AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ ನನಗೆ ಸರಿಸಾಟಿನಾ… ವಿರಾಟ್ ಕೊಹ್ಲಿಯ ಡೀಪ್ ಫೇಕ್ ವಿಡಿಯೋ ವೈರಲ್

ಕೃತಕ ಬುದ್ಧಿಮತ್ತೆ (AI) ಮೂಲಕ ಸೃಷ್ಟಿಸಲಾಗುವ ವಿಡಿಯೋಗಳು ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತ್ತು. ಅದರಲ್ಲೂ ಚಿತ್ರನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಅಂತಹದ್ದೇ ಡೀಪ್ ಫೇಕ್​ ವಿಡಿಯೋಗೆ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಗುರಿಯಾಗಿದ್ದಾರೆ.

ಗಿಲ್ ನನಗೆ ಸರಿಸಾಟಿನಾ... ವಿರಾಟ್ ಕೊಹ್ಲಿಯ ಡೀಪ್ ಫೇಕ್ ವಿಡಿಯೋ ವೈರಲ್
Virat kohli - Shubman gill
ಝಾಹಿರ್ ಯೂಸುಫ್
|

Updated on: Aug 29, 2024 | 11:17 AM

Share

ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಡೀಪ್ ಫೇಕ್ ವಿಡಿಯೋಗೆ ಗುರಿಯಾಗಿದ್ದಾರೆ. AI ಮೂಲಕ ರಚಿಸಲಾದ ವೀಡಿಯೊದಲ್ಲಿ, ಕೊಹ್ಲಿ ಭಾರತದ ಸಹ ಆಟಗಾರ ಶುಭಮನ್ ಗಿಲ್ ಅವರನ್ನು ಗುರಿಯಾಗಿಸಿ ಮಾತನಾಡುತ್ತಿರುವುದನ್ನು ಚಿತ್ರಿಸಲಾಗಿದೆ. ಸಂದರ್ಶನವೊಂದರ ತುಣುಕುಗಳನ್ನು ಬಳಸಿ ರಚಿಸಲಾದ ಈ ಡೀಪ್ ಫೇಕ್ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ತನ್ನೊಂದಿಗೆ ಶುಭ್​ಮನ್ ಗಿಲ್ ಅವರನ್ನು ಹೋಲಿಸುತ್ತಿರುವುದರ ಬಗ್ಗೆ ಮನಬಿಚ್ಚಿ ಮಾತನಾಡಿರುವುದನ್ನು ತೋರಿಸಲಾಗಿದೆ.

“ನಾನು ಗಿಲ್ ಅವರನ್ನು ತುಂಬಾ ಹತ್ತಿರದಿಂದ ನೋಡುತ್ತಿದ್ದೇನೆ. ನಿಸ್ಸಂದೇಹವಾಗಿ ಅವರು ಪ್ರತಿಭಾವಂತ ಆಟಗಾರ. ಆದರೆ ಅವರು ಲೆಜೆಂಡ್ ಆಟಗಾರನಾಗಲು ತುಂಬಾ ಅಂತರವಿದೆ. ಗಿಲ್ ಅವರ ಬ್ಯಾಟಿಂಗ್ ತಂತ್ರವು ಅದ್ಭುತವಾಗಿದೆ. ಇದಾಗ್ಯೂ ಆತ ನನಗಿಂತ ಮುಂದೆ ಹೋಗಲಾರ. ತುಂಬಾ ಮಂದಿ ಶುಭ್​ಮನ್ ಗಿಲ್ ಅವರನ್ನು ಮುಂದಿನ ವಿರಾಟ್ ಕೊಹ್ಲಿ ಎಂದು ಮಾತನಾಡುತ್ತಾರೆ. ಆದರೆ ವಿರಾಟ್ ಕೊಹ್ಲಿ ಯಾವತ್ತೂ ಒಬ್ಬನೇ… ಅದು ನಾನೇ ಎಂಬಾರ್ಥದಲ್ಲಿ ಮಾತನಾಡಿರುವುದನ್ನು ಡೀಪ್ ಫೇಕ್ ವಿಡಿಯೋದಲ್ಲಿ ತೋರಿಸಲಾಗಿದೆ.

ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಅದರಲ್ಲೂ ಕೆಲವರು ಡೀಪ್ ಫೇಕ್ ವಿಡಿಯೋ ಎಂದು ತಿಳಿಯದೇ ಕಿಂಗ್ ಕೊಹ್ಲಿ ವಿರುದ್ಧ ಆಕ್ರೋಶಗಳನ್ನು ಹೊರಹಾಕುತ್ತಿದ್ದಾರೆ. ಇನ್ನು ಕೆಲವರು AI ದುರ್ಬಳಕೆ ಮತ್ತು ಅದು ಎಷ್ಟು ಅಪಾಯಕಾರಿ ಎಂಬುದರ ಕುರಿತು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ವಿರಾಟ್ ಕೊಹ್ಲಿಯ ಡೀಪ್ ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ್ದು, ಇದರ ಬೆನ್ನಲ್ಲೇ ಡೀಪ್ ಫೇಕ್ ವಿಡಿಯೋಗೆ ಕಡಿವಾಣ ಹಾಕಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

ವಿರಾಟ್ ಕೊಹ್ಲಿಗೆ ವಿಶ್ರಾಂತಿ:

ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿದ್ದ ವಿರಾಟ್ ಕೊಹ್ಲಿ ಮುಂಬರುವ ದುಲೀಪ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಈ ಟೂರ್ನಿಯಲ್ಲಿ ಭಾರತ ಟೆಸ್ಟ್ ತಂಡದ ಆಟಗಾರರು ಪಾಲ್ಗೊಳ್ಳುವಂತೆ ಬಿಸಿಸಿಐ ಸೂಚಿಸಿದೆ. ಇದಾಗ್ಯೂ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ ಹಾಗೂ ರವಿಚಂದ್ರನ್ ಅಶ್ವಿನ್ ಅವರಿಗೆ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ: IPL 2025: LSG ನಾಯಕತ್ವದಿಂದ ಕೆಎಲ್ ರಾಹುಲ್​ ಕಿಕ್ ಔಟ್?

ಹೀಗಾಗಿ ವಿರಾಟ್ ಕೊಹ್ಲಿ ಮುಂಬರುವ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್​ ಸರಣಿಯ ಮೂಲಕ ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 19 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್ ಪಂದ್ಯಗಳನ್ನಾಡಲಿದ್ದು, ಈ ಸರಣಿಯ ಮೂಲಕ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರುವ ವಿಶ್ವಾಸದಲ್ಲಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!