AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್​..!

India vs South Africa 2nd Test: ಟಿ20 ವಿಶ್ವಕಪ್ ಬಳಿಕ ನಾಯಕತ್ವದಿಂದ ಕೆಳಗಿಳಿದಿದ್ದ ಕೊಹ್ಲಿ ಅವರನ್ನು ಇತ್ತೀಚೆಗಷ್ಟೇ ಏಕದಿನ ತಂಡದ ನಾಯಕತ್ವದಿಂದ ಆಯ್ಕೆದಾರರು ಕೆಳಗಿಳಿಸಿದ್ದರು.

Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್​..!
Virat Kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 03, 2022 | 5:22 PM

ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಮೈದಾನದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ (India vs South Africa 2nd Test) ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಭಾರತದ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ (Virat Kohli) ಹೊರಗುಳಿದಿದ್ದಾರೆ. ಬೆನ್ನು ಮೂಳೆಯ ಸೆಳೆತ ನೋವಿನಿಂದ ಬಳಲುತ್ತಿರುವ ಕೊಹ್ಲಿ 2ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ತಂಡವನ್ನು ಉಪನಾಯಕ ಕೆಎಲ್ ರಾಹುಲ್ (KL Rahul) ಮುನ್ನಡೆಸುತ್ತಿದ್ದಾರೆ.

”ದುರದೃಷ್ಟವಶಾತ್, ವಿರಾಟ್ ಅವರ ಬೆನ್ನಿನ ಮೇಲ್ಭಾಗದಲ್ಲಿ ಸೆಳೆತವಿದೆ. ಹೀಗಾಗಿ ಫಿಸಿಯೋ ಅವರಿಗೆ ವಿಶ್ರಾಂತಿ ಸೂಚಿಸಿದ್ದಾರೆ. ಮುಂದಿನ ಟೆಸ್ಟ್​​ ವೇಳೆಗೆ ಅವರು ಚೇತರಿಸಿಕೊಳ್ಳುತ್ತಾರೆ ಎಂದು ಭಾವಿಸುತ್ತೇವೆ. ಇದು ವಿರಾಟ್ ಅವರ 99 ನೇ ಟೆಸ್ಟ್ ಪಂದ್ಯವಾಗಿತ್ತು. ಆದರೆ ಈ ಪಂದ್ಯವನ್ನು ಮಿಸ್ ಮಾಡಿಕೊಂಡಿರುವ ಕಾರಣ  ಅವರು ತಮ್ಮ 99 ನೇ ಟೆಸ್ಟ್ ಅನ್ನು ಕೇಪ್ ಟೌನ್‌ನಲ್ಲಿ ಆಡಲಿದ್ದಾರೆ ಎಂದು ಕೆಎಲ್ ರಾಹುಲ್ ಟಾಸ್ ವೇಳೆ ಹೇಳಿದ್ದರು.

ಇತ್ತ ವಿರಾಟ್ ಕೊಹ್ಲಿಯ ವಿಶ್ರಾಂತಿ ಸುದ್ದಿ ಬೆನ್ನಲ್ಲೇ ಅವರು 100ನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ ಎಂಬ ಚರ್ಚೆಗಳು ಶುರುವಾಗಿದೆ. ಇದಕ್ಕೆ ಸದ್ಯ ಸಿಗುವ ಉತ್ತರ ಬೆಂಗಳೂರು. ಹೌದು, ಫೆಬ್ರವರಿ 25 ರಿಂದ ಬೆಂಗಳೂರಿನಲ್ಲಿ ಶ್ರೀಲಂಕಾ ವಿರುದ್ದ ಟೆಸ್ಟ್ ಸರಣಿ ಆರಂಭವಾಗಲಿದೆ. ಅಂದರೆ ದಕ್ಷಿಣ ಆಫ್ರಿಕಾ ಸರಣಿಯ ಕೊನೆಯ ಟೆಸ್ಟ್​ ಬಳಿಕ ಕೊಹ್ಲಿ ಶ್ರೀಲಂಕಾ ವಿರುದ್ದ ತಮ್ಮ 100ನೇ ಟೆಸ್ಟ್ ಪಂದ್ಯವಾಡಲಿದ್ದಾರೆ.

ಆದರೆ ಇದೀಗ ಬೆಂಗಳೂರಿನಲ್ಲಿ ಕೊಹ್ಲಿ 100ನೇ ಟೆಸ್ಟ್ ಪಂದ್ಯವಾಡಲು 2ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದ್ರಾ ಎಂಬ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ದಿನಗಳ ಹಿಂದೆಯಷ್ಟೇ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ನೀಡಿರುವ ಹೇಳಿಕೆಗಳು.

ಹೌದು, ದಕ್ಷಿಣ ಆಫ್ರಿಕಾ ಪ್ರವಾಸ ಆರಂಭವಾದ ಬಳಿಕ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿಲ್ಲ. ಕೊಹ್ಲಿ ಮಾಧ್ಯಮಗಳ ಮುಂದೆ ಏಕೆ ಬರುತ್ತಿಲ್ಲ ಎಂಬ ಪ್ರಶ್ನೆಯನ್ನು ದಿನಗಳ ಹಿಂದೆಯಷ್ಟೇ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೇಳಲಾಗಿತ್ತು. ಈ ವೇಳೆ ಉತ್ತರಿಸಿದ ದ್ರಾವಿಡ್, ವಿರಾಟ್ ಕೊಹ್ಲಿ ಮಾಧ್ಯಮಗಳ ಮುಂದೆ ಬರದಿರಲು ನಿರ್ದಿಷ್ಟ ಕಾರಣವಿಲ್ಲ. ಇದಾಗ್ಯೂ ಅವರು 100ನೇ ಟೆಸ್ಟ್ ಪಂದ್ಯದ ದಿನದಂದು ಸುದ್ದಿಗಾರರೊಂದಿಗೆ ಮಾತನಾಡಲಿದ್ದಾರೆ ಎಂದು ತಿಳಿಸಿದ್ದರು.

ಇದೀಗ ಜೋಹಾನ್ಸ್​ಬರ್ಗ್​ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿರುವ ಕೊಹ್ಲಿ ಬೆಂಗಳೂರಿನಲ್ಲಿ 100ನೇ ಪಂದ್ಯವಾಡುವ ಸಾಧ್ಯತೆಯಿದೆ. ಇತ್ತ ಕೊಹ್ಲಿ ಪಾಲಿಗೆ ಬೆಂಗಳೂರು ಎಂಬುದು 2ನೇ ತವರು ಇದ್ದಂತೆ. ಏಕೆಂದರೆ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡುತ್ತಿರುವ ಕೊಹ್ಲಿ ಇದೀಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ನೂರನೇ ಮೈಲುಗಲ್ಲು ತಲುಪಲಿದ್ದಾರೆ.

ಟಿ20 ವಿಶ್ವಕಪ್ ಬಳಿಕ ನಾಯಕತ್ವದಿಂದ ಕೆಳಗಿಳಿದಿದ್ದ ಕೊಹ್ಲಿ ಅವರನ್ನು ಇತ್ತೀಚೆಗಷ್ಟೇ ಏಕದಿನ ತಂಡದ ನಾಯಕತ್ವದಿಂದ ಆಯ್ಕೆದಾರರು ಕೆಳಗಿಳಿಸಿದ್ದರು. ಇದರ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್​ನಲ್ಲೂ ಕೊಹ್ಲಿಯ ನಾಯಕನ ಸ್ಥಾನಕ್ಕೆ ಕಂಟಕ ಎದುರಾಗಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಅಷ್ಟೇ ಅಲ್ಲದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕೊಹ್ಲಿ ಬಿಸಿಸಿಐ ನಡೆಯ ಬಗ್ಗೆ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಬೆಂಗಳೂರಿನಲ್ಲಿ ವಿರಾಟ್ ಕೊಹ್ಲಿಯ 100ನೇ ಟೆಸ್ಟ್ ಪಂದ್ಯವಾಡಲಿದ್ದಾರೆ. ಅದೇ ದಿನವೇ ಕೊಹ್ಲಿ ಮತ್ತೆ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವ ರಾಜೀನಾಮೆ ನೀಡಲಿದ್ದಾರಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಅಷ್ಟೇ ಅಲ್ಲದೆ ಬಿಸಿಸಿಐ ಹಾಗೂ ವಿರಾಟ್ ಕೊಹ್ಲಿ ನಡುವೆ ಶೀತಲ ಸಮರ ಮುಂದುವರೆದಿಯಾ ಎಂಬ ಅನುಮಾನಗಳು ಮೂಡಲಾರಂಭಿಸಿದೆ. ಒಟ್ಟಿನಲ್ಲಿ ಕೊಹ್ಲಿ ಪಾಲಿನ 100ನೇ ಟೆಸ್ಟ್  ಹಾಗೂ ಕೋಚ್ ರಾಹುಲ್ ದ್ರಾವಿಡ್ ನೀಡಿರುವ ಕೊಹ್ಲಿ 100ನೇ ಟೆಸ್ಟ್ ಪಂದ್ಯದ ದಿನದಂದು ಸುದ್ದಿಗಾರರೊಂದಿಗೆ ಮಾತನಾಡಲಿದ್ದಾರೆ ಎಂಬ ಹೇಳಿಕೆಗಳು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ:  Team India: ಟೀಮ್ ಇಂಡಿಯಾ ಗೆದ್ದರೆ ಇತಿಹಾಸ: ಕೊಹ್ಲಿ ಪಾಲಿಗೆ ಹೊಸ ದಾಖಲೆ..!

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(Virat Kohli’s landmark 100th Test now likely to be in Bengaluru)

ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ