ಬ್ಯಾಟ್ ಎಸೆದ ಫ್ಯಾನ್: ಗುರಾಯಿಸಿ ಎಚ್ಚರಿಕೆ ನೀಡಿದ ವಿರಾಟ್ ಕೊಹ್ಲಿ!

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಏಕದಿನ ಪಂದ್ಯದಲ್ಲಿ ಕಿವೀಸ್ ಪಡೆ 41 ಓವರ್‌ಗಳಲ್ಲಿ 134 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನತ್ತಿದ ಭಾರತ 26 ಓವರ್‌ಗಳಲ್ಲಿ 113 ರನ್ ಗಳಿಸಿದ್ದಾಗ ಮಳೆ ಬಂದಿದ್ದರಿಂದ, ಡಕ್ವರ್ತ್ ಲೂಯಿಸ್ (DLS) ನಿಯಮದ ಪ್ರಕಾರ ಭಾರತವನ್ನು 4 ರನ್‌ಗಳಿಂದ ವಿಜಯಿ ಎಂದು ಘೋಷಿಸಲಾಯಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಐದು ಮ್ಯಾಚ್​ಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಬ್ಯಾಟ್ ಎಸೆದ ಫ್ಯಾನ್: ಗುರಾಯಿಸಿ ಎಚ್ಚರಿಕೆ ನೀಡಿದ ವಿರಾಟ್ ಕೊಹ್ಲಿ!
Virat Kohli
Image Credit source: x.com

Updated on: Nov 08, 2026 | 10:56 AM

ವೆಲ್ಲಿಂಗ್ಟನ್‌ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮೈದಾನದಲ್ಲೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಪ್ರೇಕ್ಷಕರ ಗ್ಯಾಲರಿಯಿಂದ ಅಭಿಮಾನಿಯೊಬ್ಬರು ಎಸೆದ ಪ್ಲಾಸ್ಟಿಕ್ ಬ್ಯಾಟ್ ಕಂಡು ಕೊಹ್ಲಿ ಕೋಪಗೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ಏನಿದು ಘಟನೆ?

ಭಾರತ ತಂಡ ಫೀಲ್ಡಿಂಗ್ ಮಾಡುತ್ತಿದ್ದಾಗ, ಬೌಂಡರಿ ಲೈನ್ ಬಳಿ ನಿಂತಿದ್ದ ವಿರಾಟ್ ಕೊಹ್ಲಿ ಅವರಿಂದ ಆಟೋಗ್ರಾಫ್ ಪಡೆಯುವ ಆತುರದಲ್ಲಿ ಗ್ಯಾಲರಿಯಲ್ಲಿದ್ದ ಕೆಲವು ಯುವ ಅಭಿಮಾನಿಗಳು ಸಣ್ಣ ಪ್ಲಾಸ್ಟಿಕ್ ಆಟಿಕೆ ಬ್ಯಾಟ್‌ಗಳನ್ನು ಮೈದಾನದೊಳಗೆ ಎಸೆದರು.

Loading...

ಖಡಕ್ ಎಚ್ಚರಿಕೆ!

ಅಭಿಮಾನಿಗಳ ಈ ವರ್ತನೆಗೆ ಕೊಹ್ಲಿ ಆಟೋಗ್ರಾಫ್ ನೀಡುವ ಬದಲು ತೀವ್ರ ಅಸಮಾಧಾನ ಹೊರಹಾಕಿದರು. ಸುರಕ್ಷತೆಯ ದೃಷ್ಟಿಯಿಂದ ಮತ್ತು ಪಂದ್ಯಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಅಭಿಮಾನಿಗಳತ್ತ ತಿರುಗಿ ಬೆರಳು ತೋರಿಸಿ ಇಂತಹ ಕೆಲಸ ಮಾಡದಂತೆ ಖಡಕ್ ಎಚ್ಚರಿಕೆ ನೀಡಿದರು. ಬಳಿಕ ಮೈದಾನದಲ್ಲಿ ಬಿದ್ದಿದ್ದ ಆ ಪ್ಲಾಸ್ಟಿಕ್ ಬ್ಯಾಟ್ ಅನ್ನು ಕೈಗೆತ್ತಿಕೊಂಡು ಬೌಂಡರಿ ಲೈನ್‌ನಿಂದ ಹೊರಕ್ಕೆ ಎಸೆದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.
Virat Kohli Gets ANGRY After Fan Throws Plastic Bat Onto Field! 😱 | Kohli Viral Reaction Video

ಪಂದ್ಯದ ಫಲಿತಾಂಶ:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 22 ಓವರ್‌ಗಳಲ್ಲಿ 111 ರನ್‌ಗಳಿಗೆ ಆಲೌಟ್ ಆಯಿತು. ಸಾಧಾರಣ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ 22 ಓವರ್‌ಗಳಲ್ಲಿ 111 ರನ್ ಗಳಿಸಿದ್ದಾಗ ಮತ್ತೆ ಮಳೆ ಅಡ್ಡಿಪಡಿಸಿತು. ಅಂತಿಮವಾಗಿ ಡಕ್​ವರ್ತ್ ಲೂಯಿಸ್ (DLS) ನಿಯಮದನ್ವಯ ಭಾರತ 4 ರನ್‌ಗಳ ರೋಚಕ ಜಯ ಸಾಧಿಸಿತು. ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಕಾಯ್ದುಕೊಂಡಿದ್ದು, ಮುಂದಿನ ಪಂದ್ಯ ಮಂಗಳವಾರ ಹ್ಯಾಮಿಲ್ಟನ್‌ನಲ್ಲಿ ನಡೆಯಲಿದೆ.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಶುಭ್​ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ನಮನ್ ಧೀರ್, ಅನ್ಶುಲ್ ಕಂಬೋಜ್, ಆಕಿಬ್ ನಬಿ, ಗುರ್ನೂರ್ ಬ್ರಾರ್, ಅರ್ಷದೀಪ್ ಸಿಂಗ್.

ಇದನ್ನೂ ಓದಿ: ಹೃದಯವಂತ ಕನ್ನಡಿಗ: ಸ್ಮಾರ್ಟ್​ಫೋನ್ ಉಡುಗೊರೆಯಾಗಿ ನೀಡಿದ ರಾಹುಲ್

ನ್ಯೂಝಿಲೆಂಡ್ (ಪ್ಲೇಯಿಂಗ್ XI): ವಿಲ್ ಯಂಗ್, ಟಿಮ್ ಸೈಫರ್ಟ್, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಯಕ), ನಾಥನ್ ಸ್ಮಿತ್, ಕೈಲ್ ಜೇಮಿಸನ್, ಜೇಕಬ್ ಡಫಿ, ಬ್ಲೇರ್ ಟಿಕ್ನರ್.

 

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us