ಆಸ್ಟ್ರೇಲಿಯಾ ವಿರುದ್ಧದ ಟಿ20ಯಲ್ಲಿ ಕೊಹ್ಲಿ 59.83 ಸರಾಸರಿಯಲ್ಲಿ ಬ್ಯಾಟ್ ಬೀಸಿದ್ದರೆ, ಅವರ ಸ್ಟ್ರೈಕ್ ರೇಟ್ 146.23 ಆಗಿದೆ.
ಅಂತಿಮವಾಗಿ, ವಿರಾಟ್ ಕೊಹ್ಲಿಯ (Virat Kohli) ಲಕ್ಷಾಂತರ ಅಭಿಮಾನಿಗಳು ಮಾತ್ರವಲ್ಲದೆ ಇಡೀ ಕ್ರಿಕೆಟ್ ಜಗತ್ತು ಕಾಯುತ್ತಿರುವ ದಿನ ಬಂದಿದೆ. ವಿರಾಟ್ ಕೊಹ್ಲಿ ಎರಡೂವರೆ ವರ್ಷಗಳ ನಂತರ ಶತಕ ಬಾರಿಸಿದ್ದಾರೆ. ಏಷ್ಯಾಕಪ್ನ (Asia Cup 2022) ಸೂಪರ್-4 ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧ ಅಜೇಯ 122 ರನ್ ಗಳಿಸಿದರು, ಇದು ಅವರ T20 ವೃತ್ತಿಜೀವನದ ಗರಿಷ್ಠ ಸ್ಕೋರ್ ಆಗಿದೆ. ಜೊತೆಗೆ ಈ ಶತಕದೊಂದಿಗೆ ಕಿಂಗ್, ಈ ಪಂದ್ಯದಲ್ಲಿ ಮಾಡಿದ ವಿಶೇಷ ದಾಖಲೆಗಳು ಈ ಕೆಳಗಿನಂತಿವೆ.
- ವಿರಾಟ್ ಕೊಹ್ಲಿ 1021 ದಿನಗಳ ನಂತರ ಶತಕ ಬಾರಿಸಿದ್ದಾರೆ. ವಿರಾಟ್ ಕೊಹ್ಲಿ ನವೆಂಬರ್ 23, 2019 ರಂದು ಬಾಂಗ್ಲಾದೇಶದ ವಿರುದ್ಧ ಬಾಂಗ್ಲಾದೇಶದ ವಿರುದ್ಧ ಕೊನೆಯ ಶತಕವನ್ನು ಗಳಿಸಿದರು. ಆನಂತರ ವಿರಾಟ್ ಯಾವ ಸ್ವರೂಪದಲ್ಲೂ ಶತಕ ಬಾರಿಸಿರಲಿಲ್ಲ. ಆದರೆ ಅಫ್ಘಾನಿಸ್ತಾನ ವಿರುದ್ಧ ಅವರು ಕೇವಲ 53 ಎಸೆತಗಳಲ್ಲಿ ಶತಕ ಗಳಿಸಿದರು.
- ವಿರಾಟ್ ಕೊಹ್ಲಿ T20 ಮಾದರಿಯ ಮೊದಲ ಶತಕ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್‌ನ 71 ನೇ ಶತಕವನ್ನು ಬಾರಿಸಿದ್ದಾರೆ. ಈ ಮೂಲಕ ಕೊಹ್ಲಿ, ಈಗ ಅತಿ ಹೆಚ್ಚು ಅಂತಾರಾಷ್ಟ್ರೀಯ ಶತಕಗಳನ್ನು ಗಳಿಸಿದ ವಿಚಾರದಲ್ಲಿ ರಿಕಿ ಪಾಂಟಿಂಗ್ ದಾಖಲೆಯನ್ನು ಸರಿಗಟ್ಟಿದ್ದಾರೆ. ವಿರಾಟ್ ಕೊಹ್ಲಿ 522 ಇನ್ನಿಂಗ್ಸ್‌ಗಳಲ್ಲಿ 71 ಶತಕಗಳನ್ನು ಪೂರ್ಣಗೊಳಿಸಿದ್ದಾರೆ. ಆದರೆ ಪಾಂಟಿಂಗ್ ಇದಕ್ಕಾಗಿ 668 ಇನ್ನಿಂಗ್ಸ್‌ಗಳನ್ನು ಆಡಿದ್ದರು.
- ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ಪರ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ 2017 ರಲ್ಲಿ ಶ್ರೀಲಂಕಾ ವಿರುದ್ಧ 118 ರನ್ ಗಳಿಸಿದ್ದ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದರು.
- ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20ಯಲ್ಲಿ ಶತಕ ಸಿಡಿಸಿದ ಅತಿ ಹಿರಿಯ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ 33 ವರ್ಷ, 307 ದಿನಗಳಲ್ಲಿ ಶತಕ ಬಾರಿಸಿದ್ದರು. 31 ವರ್ಷ, 299 ದಿನಗಳಲ್ಲಿ ಅಂತಾರಾಷ್ಟ್ರೀಯ ಟಿ20 ಶತಕ ಸಿಡಿಸಿದ್ದ ಸೂರ್ಯಕುಮಾರ್ ಯಾದವ್ ಅವರನ್ನು ವಿರಾಟ್ ಹಿಂದಿಕ್ಕಿದ್ದಾರೆ.
- ಏಷ್ಯಾಕಪ್‌ನಲ್ಲಿ ವಿರಾಟ್ ಕೊಹ್ಲಿ ನಾಲ್ಕನೇ ಶತಕ ದಾಖಲಿಸಿದರು. ಆದರೆ ಈ ಟೂರ್ನಿಯ ಟಿ20 ಮಾದರಿಯಲ್ಲಿ ಶತಕ ಸಿಡಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ, ಏಷ್ಯಾಕಪ್‌ನಲ್ಲಿ 3 ಅರ್ಧ ಶತಕಕ್ಕಿಂತ ಹೆಚ್ಚು ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.