರಿ ಟಾಪ್ ಸ್ಕೋರರ್ ಆಗಿ ಹೊರಹೊಮ್ಮಿದ್ದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಕಿಂಗ್ ಕೊಹ್ಲಿ 150 ಕ್ಕಿಂತ ಹೆಚ್ಚಿನ ಸ್ಟ್ರೈಕ್​ ರೇಟ್​ನಲ್ಲಿ 31ನೇ ಬಾರಿ 50+ ಸ್ಕೋರ್​​ ಗಳಿಸುವ ಮೂಲಕ ರೋಹಿತ್ ಶರ್ಮಾ (30) ಅವರ ದಾಖಲೆ ಮುರಿದಿದ್ದಾರೆ.

ಇದಲ್ಲದೆ ಐಪಿಎಲ್​ ಇತಿಹಾಸದಲ್ಲಿ ಒಂದೇ ತಂಡದ ಪರ 19 ಸೀಸನ್​ ಆಡಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಎಸ್​ಆರ್​ಹೆಚ್ ವಿರುದ್ಧ ಗಳಿಸಿದ 69 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೇರಿದ್ದಾರೆ.

ಇದನ್ನೂ ಓದಿ: ಅದ್ಭುತ ಕ್ಯಾಚ್ ಅನ್ನೇ​ ಮರೆತ ಡಿಕೆ: ‘ನಾಚಿಕೆಗೇಡು’ ಎಂದ ಫಿಲ್ ಸಾಲ್ಟ್

ಸದ್ಯ 13,612  ರನ್​ಗಳೊಂದಿಗೆ ಆರನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 951 ರನ್​ಗಳಿಸಿದರೆ ಕ್ರಿಸ್ ಗೇಲ್​ ( 14562) ವಿಶ್ವ ದಾಖಲೆ ಮುರಿದು ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

Follow Us