Virender Sehwag: ಕೊನೆಯ ಬಾರಿ ಶತಕ ಬಾರಿಸಿದ್ದು ಯಾವಾಗ? ಕೊಹ್ಲಿಯನ್ನು ವ್ಯಂಗ್ಯವಾಡಿದ ಸೆಹ್ವಾಗ್..!

| Updated By: ಝಾಹಿರ್ ಯೂಸುಫ್

Updated on: Jun 27, 2022 | 2:23 PM

Virat Kohli: ಈ ಹಿಂದೆ ಕೊಹ್ಲಿ ಫಾರ್ಮ್ ಬಗ್ಗೆ ಮಾತನಾಡಿದ ಮಾಜಿ ಕೋಚ್ ರವಿಶಾಸ್ತ್ರಿ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದರು. ಅದರಂತೆ ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ.

Virender Sehwag: ಕೊನೆಯ ಬಾರಿ ಶತಕ ಬಾರಿಸಿದ್ದು ಯಾವಾಗ? ಕೊಹ್ಲಿಯನ್ನು ವ್ಯಂಗ್ಯವಾಡಿದ ಸೆಹ್ವಾಗ್..!
Virender sehwag-Virat Kohli
Follow us on

ಕ್ರಿಕೆಟ್ ಅಂಗಳದಲ್ಲಿ ರನ್ ಮೆಷಿನ್ ಎಂದೇ ಖ್ಯಾತರಾಗಿದ್ದ ಟೀಮ್ ಇಂಡಿಯಾದ (Team India) ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಸದ್ಯ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಸೌತ್ ಆಫ್ರಿಕಾ ಪ್ರವಾಸ ಸರಣಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ಕೊಹ್ಲಿ, ಐಪಿಎಲ್ (IPL 2022)​ ಮೂಲಕ ಫಾರ್ಮ್ ಕಂಡುಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ ಕೇವಲ 22.73 ಸರಾಸರಿಯಲ್ಲಿ ರನ್​ಗಳಿಸಿ ನಿರಾಸೆ ಮೂಡಿಸಿದರು. ಅದರಲ್ಲೂ ಮೂರು ಬಾರಿ ಗೋಲ್ಡನ್ ಡಕ್​ಗೆ ಔಟಾಗಿ ಅಚ್ಚರಿ ಮೂಡಿಸಿದ್ದರು. ಇದೀಗ ಇಂಗ್ಲೆಂಡ್ (England vs India) ವಿರುದ್ದ ಟೆಸ್ಟ್ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ. ಜುಲೈ 1 ರಿಂದ ಶುರುವಾಗಲಿರುವ ಈ ಪಂದ್ಯದ ಮೂಲಕ ಕೊಹ್ಲಿ ತಮ್ಮ ಹಳೆಯ ಖದರ್ ತೋರಿಸಲಿದ್ದಾರೆ ಎಂಬ ವಿಶ್ವಾಸದಲ್ಲಿದ್ದಾರೆ ಅಭಿಮಾನಿಗಳು. ಆದರೆ ಇದೇ ವೇಳೆ ಕೊಹ್ಲಿಯ ಬ್ಯಾಟಿಂಗ್ ಪ್ರದರ್ಶನವನ್ನು ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ (Virender Sehwag) ವ್ಯಂಗ್ಯವಾಡಿದ್ದಾರೆ.

ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಶತಕ ಮೂಡಿಬಂದು 2 ವರ್ಷಗಳೇ ಕಳೆದಿವೆ. ಇಂತಹ ಪರಿಸ್ಥಿತಿಯಲ್ಲಿ ಇಂಗ್ಲೆಂಡ್ ಪ್ರವಾಸವು ಕೊಹ್ಲಿಗೆ ದೊಡ್ಡ ಸವಾಲಾಗಿದೆ. ಈ ಹಿಂದೆ ಕೊಹ್ಲಿ ಫಾರ್ಮ್ ಬಗ್ಗೆ ಮಾತನಾಡಿದ ಮಾಜಿ ಕೋಚ್ ರವಿಶಾಸ್ತ್ರಿ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದರು. ಅದರಂತೆ ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಮತ್ತೆ ಅಂಗಳಕ್ಕೆ ಮರಳಿರುವ ಕೊಹ್ಲಿ ಇಂಗ್ಲೆಂಡ್ ವಿರುದ್ದ ಕಣಕ್ಕಿಳಿಯಲಿದ್ದಾರೆ. ಆದರೆ ಈ ಪಂದ್ಯದಲ್ಲಾದರೂ ಶತಕ ಬಾರಿಸುತ್ತಾರಾ ಎಂದು ವೀರೇಂದ್ರ ಸೆಹ್ವಾಗ್ ಪ್ರಶ್ನಿಸಿದ್ದಾರೆ.

ಸಂವಾದವೊಂದರಲ್ಲಿ ಮಾತನಾಡಿದ ಟೀಮ್ ಇಂಡಿಯಾ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್, ‘ಕೊಹ್ಲಿ ಕೊನೆಯ ಶತಕ ಬಾರಿಸಿದ್ದು ನನಗಂತು ನೆನಪಿಲ್ಲ. ನಿಮಗೆ ನೆನಪಿದೆಯೇ? ಎಂದು ಪ್ರಶ್ನಿಸಿದ್ದರು. ಸರಣಿ ಗೆಲುವಿಗೆ ನಿರ್ಣಾಯಕವಾಗಿರುವ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಖಂಡಿತವಾಗಿಯೂ ದೊಡ್ಡ ಮೊತ್ತವನ್ನು ಗಳಿಸಲು ಬಯಸುತ್ತಾರೆ. ಹಾಗಾಗಿ ಅವರು ಶತಕ ಬಾರಿಸಲಿ ಎಂದು ನಾನು ಬಯಸುತ್ತೇನೆ. ಏಕೆಂದರೆ ಕೊಹ್ಲಿ ಯಾವಾಗ ಶತಕ ಬಾರಿಸಿದ್ದರು ಎಂಬುದೇ ನನಗೆ ನೆನಪಿಲ್ಲ ಎಂದು ಸೆಹ್ವಾಗ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್

ಇತ್ತ ವಿರಾಟ್ ಕೊಹ್ಲಿ ಲೀಸೆಸ್ಟರ್‌ಶೈರ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ 33 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 67 ರನ್ ಗಳಿಸಿ ತಮ್ಮ ಫಾರ್ಮ್​ ಮರಳುವಿಕೆಯನ್ನು ಸೂಚಿಸಿದ್ದರು. ಇದೀಗ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯಿದೆ. ಕಳೆದ ವರ್ಷ ನಡೆದಿದ್ದ ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಕೊರೋನಾ ಭೀತಿ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಆ ಪಂದ್ಯವನ್ನು ಜುಲೈ 1 ರಿಂದ ಆಡಲಿದೆ.

ವಿಶೇಷ ಎಂದರೆ ಈ ಟೆಸ್ಟ್​ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಮುನ್ನಡೆ ಹೊಂದಿದ್ದು, ಹೀಗಾಗಿ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಸಮಬಲಗೊಳಿಸುವ ಇರಾದೆಯಲ್ಲಿದೆ ಇಂಗ್ಲೆಂಡ್ ತಂಡ. ಹೀಗಾಗಿ ಇಂಗ್ಲೆಂಡ್ ವಿರುದ್ದ ಜುಲೈ 1 ರಿಂದ ಜುಲೈ 5ರವರೆಗೆ ನಡೆಯಲಿರುವ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿದೆ. ಒಂದು ವೇಳೆ ಈ ಪಂದ್ಯವನ್ನು ಟೀಮ್ ಇಂಡಿಯಾ ಡ್ರಾ ಮಾಡಿಕೊಂಡರೂ, ಸರಣಿಯನ್ನು ಗೆಲ್ಲಬಹುದು. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಹಾಗೂ ಕಳಪೆ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ ಪಾಲಿಗೆ ಬಹಳ ಮಹತ್ವದ್ದಾಗಿದೆ.