RCB ಪರ ಇನಿಂಗ್ಸ್ ಆರಂಭಿಸುವವರು ಯಾರು?

IPL 2026 RCB vs GT: ಐಪಿಎಲ್​ನ 71ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸುವರು ಯಾರು ಎಂಬುದೇ ಈಗ ಕುತೂಹಲ. ಏಕೆಂದರೆ ಆರ್​ಸಿಬಿ ತಂಡದಲ್ಲಿ ಒಟ್ಟು ಮೂವರು ಆರಂಭಿಕ ದಾಂಡಿಗರಿದ್ದಾರೆ. ಅವರೆಂದರೆ ಫಿಲ್ ಸಾಲ್ಟ್, ವೆಂಕಟೇಶ್ ಅಯ್ಯರ್ ಹಾಗೂ ಜೋರ್ಡನ್ ಕಾಕ್ಸ್​.

RCB ಪರ ಇನಿಂಗ್ಸ್ ಆರಂಭಿಸುವವರು ಯಾರು?
Rcb
Image Credit source: IPL

Updated on: May 26, 2026 | 7:40 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಧರ್ಮಶಾಲಾದ ಹೆಚ್​​ಪಿಸಿಎ ಮೈದಾನದಲ್ಲಿ ಇಂದು (ಮೇ 26) ನಡೆಯಲಿರುವ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸುವವರು ಯಾರು ಎಂಬುದೇ ಪ್ರಶ್ನೆ.

ಏಕೆಂದರೆ ಗಾಯದ ಕಾರಣ ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ಫಿಲ್ ಸಾಲ್ಟ್ ಇದೀಗ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಇದಾಗ್ಯೂ ಅವರು ಓಪನರ್ ಆಗಿ ಕಣಕ್ಕಿಳಿಯುವ ಬಗ್ಗೆ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಖಚಿತತೆ ನೀಡಿಲ್ಲ.

ಈ ಬಗ್ಗೆ ಮಾತನಾಡಿದ ರಜತ್ ಪಾಟಿದಾರ್, ಫಿಲ್ ಸಾಲ್ಟ್ ತಮ್ಮ ಬೆರಳಿನ ಗಾಯದಿಂದ ಚೇತರಿಸಿಕೊಂಡಿದ್ದು, ನೆಟ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ, ಅವರು ಇನ್ನು ಕೂಡ ವೈದ್ಯಕೀಯ ತಂಡದ ನಿಗಾದಲ್ಲಿದ್ದು, ಧರ್ಮಶಾಲಾ ಪಿಚ್ ನೋಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

  • ಆರ್​ಸಿಬಿ ತಂಡದ ಆರಂಭಿಕ ಬ್ಯಾಟರ್​ಗಳು
  • ಫಿಲ್ ಸಾಲ್ಟ್
  • ಜೇಕಬ್ ಬೆಥೆಲ್ (ಗಾಯಾಳು)
  • ಜೋರ್ಡನ್ ಕಾಕ್ಸ್​
  • ವೆಂಕಟೇಶ್ ಅಯ್ಯರ್
  • ವಿರಾಟ್ ಕೊಹ್ಲಿ (ಆರಂಭಿಕನಾಗಿ ಕಣಕ್ಕಿಳಿಯುವುದು ಖಚಿತ)

ಅಂದರೆ ವಿರಾಟ್ ಕೊಹ್ಲಿ ಜೊತೆ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ ಎಂಬುದನ್ನು ಇನ್ನೂ ಕೂಡ ನಿರ್ಧರಿಸಲಾಗಿಲ್ಲ. ಪಿಚ್​ ಮೇಲ್ಮೈ ನೋಡಿದ ಬಳಿಕವಷ್ಟೇ ಅವರನ್ನು ಪ್ಲೇಯಿಂಗ್ ಇಲೆವೆನ್​ಗೆ ಸೇರಿಸಿಕೊಳ್ಳಬೇಕಾ ಅಥವಾ ಬೇಡವಾ ಎಂಬುದನ್ನು ನಿರ್ಧರಿಸಲಿದ್ದೇವೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

ಈ ಹೇಳಿಕೆಯಿಂದಾಗಿಯೇ ಇದೀಗ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸುವವರು ಯಾರು ಎಂಬ ಗೊಂದಲ ಸೃಷ್ಟಿಯಾಗಿದೆ. ಏಕೆಂದರೆ ಸಾಲ್ಟ್ ಅನುಪಸ್ಥಿತಿಯಲ್ಲಿ ಕೆಲ ಮ್ಯಾಚ್​ಗಳಲ್ಲಿ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಅವರು ಕೂಡ ಗಾಯಗೊಂಡು ತಂಡದಿಂದ ಹೊರಗುಳಿದಿದ್ದಾರೆ.

ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಕೂಡ ಕಾಣಿಸಿಕೊಳ್ಳುವುದಿಲ್ಲ. ಇತ್ತ ಜೇಕಬ್ ಬೆಥೆಲ್ ಗಾಯಗೊಂಡಿದ್ದ ಕಾರಣ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್ ಆರಂಭಿಕನಾಗಿ ಕಾಣಿಸಿಕೊಂಡಿದ್ದರು. ಸಿಕ್ಕ ಅವಕಾಶವನ್ನು ಬಳಸಿಕೊಂಡ ಅಯ್ಯರ್ ಉತ್ತಮ ಆರಂಭ ಒದಗಿಸುವಲ್ಲಿ ಯಶಸ್ವಿಯಾಗಿದ್ದರು.

ಇದೀಗ ಫಿಲ್ ಸಾಲ್ಟ್​​ಗೆ ಅವಕಾಶ ನೀಡಬೇಕಿದ್ದರೆ ಇನ್​ಫಾರ್ಮ್​ನಲ್ಲಿರುವ ವೆಂಕಟೇಶ್ ಅಯ್ಯರ್ ಅವರನ್ನು ಕೈ ಬಿಡಬೇಕಾಗಿ ಬರಬಹುದು. ಇಲ್ಲಾ ಇಂಪ್ಯಾಕ್ಟ್ ಪ್ಲೇಯರ್ ಲಿಸ್ಟ್​ನಲ್ಲಿರಿಸಬೇಕಾಗುತ್ತದೆ. ಹೀಗಾಗಿಯೇ ಇದೀಗ ಆರ್​ಸಿಬಿ ಮ್ಯಾನೇಜ್ಮೆಂಟ್​ಗೆ ಆರಂಭಿಕನ ಆಯ್ಕೆಯೇ ಗೊಂದಲವಾಗಿ ಮಾರ್ಪಟ್ಟಿದೆ.

ಇದೇ ಖಾರಣದಿಂದಾಗಿಯೇ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್, ಆರಂಭಿಕ ಜೋಡಿಯನ್ನು ಇನ್ನೂ ಕೂಡ ನಿರ್ಧರಿಸಲಾಗಿಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ಗಾಯದಿಂದ ಚೇತರಿಸಿಕೊಂಡಿರುವ ಸಾಲ್ಟ್​ಗೆ ಈ ಪಂದ್ಯದಲ್ಲಿ ಚಾನ್ಸ್ ನೀಡಲು ನಿರ್ಧರಿಸಿದರೆ, ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ.

ಇದನ್ನೂ ಓದಿ: IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..!

ಇಲ್ಲದಿದ್ದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಆರಂಭಿಕರಾಗಿ ಮುಂದುವರೆಸಲಿದ್ದಾರೆ. ಅಂದರೆ ಇಲ್ಲಿ ಫಿಲ್ ಸಾಲ್ಟ್ ಹಾಗೂ ವೆಂಕಟೇಶ್ ಅಯ್ಯರ್ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿಯ ಕಾರಣ ಆರಂಭಿಕನಾಗಿ ತಂಡದಲ್ಲಿರುವ ಮತ್ತೋರ್ವ ಆಟಗಾರ ಜೋರ್ಡನ್ ಕಾಕ್ಸ್ ಈ ಬಾರಿ ಕೂಡ ಅವಕಾಶ ಸಿಗುವುದಿಲ್ಲ ಎಂದೇ ಹೇಳಬಹುದು.

 

 

Published On - 7:27 am, Tue, 26 May 26

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us