AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು?

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಹಲವು ಜನರು ಮೃತಪಟ್ಟು ಅನೇಕರು ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ಆರ್‌ಸಿಬಿ ತಂಡ ಸಂತಾಪ ಸೂಚಿಸಿದ್ದು, ವಿರಾಟ್ ಕೊಹ್ಲಿ ಆರ್‌ಸಿಬಿಯ ಸಂತಾಪ ಸಂದೇಶವನ್ನು ಮರುಹಂಚಿಕೊಂಡಿದ್ದಾರೆ. ಕೆಲವರು ಕೊಹ್ಲಿ ಅವರ ಪ್ರತಿಕ್ರಿಯೆಗೆ ಅಸಮಾಧಾನ ವ್ಯಕ್ತಪಡಿಸಿದರೆ, ಇನ್ನು ಕೆಲವರು ಅವರ ಕೆಲಸವನ್ನು ಸಮರ್ಥಿಸಿದ್ದಾರೆ.

ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು?
ವಿರಾಟ್
ರಾಜೇಶ್ ದುಗ್ಗುಮನೆ
|

Updated on: Jun 05, 2025 | 12:01 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Staduim) ಹೊರಭಾಗದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟು 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬರೋದನ್ನು ನೋಡಲು 2-3 ಲಕ್ಷ ಅಭಿಮಾನಿಗಳು ಸೇರಿದ್ದು ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಊಹೆಗೂ ಮೀರಿದ ಜನರು ಬಂದಿದ್ದರಿಂದ ಸಾಕಷ್ಟು ಹಾನಿ ಉಂಟಾಯಿತು. ಘಟನೆ ನಡೆಯುವ ವೇಳೆ ವಿರಾಟ್ ಕೊಹ್ಲಿ ಕೂಡ ಇದ್ದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯವನ್ನು ಅವರು ಹಂಚಿಕೊಂಡಿದ್ದಾರೆ.

ಜೂನ್ 3ರಂದು ಅಹಮದಾಬಾದ್​ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಆರ್​ಸಿಬಿ ಕಪ್ ಎತ್ತಿತು. 18 ವರ್ಷಗಳಲ್ಲಿ ಚೊಚ್ಚಲ ಬಾರಿ ಕಪ್ ಎತ್ತಿದ ಸಾಧನೆ ತಂಡ ಮಾಡಿದೆ. ಜೂನ್ 4ರಂದು ಬೆಳಿಗ್ಗೆ ಅಹಮದಾಬಾದ್​ನಿಂದ ಹೊರಟ ತಂಡ ಬೆಂಗಳೂರಿಗೆ ಆಗಮಿಸಿತು. ಮೊದಲು ಹೋಟೆಲ್​ಗೆ ತೆರಳಿ ಆ ಬಳಿಕ ವಿಧಾನಸೌಧಕ್ಕೆ  ತಂಡ ಬಂತು. ಅಲ್ಲಿ ಆಗಲೇ ಜನ ಸೇರಿದ್ದರು. ಆ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡ ಬರುತ್ತದೆ ಎಂಬ ಮಾಹಿತಿ ತಿಳಿದ ಜನರು ತಳ್ಳಾಡಿಕೊಂಡರು. ಸ್ಟೇಡಿಯಂ ಒಳಗೆ ಹೋಗುವ ಭರದಲ್ಲಿ ಕಾಲ್ತುಳಿತ ಉಂಟಾಯಿತು.

ಈ ಘಟನೆ ಬೆನ್ನಲ್ಲೆ ಆರ್​ಸಿಬಿ ಸಂತಾಪ ಸೂಚಿಸಿ ಪೋಸ್ಟ್ ಒಂದನ್ನು ಹಾಕಿದೆ. ಇದೇ ಪೋಸ್ಟ್​ನ ಕೊಹ್ಲಿ ರೀ-ಶೇರ್ ಮಾಡಿಕೊಂಡಿದ್ದಾರೆಯೇ ಹೊರತು ಬೇರೆ ಯಾವುದೇ ಪ್ರತ್ಯೇಕ ಪೋಸ್ಟ್ ಹಾಕಿಲ್ಲ. ಇದಕ್ಕೆ ಅನೇಕರು ಅಪಸ್ವರ ತೆಗೆದಿದ್ದಾರೆ. ಇನ್ನೂ ಕೆಲವರು ಕೊಹ್ಲಿ ಆರ್​ಸಿಬಿ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ, ಅವರು ಆರ್​ಸಿಬಿ ಪೋಸ್ಟ್​ನ ರೀ-ಶೇರ್ ಮಾಡಿಕೊಂಡು ಸಂತಾಪ ಸೂಚಿಸಿದ್ದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

View this post on Instagram

A post shared by Virat Kohli (@virat.kohli)

‘ಇಂದು ಮಧ್ಯಾಹ್ನ ತಂಡದ ಆಗಮನದ ನೀರಿಕ್ಷೆಯಲ್ಲಿ ಬೆಂಗಳೂರಿನವರು ಇದ್ದರು. ಆದರೆ, ಈ ವೇಳೆ ಸಂಭವಿಸಿದ ದುರದೃಷ್ಟಕರ ಘಟನೆಯಿಂದ ನಾವು ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ನಮಗೆ ಅತ್ಯಂತ ಮುಖ್ಯ ವಿಷಯ ಆಗಿದೆ. ದುರಂತದಿಂದ ಆದ ಜೀವ ಹಾನಿಗೆ ಆರ್​ಸಿಬಿ ಶೋಕ ವ್ಯಕ್ತಪಡಿಸುತ್ತಿದೆ. ಸಂತ್ರಸ್ತ ಕುಟುಂಬಕ್ಕೆ ನಮ್ಮ ಸಂತಾಪ’ ಎಂದು ಪೋಸ್ಟ್​ನಲ್ಲಿ ಇದೆ.

ಇದನ್ನೂ ಓದಿ:  ಐಪಿಎಲ್ ಗೆದ್ದ ನಂತರ ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್​​​ನಲ್ಲಿ ದೀರ್ಘ ಪೋಸ್ಟ್: ಏನು ಹೇಳಿದ್ದಾರೆ ನೋಡಿ

‘ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ ನಾವು ನಮ್ಮ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿಕೊಂಡೆವು. ಸ್ಥಳೀಯ ಆಡಳಿತದವರು ನೀಡಿದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ಸುರಕ್ಷಿತವಾಗಿರಿ ಎಂದು ನಮ್ಮ ಎಲ್ಲಾ ಬೆಂಬಲಿಗರನ್ನು ನಾವು ಒತ್ತಾಯಿಸುತ್ತೇವೆ’ ಎಂದು ಪೋಸ್ಟ್​ನಲ್ಲಿ ಬರೆಯಲಾಗಿದೆ.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ