Virat Kohli Mother Health: ವಿರಾಟ್ ಕೊಹ್ಲಿ ತಾಯಿ ಸ್ಥಿತಿ ಗಂಭೀರ? ಸ್ಟಷ್ಟನೆ ನೀಡಿದ ವಿಕಾಸ್ ಕೊಹ್ಲಿ

|

Updated on: Feb 01, 2024 | 5:14 PM

Virat Kohli Mother Health: ವಿಕಾಸ್ ಕೊಹ್ಲಿ ತಮ್ಮ ತಾಯಿಯ ಬಗ್ಗೆ ಹಬ್ಬಿರುವ ವದಂತಿಯ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದು ಪೋಸ್ಟ್ ಮಾಡಿದ್ದು ಅದರಲ್ಲಿ, ನನ್ನ ತಾಯಿಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಅವರ ಆರೋಗ್ಯದ ಬಗ್ಗೆ ಇಲ್ಲ ಸಲ್ಲದ ಮಾತುಗಳು ಕೇಳಿಬರುತ್ತಿವೆ. ಆದರೆ ಈ ವದಂತಿಗಳೆಲ್ಲ ಸುಳ್ಳು. ನಮ್ಮ ತಾಯಿಯವರು ಆರೋಗ್ಯವಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Virat Kohli Mother Health: ವಿರಾಟ್ ಕೊಹ್ಲಿ ತಾಯಿ ಸ್ಥಿತಿ ಗಂಭೀರ? ಸ್ಟಷ್ಟನೆ ನೀಡಿದ ವಿಕಾಸ್ ಕೊಹ್ಲಿ
ತಾಯಿಯೊಂದಿಗೆ ವಿರಾಟ್ ಕೊಹ್ಲಿ
Follow us on

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಸದ್ಯ ಭಾರತ ತಂಡದಿಂದ ಹೊರಗುಳಿದಿದ್ದಾರೆ. ವಾಸ್ತವವಾಗಿ ಇಂಗ್ಲೆಂಡ್ ವಿರುದ್ಧದ (India vs England) ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಕೊಹ್ಲಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ, ಸರಣಿ ಆರಂಭಕ್ಕೆ ಕೆಲವು ದಿನಗಳಿರುವಾಗ ಕೊಹ್ಲಿ ತಮ್ಮ ಹೆಸರನ್ನು ತಂಡದಿಂದ ಹಿಂತೆಗೆದುಕೊಂಡಿದ್ದರು. ಈ ಬಗ್ಗೆ ಕೊಹ್ಲಿ ಯಾವುದೇ ಹೇಳಿಕೆಯನ್ನು ನೀಡಿಲ್ಲದಿದ್ದರೂ, ಕೆಲವು ಕೌಟುಂಬಿಕ ಕಾರಣಗಳಿಂದ ಕೊಹ್ಲಿ ಮೊದಲೆರಡು ಟೆಸ್ಟ್ ಪಂದ್ಯಗಳನ್ನು ಆಡಲು ಸಾಧ್ಯವಿಲ್ಲ ಎಂದು ಬಿಸಿಸಿಐ ಹೇಳಿತ್ತು. ಏತನ್ಮಧ್ಯೆ, ವಿರಾಟ್ ಕೊಹ್ಲಿ ಅವರ ತಾಯಿಯ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ವದಂತಿಗಳು ಹಬ್ಬುತ್ತಿದ್ದು, ಅದನ್ನು ಕೆಲವರು ನಿಜವೆಂದು ಭಾವಿಸಿದ್ದಾರೆ. ಇದೀಗ ಕೊಹ್ಲಿಯ ಕಿರಿಯ ಸಹೋದರ ವಿಕಾಸ್ ಕೊಹ್ಲಿ (Vikas Kohli) ಸಾಮಾಜಿಕ ಜಾಲತಾಣದಲ್ಲಿ ಈ ವದಂತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಈ ವದಂತಿಗಳೆಲ್ಲ ಸುಳ್ಳು

ವಿರಾಟ್ ಕೊಹ್ಲಿ ಸಹೋದರ ವಿಕಾಸ್ ಕೊಹ್ಲಿ ತಮ್ಮ ತಾಯಿಯ ಬಗ್ಗೆ ಹಬ್ಬಿರುವ ವದಂತಿಯ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದು ಪೋಸ್ಟ್ ಮಾಡಿದ್ದು ಅದರಲ್ಲಿ, ನನ್ನ ತಾಯಿಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಅವರ ಆರೋಗ್ಯದ ಬಗ್ಗೆ ಇಲ್ಲ ಸಲ್ಲದ ಮಾತುಗಳು ಕೇಳಿಬರುತ್ತಿವೆ. ಆದರೆ ಈ ವದಂತಿಗಳೆಲ್ಲ ಸುಳ್ಳು. ನಮ್ಮ ತಾಯಿಯವರು ಆರೋಗ್ಯವಾಗಿದ್ದಾರೆ. ಇಂತಹ ವಿಚಾರಗಳ ಬಗ್ಗೆ ಸಂಪೂರ್ಣ ಮಾಹಿತಿ ಸಿಗುವವರೆಗೆ ಯಾರೂ ಕೂಡ ಇಂತಹ ವಿಷಯಗಳನ್ನು ಪ್ರಚಾರ ಮಾಡಬಾರದು ಎಂದು ಬರೆದುಕೊಂಡಿದ್ದಾರೆ.

ಕೊಹ್ಲಿ ರೀ ಎಂಟ್ರಿ ಯಾವಾಗ?

ವಿರಾಟ್ ಕೊಹ್ಲಿ ಪ್ರಸ್ತುತ ಎರಡು ಟೆಸ್ಟ್‌ಗಳಿಂದ ಹೊರಗುಳಿದಿದ್ದಾರೆ. ಮೂರನೇ ಟೆಸ್ಟ್‌ಗೆ ಭಾರತ ತಂಡವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಇದರಲ್ಲಿ ಕೊಹ್ಲಿ ಮರಳುತ್ತಾರೋ ಇಲ್ಲವೋ ಎಂಬುದನ್ನು ಇನ್ನೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಕೆಲವು ವೈಯಕ್ತಿಕ ಕಾರಣಗಳಿಂದ ಕೊಹ್ಲಿ ಕ್ರಿಕೆಟ್‌ನಿಂದ ಅಲ್ಪ ವಿರಾಮ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಅವರು ಬಿಡುವಿನ ವೇಳೆಯಿಂದ, ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ ಅಥವಾ ಅವರ ಯಾವುದೇ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿಲ್ಲ.

ಫೆಬ್ರವರಿ 2 ರಿಂದ ಸರಣಿಯ ಎರಡನೇ ಪಂದ್ಯ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯ ನಡೆದಿದ್ದು, ಇದರಲ್ಲಿ ಭಾರತ ತಂಡ ಸೋಲನ್ನು ಎದುರಿಸಬೇಕಾಯಿತು. ಇದೀಗ ಎರಡನೇ ಪಂದ್ಯ ಫೆಬ್ರವರಿ 2 ರಿಂದ ವಿಶಾಖಪಟ್ಟಣದಲ್ಲಿ ಆರಂಭವಾಗಲಿದೆ. ಈ ಟೆಸ್ಟ್ ಮುಗಿದ ಬಳಿಕ ಮೂರನೇ ಟೆಸ್ಟ್ ಆರಂಭಕ್ಕೆ ಒಂದು ವಾರ ಅಂತರವಿದೆ. ಹೀಗಾಗಿ ಶೀಘ್ರದಲ್ಲೇ ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ಮರಳುವ ಸಾಧ್ಯತೆಗಳಿದ್ದು, ಮೂರನೇ ಟೆಸ್ಟ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ