ಕಾಂಗ್ರೆಸ್ ಅಭ್ಯರ್ಥಿ ಪರ ವೀರೇಂದ್ರ ಸೆಹ್ವಾಗ್ ಬ್ಯಾಟಿಂಗ್

|

Updated on: Oct 03, 2024 | 11:45 AM

Haryana Election 2024: ಹರ್ಯಾಣ ವಿಧಾನಸಭಾ ಚುನಾವಣಾ ಮತದಾನ ಪ್ರಕ್ರಿಯೆ ಅಕ್ಟೋಬರ್ 5 ರಂದು ನಡೆಯಲಿದೆ. ಈ ಚುನಾವಣೆಯಲ್ಲಿ ತೋಷಮ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅನಿರುದ್ಧ್ ಚೌಧರಿ ಸ್ಪರ್ಧಿಸಿದ್ದು, ಅವರ ಪರ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಪ್ರಚಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪರ ವೀರೇಂದ್ರ ಸೆಹ್ವಾಗ್ ಬ್ಯಾಟಿಂಗ್
Virender Sehwag - Congress
Follow us on

ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹರ್ಯಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನಿರುದ್ಧ್ ಚೌಧರಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಬುಧವಾರ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಸೆಹ್ವಾಗ್, ಅಕ್ಟೋಬರ್ 5 ರಂದು ಅನಿರುದ್ಧ್ ಚೌಧರಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ.

ವೀರೇಂದ್ರ ಸೆಹ್ವಾಗ್ ಹಾಗೂ ಅನಿರುದ್ಧ್ ಚೌಧರಿ ತುಂಬಾ ಆಪ್ತರು. ಹೀಗಾಗಿಯೇ ಹರ್ಯಾಣದ ತೋಷಮ್‌ ಕ್ಷೇತ್ರದಿಂದ ಸ್ಪರ್ಧಿಸಿರುವ ಅನಿರುದ್ಧ್ ಚೌಧರಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ವೀರೇಂದ್ರ ಸೆಹ್ವಾಗ್, ಅನಿರುದ್ಧ್ ಚೌಧರಿ ಅವರು ನನಗೆ ಅಣ್ಣನ ಸಮಾನರು. ಅವರು ಸಾರ್ವಜನಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತಾರೆ ಎಂಬ ಸಂಪೂರ್ಣ ನಂಬಿಕೆ ಇದೆ. ಹೀಗಾಗಿ ಅನಿರುದ್ಧ್ ಚೌಧರಿ ಅವರನ್ನು ನೀವು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಅಲ್ಲದೆ ಅನಿರುದ್ಧ್ ಚೌಧರಿ ಚುನಾವಣೆಯಲ್ಲಿ ಗೆದ್ದರೆ ಖಂಡಿತವಾಗಿಯೂ ಅವರು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ. ಎಲ್ಲಾ ಬೇಡಿಕೆಗಳನ್ನು ಈಡೇರಿಸಲಿದ್ದಾರೆ ಎಂದು ವೀರೇಂದ್ರ ಸೆಹ್ವಾಗ್ ತೋಷಮ್ ಜನರಿಗೆ ಭರವಸೆ ನೀಡಿದರು.

ವೀರೇಂದ್ರ ಸೆಹ್ವಾಗ್ ಚುನಾವಣಾ ಭಾಷಣದ ವಿಡಿಯೋ:

ಹರ್ಯಾಣ ಚುನಾವಣೆ ಯಾವಾಗ?

ಹರ್ಯಾಣ ವಿಧಾನಸಭಾ ಚುನಾವಣಾ ಮತದಾನ ಪ್ರಕ್ರಿಯೆ ಅಕ್ಟೋಬರ್ 5 ರಂದು ನಡೆಯಲಿದೆ. ಇದೀಗ ವೀರೇಂದ್ರ ಸೆಹ್ವಾಗ್ ಅವರ ಪ್ರಚಾರದೊಂದಿಗೆ ತೋಷಮ್ ಕ್ಷೇತ್ರದಿಂದ ಭಾರೀ ಬಹುಮತದಲ್ಲಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ ಅನಿರುದ್ಧ್ ಚೌಧರಿ.

ವೀರು ವೃತ್ತಿಜೀವನ:

ಈಗಾಗಲೇ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಗುಡ್ ಬೈ ಹೇಳಿರುವ ವೀರೇಂದ್ರ ಸೆಹ್ವಾಗ್ ಕಾಮೆಂಟೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಭಾರತದ ಪರ 374 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ವೀರು 38 ಶತಕಗಳೊಂದಿಗೆ 17 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ಇದನ್ನೂ ಓದಿ: MS Dhoni: ಧೋನಿಯನ್ನು ಬ್ಯಾನ್ ಮಾಡಬೇಕಿತ್ತು: ವೀರೇಂದ್ರ ಸೆಹ್ವಾಗ್

ಇದೀಗ ಚುನಾವಣಾ ರಂಗದಲ್ಲೂ ಕಾಣಿಸಿಕೊಳ್ಳುವ ಮೂಲಕ ವೀರೇಂದ್ರ ಸೆಹ್ವಾಗ್ ಹೊಸ ಇನಿಂಗ್ಸ್ ಆರಂಭಿಸುವ ಸೂಚನೆ ನೀಡಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ವೀರು ರಾಜಕೀಯದಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

 

Published On - 11:42 am, Thu, 3 October 24