Virat Kohli: ಅದ್ಭುತ ಫೀಲ್ಡಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ ವಿರಾಟ್ ಕೊಹ್ಲಿ

India vs Afghanistan: ಟೈನಲ್ಲಿ ಅಂತ್ಯ ಕಂಡ ಪಂದ್ಯವು ಆ ಬಳಿಕ ಸೂಪರ್​ ಓವರ್​ನತ್ತ ಸಾಗಿತು. ಸೂಪರ್ ಓವರ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 16 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೂಡ 16 ರನ್​ಗಳಿಸಿ ಸೂಪರ್ ಓವರ್​ ಅನ್ನು ಟೈ ಮಾಡಿಕೊಂಡಿತು.

Virat Kohli: ಅದ್ಭುತ ಫೀಲ್ಡಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ ವಿರಾಟ್ ಕೊಹ್ಲಿ
Virat Kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 18, 2024 | 7:37 AM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ್ (India vs Afghanistan) ನಡುವಣ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ (Team India) ಪರ ರೋಹಿತ್ ಶರ್ಮಾ (121) ಭರ್ಜರಿ ಶತಕ ಸಿಡಿಸಿದ್ದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ರಿಂಕು ಸಿಂಗ್ (69) ತಂಡಕ್ಕೆ ಆಸರೆಯಾಗಿದ್ದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 212 ರನ್​ ಕಲೆಹಾಕಿತು.

213 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಆರಂಭಿಕರಾದ ರಹಮಾನುಲ್ಲಾ ಗುರ್ಬಾಝ್ (50) ಹಾಗೂ ಇಬ್ರಾಹಿಂ ಝದ್ರಾನ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಪರಿಣಾಮ ಕೊನೆಯ 4 ಓವರ್​ಗಳಲ್ಲಿ 51 ರನ್ ಬೇಕಿತ್ತು. ಈ ಹಂತದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಗುಲ್ಬದ್ದೀನ್ ನೈಬ್ ಅಫ್ಘಾನಿಸ್ತಾನ್ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದರು. ಆದರೆ ಈ ಆಸೆಗೆ ತಣ್ಣೀರೆರೆಚ್ಚಿದ್ದು ವಿರಾಟ್ ಕೊಹ್ಲಿ ಎಂದರೆ ತಪ್ಪಾಗಲಾರದು.

ಏಕೆಂದರೆ ನಿರ್ಣಾಯಕವಾಗಿದ್ದ 17ನೇ ಓವರ್​ನಲ್ಲಿ ವಿರಾಟ್ ಕೊಹ್ಲಿ ಅತ್ಯದ್ಭುತ ಫೀಲ್ಡಿಂಗ್ ಪ್ರದರ್ಶಿಸಿದ್ದರು. ವಾಷಿಂಗ್ಟನ್ ಸುಂದರ್ ಎಸೆದ 17ನೇ ಓವರ್​ನ 4ನೇ ಎಸೆತದಲ್ಲಿ ಕರೀಮ್ ಜನತ್ ಲಾಂಗ್ ಆನ್​ನತ್ತ ಭರ್ಜರಿಯಾಗಿ ಬಾರಿಸಿದ್ದರು. ಇನ್ನೇನು ಚೆಂಡು ಬೌಂಡರಿ ಲೈನ್ ದಾಟಲಿದೆ ಅನ್ನುವಷ್ಟರಲ್ಲಿ ಸೂಪರ್​ಮ್ಯಾನ್​​ನಂತೆ ಜಿಗಿದ ವಿರಾಟ್ ಕೊಹ್ಲಿ ಚೆಂಡನ್ನು ತಡೆಯುವಲ್ಲಿ ಯಶಸ್ವಿಯಾದರು.

ಈ ಮೂಲಕ ಸಿಕ್ಸ್​ ಅನ್ನು ತಡೆದು ವಿರಾಟ್ ಕೊಹ್ಲಿ 5 ರನ್​ಗಳನ್ನು ಉಳಿಸಿದರು. ಕಿಂಗ್ ಕೊಹ್ಲಿಯ ಈ ಒಂದು ಅದ್ಭುತ ಫೀಲ್ಡಿಂಗ್​ ಟೀಮ್ ಇಂಡಿಯಾ ಪಾಲಿಗೆ ವರವಾಯಿತು. ಏಕೆಂದರೆ ಅಂತಿಮವಾಗಿ ಅಫ್ಘಾನಿಸ್ತಾನ್ 6 ವಿಕೆಟ್ ಕಳೆದುಕೊಂಡು 212 ರನ್​ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡರು.

ಒಂದು ವೇಳೆ ವಿರಾಟ್ ಕೊಹ್ಲಿಯ ಅತ್ಯಧ್ಭುತ ಫೀಲ್ಡಿಂಗ್​ನಿಂದ 5 ರನ್​ಗಳು ಸೇವ್ ಆಗದಿದ್ದರೆ ಅಫ್ಘಾನಿಸ್ತಾನ್ ತಂಡವು ಈ ಪಂದ್ಯದಲ್ಲಿ ಗೆಲ್ಲುತ್ತಿತ್ತು. ಆದರೆ ನಿಬ್ಬೆರಗಾಗುವಂತಹ ಫೀಲ್ಡಿಂಗ್ ಮೂಲಕ ವಿರಾಟ್ ಕೊಹ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿ ಬೇಷ್ ಎನಿಸಿಕೊಂಡರು.

ಟೀಮ್ ಇಂಡಿಯಾಗೆ ಜಯ:

ಟೈನಲ್ಲಿ ಅಂತ್ಯ ಕಂಡ ಪಂದ್ಯವು ಆ ಬಳಿಕ ಸೂಪರ್​ ಓವರ್​ನತ್ತ ಸಾಗಿತು. ಸೂಪರ್ ಓವರ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 16 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೂಡ 16 ರನ್​ಗಳಿಸಿ ಸೂಪರ್ ಓವರ್​ ಅನ್ನು ಟೈ ಮಾಡಿಕೊಂಡಿತು.

ಇದನ್ನೂ ಓದಿ: Virat Kohli: ಅತ್ಯಂತ ಕಳಪೆ ದಾಖಲೆ ಬರೆದ ಕಿಂಗ್ ಕೊಹ್ಲಿ

ಇನ್ನು ಎರಡನೇ ಸೂಪರ್​ ಓವರ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 5 ಎಸೆತಗಳಲ್ಲಿ 2 ವಿಕೆಟ್ ಕಳೆದುಕೊಂಡು 11 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 1 ರನ್​ಗಳಿಸುವಷ್ಟರಲ್ಲಿ 2 ವಿಕೆಟ್​ ಕಳೆದುಕೊಂಡು 10 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್