AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಕ್ರಿಕೆಟ್​ಗೆ ಕೊಹ್ಲಿ ವಿದಾಯ; ಕ್ರಿಕೆಟ್ ದೇವರ ದಾಖಲೆ ಮುರೆಯದೆ ಹೊರಟ ರನ್ ಸಾಮ್ರಾಟ

Virat Kohli Retires from Test Cricket: ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಇದರಿಂದ ಸಚಿನ್ ತೆಂಡೂಲ್ಕರ್ ಅವರ ಅನೇಕ ದಾಖಲೆಗಳು ಶಾಶ್ವತವಾಗಿ ಮುರಿಯದೆ ಉಳಿಯಲಿವೆ. ಸಚಿನ್ ದಾಖಲೆಯನ್ನು ಮುರಿಯುವ ಸಾಧ್ಯತೆಗಳಿದಿದ್ದು ಕೊಹ್ಲಿಗೆ ಮಾತ್ರ. ಆದರೆ ಟಿ20 ಹಾಗೂ ಟೆಸ್ಟ್​ಗೆ ಕೊಹ್ಲಿ ನಿವೃತ್ತಿ ಘೋಸಿರುವುದರಿಂದ ಆ ದಾಖಲೆಗಳನ್ನು ಮುರಿಯುವುದು ಅಸಾಧ್ಯವಾಗಿದೆ.

ಟೆಸ್ಟ್ ಕ್ರಿಕೆಟ್​ಗೆ ಕೊಹ್ಲಿ ವಿದಾಯ; ಕ್ರಿಕೆಟ್ ದೇವರ ದಾಖಲೆ ಮುರೆಯದೆ ಹೊರಟ ರನ್ ಸಾಮ್ರಾಟ
Virat Sachin
ಪೃಥ್ವಿಶಂಕರ
|

Updated on: May 12, 2025 | 8:54 PM

Share

ಸಚಿನ್ ತೆಂಡೂಲ್ಕರ್ (Sachin Tendulkar).. ಕ್ರಿಕೆಟ್ ಲೋಕದಲ್ಲಿ ಮಾತ್ರವಲ್ಲ ತನ್ನ ಆಟದಿಂದಾಗಿ ಇಡೀ ವಿಶ್ವದ ಮನೆ ಮಾತಾಗಿದ್ದವರು. ಆಡಿದ ಪ್ರತಿಯೊಂದು ಪಂದ್ಯದಲ್ಲೂ ಒಂದಿಲ್ಲೊಂದು ದಾಖಲೆಗಳನ್ನು ನಿರ್ಮಿಸಿದ್ದ ಕ್ರಿಕೆಟ್ ದೇವರ ದಾಖಲೆಗಳನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿತ್ತು. ಆದರೆ ಸಾಮಾನ್ಯ ಆಟಗಾರನಂತೆ ಭಾರತ ಕ್ರಿಕೆಟ್​ಗೆ ಕಾಲಿಟ್ಟಿದ್ದ ವಿರಾಟ್ ಕೊಹ್ಲಿ (Virat Kohli) ವರ್ಷದಿಂದ ವರ್ಷಕ್ಕೆ ತನ್ನ ಆಟದಲ್ಲಿ ಸುಧಾರಣೆ ತರುವುದರ ಜೊತೆಗೆ ರನ್​ಗಳ ಶಿಖರ ಕಟ್ಟಿದರು. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಗಳನ್ನು ಒಂದೊಂದಾಗಿ ಮುರಿಯುವ ಕೆಲಸವನ್ನು ಆರಂಭಿಸಿದ್ದರು. ಹೀಗಾಗಿ ಸಚಿನ್ ತೆಂಡೂಲ್ಕರ್ ಅವರ ಶತಕಗಳ ಶತಕ ಹಾಗೂ ಅತ್ಯಧಿಕ ರನ್​ಗಳ ದಾಖಲೆಯನ್ನು ಮುರಿಯಬಲ್ಲ ಏಕೈಕ ಕ್ರಿಕೆಟಿಗನಾಗಿ ಗುರುತಿಸಿಕೊಳ್ಳುತ್ತಿದ್ದ ವಿರಾಟ್ ಕೊಹ್ಲಿ ಇದೀಗ ಏಕಾಏಕಿ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದಾರೆ. ಇದೀಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವುದರೊಂದಿಗೆ, ಸಚಿನ್ ಅವರ ಆ 2 ದಾಖಲೆಗಳು ಶಾಶ್ವತವಾಗಿ ಅಮರವಾಗಿವೆ.

ಕನಸು ಕೂಡ ನನಸಾಗಲಿಲ್ಲ

ಕೆಲವೇ ದಿನಗಳ ಹಿಂದೆ ಹುಟ್ಟಿಕೊಂಡಿದ್ದ ಊಹಾಪೋಹಗಳಿಗೆ ಇಂದು ತೆರೆಬಿದ್ದಿದೆ. ವಿರಾಟ್ ಕೊಹ್ಲಿ ಕೊನೆಗೂ ತಮ್ಮ ನೆಚ್ಚಿನ ಮಾದರಿಯ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಈ ಸ್ವರೂಪದಲ್ಲಿ ರನ್ ಗಳಿಸಲು ಕಷ್ಟಪಡುತ್ತಿರುವ ವಿರಾಟ್, ಈ ಹೋರಾಟವನ್ನು ಇನ್ನು ಮುಂದೆ ಮುಂದುವರಿಸದಿರಲು ನಿರ್ಧರಿಸಿದ್ದಾರೆ. ಮೇ 12, ಸೋಮವಾರ ಅಭಿಮಾನಿಗಳಿಗೆ ನೀಡಿದ ಸಂದೇಶದಲ್ಲಿ, ತಮ್ಮ 123 ಪಂದ್ಯಗಳ ಸುದೀರ್ಘ ಟೆಸ್ಟ್ ವೃತ್ತಿಜೀವನಕ್ಕೆ ಶಾಶ್ವತ ವಿರಾಮ ನೀಡುವುದಾಗಿ ಘೋಷಿಸಿದರು. ಇದರೊಂದಿಗೆ, ಸಚಿನ್ ದಾಖಲೆಯನ್ನು ಮುರಿಯುವ ವಿರಾಟ್ ಕನಸು ಕೂಡ ನನಸಾಗಲಿಲ್ಲ.

100 ಅಂತರರಾಷ್ಟ್ರೀಯ ಶತಕ

ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ಆರಂಭವಾಗುವ ಸುಮಾರು 5 ವರ್ಷಗಳ ಹಿಂದೆ ವಿರಾಟ್ ಕೊಹ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದರು. ಹೀಗಾಗಿ ವಿರಾಟ್, ಸಚಿನ್ ಅವರ 100 ಶತಕಗಳ ದಾಖಲೆ ಮತ್ತು ಅತಿ ಹೆಚ್ಚು ರನ್‌ಗಳ ದಾಖಲೆಯನ್ನು ಮುರಿಯುತ್ತಾರೆ ಎಂದು ನಂಬಲಾಗಿತ್ತು. ಇದಕ್ಕೆ ಪೂರಕವಾಗಿ ಕೊಹ್ಲಿ 2023 ರಲ್ಲಿ ಏಕದಿನ ಮಾದರಿಯಲ್ಲಿ 50 ಕ್ಕೂ ಹೆಚ್ಚು ಶತಕಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನೂ ಬರೆದರು. ಆದರೆ ಟೆಸ್ಟ್‌ನಲ್ಲಿ ಮಾತ್ರ ಈ ಸಾಧನೆಯನ್ನು ಮಾಡಲು ಕೊಹ್ಲಿಗೆ ಸಾಧ್ಯವಾಗಲಿಲ್ಲ. ಈ ರೀತಿಯಾಗಿ, ಸಚಿನ್ ಅವರ 100 ಅಂತರರಾಷ್ಟ್ರೀಯ ಶತಕಗಳ ದಾಖಲೆಯನ್ನು ಮುರಿಯುವ ಕನಸು ಕೂಡ ನನಸಾಗಲಿಲ್ಲ.

Virat Kohli: ಟೆಸ್ಟ್ ವೃತ್ತಿಜೀವನದಲ್ಲಿ ಕಿಂಗ್ ಕೊಹ್ಲಿ ಮಾಡಿಕೊಂಡ ವಿವಾದಗಳು ಒಂದೆರಡಲ್ಲ; ನೀವೇ ನೋಡಿ

ಸಚಿನ್ ದಾಖಲೆ ಅಮರ

ಸಚಿನ್ 664 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 100 ಶತಕಗಳು ಸೇರಿದಂತೆ 34357 ರನ್ ಗಳಿಸಿದ್ದಾರೆ. ಈ ವಿಚಾರದಲ್ಲಿ ಅವರ ನಂತರ ಅಂದರೆ ಎರಡನೇ ಸ್ಥಾನದಲ್ಲಿರುವ ಕುಮಾರ್ ಸಂಗಕ್ಕಾರ 594 ಪಂದ್ಯಗಳಲ್ಲಿ 64 ಶತಕಗಳೊಂದಿಗೆ 28016 ರನ್ ಗಳಿಸಿ ನಿವೃತ್ತಿ ಘೋಷಿಸಿದ್ದಾರೆ. ಕೊಹ್ಲಿ ಇದುವರೆಗೆ 550 ಪಂದ್ಯಗಳಲ್ಲಿ 82 ಶತಕಗಳು ಸೇರಿದಂತೆ 27599 ರನ್ ಗಳಿಸಿದ್ದಾರೆ. ಇದರರ್ಥ ಕೊಹ್ಲಿ ಪ್ರಸ್ತುತ ಸಚಿನ್‌ಗಿಂತ ಸುಮಾರು 6 ಸಾವಿರ ರನ್‌ಗಳಷ್ಟು ಹಿಂದಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಟೆಸ್ಟ್ ಮತ್ತು ಟಿ20 ಯಿಂದ ನಿವೃತ್ತರಾಗಿರುವ ಕೊಹ್ಲಿಗೆ ಈ ದಾಖಲೆ ಮುರಿಯುವುದು ಅಸಾಧ್ಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!