AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನಿಂದ ಮಾತ್ರ ಇದು ಸಾಧ್ಯ’; ಮ್ಯಾಕ್ಸ್​ವೆಲ್ ದ್ವಿಶತಕದ ಆಟಕ್ಕೆ ಕಿಂಗ್ ಕೊಹ್ಲಿ ಕ್ಲೀನ್ ಬೌಲ್ಡ್

ICC World Cup 2023: ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಇನ್ನಿಂಗ್ಸ್ ಎಷ್ಟು ಅದ್ಭುತವಾಗಿತ್ತು ಎಂದರೆ 49 ಶತಕಗಳನ್ನು ಗಳಿಸಿದ ವಿರಾಟ್ ಕೊಹ್ಲಿ ಕೂಡ ಆಶ್ಚರ್ಯಚಕಿತರಾಗಿದ್ದು, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮ್ಯಾಕ್ಸ್‌ವೆಲ್​ರನ್ನು ಹಾಡಿ ಹೊಗಳಿದ್ದಾರೆ.

‘ನಿನ್ನಿಂದ ಮಾತ್ರ ಇದು ಸಾಧ್ಯ’; ಮ್ಯಾಕ್ಸ್​ವೆಲ್ ದ್ವಿಶತಕದ ಆಟಕ್ಕೆ ಕಿಂಗ್ ಕೊಹ್ಲಿ ಕ್ಲೀನ್ ಬೌಲ್ಡ್
ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್
ಪೃಥ್ವಿಶಂಕರ
|

Updated on:Nov 09, 2023 | 10:58 AM

Share

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಎಬ್ಬಿಸಿದ ಸುನಾಮಿಗೆ ಇಡೀ ಕ್ರಿಕೆಟ್ ಲೋಕವೇ ದಂಗಾಗಿ ಹೋಗಿದೆ. ಅಫ್ಘಾನಿಸ್ತಾನ ವಿರುದ್ಧದ (Australia vs Afghanistan) ವಿಶ್ವಕಪ್​ ಪಂದ್ಯದಲ್ಲಿ ದ್ವಿಶತಕದ ಇನ್ನಿಂಗ್ಸ್ ಆಡಿದ ಮ್ಯಾಕ್ಸ್​ವೆಲ್​ಗೆ ಕ್ರಿಕೆಟ್​ ಜಗತ್ತಿನ ಶ್ರೇಷ್ಠ ಆಟಗಾರರೆಲ್ಲ ಸಲಾಂ ಹೊಡೆದಿದ್ದಾರೆ. ಮ್ಯಾಕ್ಸ್‌ವೆಲ್ ಅವರ ಸಿಡಿಲಬ್ಬರ್ ಇನ್ನಿಂಗ್ಸ್ ನೋಡಿದ ಸಚಿನ್ ತೆಂಡೂಲ್ಕರ್, ಹರ್ಭಜನ್ ಸಿಂಗ್, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ್, ವಾಸಿಂ ಅಕ್ರಮ್, ಮಿಸ್ಬಾ ಉಲ್ ಹಕ್, ಡೇಲ್ ಸ್ಟೇಯ್ನ್ ಅವರಂತಹ ದಿಗ್ಗಜರು ತಮ್ಮ ಕ್ರಿಕೆಟ್ ಜೀವನದಲ್ಲಿ ಇಂತಹ ಇನ್ನಿಂಗ್ಸ್ ನೋಡಿರಲಿಲ್ಲ ಎಂದಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಇನ್ನಿಂಗ್ಸ್ ಎಷ್ಟು ಅದ್ಭುತವಾಗಿತ್ತು ಎಂದರೆ 49 ಶತಕಗಳನ್ನು ಗಳಿಸಿದ ವಿರಾಟ್ ಕೊಹ್ಲಿ (Virat Kohli) ಕೂಡ ಆಶ್ಚರ್ಯಚಕಿತರಾಗಿದ್ದು, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮ್ಯಾಕ್ಸ್‌ವೆಲ್​ರನ್ನು ಹಾಡಿ ಹೊಗಳಿದ್ದಾರೆ.

ಮ್ಯಾಕ್ಸ್​ವೆಲ್​ರನ್ನು ಹೊಗಳಿದ ವಿರಾಟ್

ವಿರಾಟ್ ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಹೊಗಳಿ ವಿಶೇಷವಾದ ಕಾಮೆಂಟ್ ಮಾಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್​ನಲ್ಲಿ ಮ್ಯಾಕ್ಸ್‌ವೆಲ್ ಅವರ ಫೋಟೋವನ್ನು ಹಂಚಿಕೊಂಡಿರುವ ಕೊಹ್ಲಿ, ‘ನಿನ್ನಿಂದ ಮಾತ್ರ ಇದು ಸಾಧ್ಯ’ ಎಂದು ಬರೆದುಕೊಂಡಿದ್ದಾರೆ.

Glenn Maxwell Records: ಗ್ಲೆನ್ ಮ್ಯಾಕ್ಸ್‌ವೆಲ್ ಅಬ್ಬರದ ದ್ವಿಶತಕಕ್ಕೆ ಹಳೆಯ ದಾಖಲೆಗಳೆಲ್ಲ ಉಡೀಸ್..!

ಆರ್​ಸಿಬಿ ಒಡನಾಟ

ವಾಸ್ತವವಾಗಿ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಒಂದೇ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಾರೆ. ಕಳೆದ ಕೆಲವು ವರ್ಷಗಳಿಂದ ಇವರಿಬ್ಬರೇ ಆರ್‌ಸಿಬಿಯ ಬ್ಯಾಟಿಂಗ್ ಕ್ರಮಾಂಕದ ಜೀವಾಳ. ಅಂತಹ ಪರಿಸ್ಥಿತಿಯಲ್ಲಿ, ವಿರಾಟ್ ಕೊಹ್ಲಿ ಮತ್ತು ಮ್ಯಾಕ್ಸ್‌ವೆಲ್ ಇಡೀ ವರ್ಷದಲ್ಲಿ ಕನಿಷ್ಠ 2 ರಿಂದ 3 ತಿಂಗಳುಗಳನ್ನು ಒಟ್ಟಿಗೆ ಕಳೆಯುತ್ತಾರೆ. ಆದ್ದರಿಂದ, ವಿರಾಟ್ ಈ ಆಸ್ಟ್ರೇಲಿಯಾದ ಆಲ್ ರೌಂಡರ್​ನನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಎಂಬುದರಲ್ಲಿ ಸಂದೇಹವಿಲ್ಲ.

ಮ್ಯಾಕ್ಸ್‌ವೆಲ್ ಸ್ಮರಣೀಯ ಇನ್ನಿಂಗ್ಸ್

ವಿಶ್ವಕಪ್-2023ರ 39ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಅಫ್ಘಾನಿಸ್ತಾನವನ್ನು 3 ವಿಕೆಟ್‌ಗಳಿಂದ ಸೋಲಿಸಿತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ 46.5 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 292 ರನ್‌ಗಳ ಗುರಿ ತಲುಪಿತು. ಆಸೀಸ್ ಪರ ಗ್ಲೆನ್ ಮ್ಯಾಕ್ಸ್‌ವೆಲ್ ದ್ವಿಶತಕ ಸಿಡಿಸಿದರು. ಮ್ಯಾಕ್ಸ್‌ವೆಲ್ ಕೇವಲ 128 ಎಸೆತಗಳನ್ನು ಎದುರಿಸಿ 21 ಬೌಂಡರಿ, 10 ಸಿಕ್ಸರ್‌ಗಳ ನೆರವಿನಿಂದ ಅಜೇಯ 201 ರನ್ ಸಿಡಿಸಿದರು. ಅಲ್ಲದೆ 8ನೇ ವಿಕೆಟ್‌ಗೆ ಪ್ಯಾಟ್ ಕಮಿನ್ಸ್ ಜೊತೆ 202 ರನ್‌ಗಳ ಜೊತೆಯಾಟವನ್ನು ನಡೆಸಿದರು. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದು, 8 ಪಂದ್ಯಗಳಲ್ಲಿ 12 ಅಂಕಗಳನ್ನು ಸಂಪಾಧಿಸಿ, ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:57 am, Thu, 9 November 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?