ಕಾಮಿಡಿ ಸ್ಟಾರ್ ಕೊಹ್ಲಿ; ಶತಕಗಳ ವೀರನ ಈ ವಿಡಿಯೋ ನೋಡಿದ್ರೆ ನೀವು ಕೂಡ ನಗ್ತೀರ..!

Virat Kohli: ಬಾಂಗ್ಲಾದೇಶದ ಇನಿಂಗ್ಸ್‌ನ 10 ನೇ ಓವರ್‌ನ ಅಂತ್ಯದ ನಂತರ ತಂಡಗಳಿಹೆ ಡ್ರಿಂಕ್ಸ್ ಬ್ರೇಕ್ ನೀಡಲಾಯಿತು. ಈ ವೇಳೆ ಡ್ರಿಂಕ್ಸ್ ಬಾಯ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಚಿತ್ರ ರೀತಿಯಲ್ಲಿ ಓಡುತ್ತ ಆಟಗಾರರ ಬಳಿಗೆ ಬಂದರು. ವಿರಾಟ್‌ರ ಈ ಕಾಮಿಡಿ ಸೆನ್ಸ್ ಕಂಡು ಸಹ ಆಟಗಾರರೂ ನಗಲಾರಂಭಿಸಿದರು.

ಕಾಮಿಡಿ ಸ್ಟಾರ್ ಕೊಹ್ಲಿ; ಶತಕಗಳ ವೀರನ ಈ ವಿಡಿಯೋ ನೋಡಿದ್ರೆ ನೀವು ಕೂಡ ನಗ್ತೀರ..!
ವಿರಾಟ್ ಕೊಹ್ಲಿ
Follow us
ಪೃಥ್ವಿಶಂಕರ
|

Updated on:Sep 15, 2023 | 6:30 PM

ವಿರಾಟ್ ಕೊಹ್ಲಿಗೆ (Virat Kohli) ರನ್ ಗಳಿಸುವುದು ಮತ್ತು ಶತಕಗಳನ್ನು ಸಿಡಿಸುವುದು ಮಾತ್ರ ಗೊತ್ತು ಎಂದು ನೀವು ಭಾವಿಸಿದರೆ, ಅದು ತಪ್ಪು. ವಿರಾಟ್ ಕೊಹ್ಲಿ ಕೂಡ ಅದ್ಭುತ ಕಾಮಿಡಿ ಮಾಡಬಲ್ಲರು ಎಂಬುದನ್ನು ನಾವು ಈಗಾಗಲೇ ಹಲವು ಬಾರಿ ನೋಡಿದ್ದೇವೆ. ಇದೀಗ ನಡೆಯುತ್ತಿರುವ ಏಷ್ಯಾಕಪ್‌ನಲ್ಲಿಯೂ (Asia Cup 2023) ಕಿಂಗ್ ಕೊಹ್ಲಿ ಮಾಡಿರುವ ಕಾಮಿಡಿಯ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ವಾಸ್ತವವಾಗಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಸೂಪರ್ 4 ಸುತ್ತಿನ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ (India vs Bangladesh) ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿದೆ. ಆದರೆ ಪಂದ್ಯದ ವೇಳೆ ವಾಟರ್ ಬಾಯ್ ಆಗಿ ಕಾಣಿಸಿಕೊಂಡ ಕೊಹ್ಲಿ ಅಭಿಮಾನಿಗಳನ್ನು ಹುಚ್ಚೆದ್ದು ನಗುವಂತೆ ಮಾಡಿದ್ದಾರೆ. ಇದೀಗ ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಕಾಮಿಡಿ ಸ್ಟಾರ್ ಕೊಹ್ಲಿ

ಬಾಂಗ್ಲಾದೇಶದ ಇನಿಂಗ್ಸ್‌ನ 10 ನೇ ಓವರ್‌ನ ಅಂತ್ಯದ ನಂತರ ತಂಡಗಳಿಹೆ ಡ್ರಿಂಕ್ಸ್ ಬ್ರೇಕ್ ನೀಡಲಾಯಿತು. ಈ ವೇಳೆ ಡ್ರಿಂಕ್ಸ್ ಬಾಯ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಚಿತ್ರ ರೀತಿಯಲ್ಲಿ ಓಡುತ್ತ ಆಟಗಾರರ ಬಳಿಗೆ ಬಂದರು. ವಿರಾಟ್‌ರ ಈ ಕಾಮಿಡಿ ಸೆನ್ಸ್ ಕಂಡು ಸಹ ಆಟಗಾರರೂ ನಗಲಾರಂಭಿಸಿದರು. ಮತ್ತೊಂದೆಡೆ, ವಿರಾಟ್ ಕೊಹ್ಲಿಯ ಟೀಮ್ ಸ್ಪಿರಿಟ್ ಕಂಡು ಅಭಿಮಾನಿಗಳು ಅವರಿಗೆ ಸೆಲ್ಯೂಟ್ ಮಾಡುತ್ತಿರುವುದು ಕಂಡುಬಂತು.

8 ಏಕದಿನದಲ್ಲಿ 5 ರಲ್ಲಿ ವಿರಾಟ್​ಗೆ ವಿಶ್ರಾಂತಿ

ಅಂದಹಾಗೆ, ಕಳೆದ 8 ಏಕದಿನ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಐದನೇ ಬಾರಿಗೆ ವಿಶ್ರಾಂತಿ ಪಡೆದಿದ್ದಾರೆ ಎಂಬುದು ಕುತೂಹಲಕಾರಿ ಸಂಗತಿಯಾಗಿದೆ. ಈ ಹಿಂದೆ ನಡೆದ ನೇಪಾಳ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ಬ್ಯಾಟಿಂಗ್ ಅವಕಾಶ ಸಿಗಲಿಲ್ಲ. ಅಲ್ಲದೆ ಏಷ್ಯಾಕಪ್​ಗೂ ಮುನ್ನ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಮತ್ತು ಮೂರನೇ ಏಕದಿನ ಪಂದ್ಯಗಳಲ್ಲಿಯೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿತ್ತು. ಅದೇ ಸಮಯದಲ್ಲಿ, ಅವರು ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೂ ಬ್ಯಾಟ್ ಮಾಡಲಿಲ್ಲ. ಅಂದರೆ, ಕಳೆದ 8 ಏಕದಿನ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕೇವಲ 3 ಬಾರಿ ಬ್ಯಾಟಿಂಗ್‌ಗೆ ಇಳಿದಿದ್ದಾರೆ. ಈಗ ವಿರಾಟ್ ಕೊಹ್ಲಿ ವಿಶ್ವಕಪ್‌ಗೂ ಮುನ್ನ ಇನ್ನೂ ನಾಲ್ಕು ಏಕದಿನ ಪಂದ್ಯಗಳನ್ನು ಆಡಲಿದ್ದಾರೆ. ಇದರಲ್ಲಿ ಏಷ್ಯಾಕಪ್‌ನ ಫೈನಲ್ ಹೊರತಾಗಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಕೂಡ ಸೇರಿದೆ.

ಏಷ್ಯಾಕಪ್​ನಲ್ಲಿ ವಿರಾಟ್ ಕೊಹ್ಲಿಯ ದಾಖಲೆ ಹೇಗಿದೆ?: ಇಲ್ಲಿದೆ ಸಂಪೂರ್ಣ ವಿವರ

ತಂಡದಲ್ಲಿ ಐದು ಬದಲಾವಣೆ

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಐದು ಬದಲಾವಣೆಗಳನ್ನು ಮಾಡಿದೆ. ವಿರಾಟ್ ಕೊಹ್ಲಿ ಜೊತೆಗೆ ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ ತಿಲಕ್ ವರ್ಮಾ ಅವರಿಗೆ ಅವಕಾಶ ಸಿಕ್ಕಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:29 pm, Fri, 15 September 23

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ