AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virender Sehwag: T20 ವಿಶ್ವಕಪ್​ಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ನ್ನು ಪ್ರಕಟಿಸಿದ ವಿರೇಂದ್ರ ಸೆಹ್ವಾಗ್

T20 World Cup 2021: ಈ ತಂಡದಲ್ಲಿ ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿದ ಸೂರ್ಯಕುಮಾರ್ ಯಾದವ್​ಗೆ ಸ್ಥಾನ ನೀಡಲಾಗಿದ್ದು, ಹಾಗೆಯೇ ಮೂವರು ಆಲ್​ರೌಂಡರ್​ಗಳನ್ನು ತಂಡದಲ್ಲಿರಿಸಿಕೊಂಡಿದ್ದಾರೆ.

Virender Sehwag: T20 ವಿಶ್ವಕಪ್​ಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ನ್ನು ಪ್ರಕಟಿಸಿದ ವಿರೇಂದ್ರ ಸೆಹ್ವಾಗ್
Virender Sehwag
TV9 Web
| Edited By: |

Updated on:Jul 28, 2021 | 9:05 PM

Share

ಟಿ20 ವಿಶ್ವಕಪ್‌ ಆರಂಭಕ್ಕೆ ಇನ್ನು ಕೆಲವೇ ತಿಂಗಳುಗಳು ಮಾತ್ರ ಉಳಿದಿವೆ. ಎಲ್ಲಾ ತಂಡಗಳು ಚುಟುಕ ಕ್ರಿಕೆಟ್ ಕದನಕ್ಕಾಗಿ ಭರ್ಜರಿ ತಯಾರಿಯಲ್ಲಿದ್ದಾರೆ. ಭಾರತದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಯುಎಇನಲ್ಲಿ ಜರುಗಲಿದೆ. ಐಪಿಎಲ್​ನ ಉಳಿದ 31 ಪಂದ್ಯಗಳು ಕೂಡ ಯುಎಇನಲ್ಲೇ ನಡೆಯಲಿದ್ದು, ಇದರ ಬೆನ್ನಲ್ಲೇ ಟಿ20 ವಿಶ್ವ ನಡೆಯುವುದರಿಂದ ಐಪಿಎಲ್​ನಲ್ಲಿ ಭಾಗವಹಿಸಿದ ವಿದೇಶಿ ಆಟಗಾರರಿಗೆ ಹೆಚ್ಚು ಅನುಕೂಲವಾಗಲಿದೆ. ಅತ್ತ ಟೀಮ್ ಇಂಡಿಯಾಗೆ ಟಿ20 ವಿಶ್ವಕಪ್ ಆತಿಥ್ಯದ ಹೋಮ್ ಗ್ರೌಂಡ್ ಅವಕಾಶ ಕೈತಪ್ಪಿದರೂ ಐಪಿಎಲ್​ನಿಂದ ಹೆಚ್ಚಿನ ಲಾಭವಾಗಲಿದೆ. ಹೀಗಾಗಿಯೇ ಈ ಬಾರಿ ಟಿ20 ವಿಶ್ವಕಪ್ ಯಾರು ಗೆಲ್ಲಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ. ಈ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾ ಮಾಜಿ ಸ್ಪೋಟಕ ಬ್ಯಾಟ್ಸ್​ಮನ್ ವಿರೇಂದ್ರ ಸೆಹ್ವಾಗ್ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಬೇಕೆಂದು ತಿಳಿಸಿದ್ದಾರೆ.

ಈ ತಂಡದಲ್ಲಿ ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿದ ಸೂರ್ಯಕುಮಾರ್ ಯಾದವ್​ಗೆ ಸ್ಥಾನ ನೀಡಲಾಗಿದ್ದು, ಹಾಗೆಯೇ ಮೂವರು ಆಲ್​ರೌಂಡರ್​ಗಳನ್ನು ತಂಡದಲ್ಲಿರಿಸಿಕೊಂಡಿದ್ದಾರೆ. ಅದರಂತೆ ಕಿಂಗ್ ಕೊಹ್ಲಿ ಮುನ್ನಡೆಸಲಿರುವ ತಂಡದಲ್ಲಿ ಆಲ್​ರೌಂಡರ್ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ, ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್​ ಅವರನ್ನು ಆಯ್ಕೆ ಮಾಡಿದ್ದಾರೆ. ಅದೇ ರೀತಿ ಸ್ಪಿನ್ನರ್ ಆಗಿ ಚಹಲ್​ರನ್ನು ಆರಿಸಿಕೊಂಡಿದ್ದು, ಅವರಿಗೆ ಜಡೇಜಾ ಸಾಥ್ ನೀಡಲಿದ್ದಾರೆ. ಇನ್ನು ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ್​ ಕುಮಾರ್ ಅವರನ್ನು ಆರಿಸಿಕೊಂಡಿದ್ದಾರೆ ಹಾಗೆಯೇ ಈ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅವರಿಗೂ ಸ್ಥಾನ ನೀಡಿರುವುದು ವಿಶೇಷ.

ಸೆಹ್ವಾಗ್ ಅವರ ಪ್ರಕಾರ, ಈ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ವೊಂದನ್ನು ಕಣಕ್ಕಿಳಿಸಿದರೆ ಭಾರತ ಕಪ್ ಗೆಲ್ಲಲಿದೆ ಎಂದಿದ್ದಾರೆ. ಹಾಗಿದ್ರೆ ಸೆಹ್ವಾಗ್ ಅವರ ಟಿ20 ವಿಶ್ವಕಪ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರಿಗೆಲ್ಲಾ ಸ್ಥಾನ ನೀಡಲಾಗಿದೆ ನೋಡೋಣ.

ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಲ್. ಅವರನ್ನು ಸೆಹ್ವಾಗ್ ಟಿ20 ವಿಶ್ವಕಪ್​ ಪ್ಲೇಯಿಂಗ್​ನಲ್ಲಿ ಆಯ್ಕೆ ಮಾಡಿಕೊಂಡಿದ್ದಾರೆ.

ಅಕ್ಟೋಬರ್‌ 17ರಿಂದ ನವೆಂಬರ್‌ 14ರವರೆಗೆ ಟಿ20 ವಿಶ್ವಕಪ್ ನಡೆಯಲಿದ್ದು, ಭಾರತವು ಸೂಪರ್ 12 ರ ಗ್ರೂಪ್ 2 ರಲ್ಲಿ ಸ್ಥಾನ ಪಡೆದಿದೆ. ಅದರಂತೆ ಟೀಮ್ ಇಂಡಿಯಾ ಪಾಕಿಸ್ತಾನ, ನ್ಯೂಜಿಲೆಂಡ್, ಅಫ್ಘಾನಿಸ್ತಾನ ಮತ್ತು ಅರ್ಹತಾ ಸುತ್ತಿನಿಂದ ಆಯ್ಕೆಯಾದ ಎರಡು ಕ್ವಾಲಿಫಯರ್​ ತಂಡಗಳನ್ನು ಎದುರಿಸಲಿದೆ. ಇನ್ನು ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾಗಳು ಗ್ರೂಪ್ 1 ರಲ್ಲಿದೆ.

ಗುಂಪು 1: ವೆಸ್ಟ್ ಇಂಡೀಸ್, ಇಂಗ್ಲೆಂಡ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಅರ್ಹತಾ ಸುತ್ತಿನಿಂದ ಆಯ್ಕೆಯಾದ ಗ್ರೂಪ್ ಎ ವಿನ್ನರ್ , ಗ್ರೂಪ್ ಬಿ ರನ್ನರ್ ತಂಡಗಳು.

ಗುಂಪು 2: ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಅರ್ಹತಾ ಸುತ್ತಿನಿಂದ ಆಯ್ಕೆಯಾದ ವಿನ್ನರ್ ಗ್ರೂಪ್ ಬಿ, ರನ್ನರ್ ಅಪ್ ಗ್ರೂಪ್ ಎ ತಂಡಗಳು.

ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್​..!

ಇದನ್ನೂ ಓದಿ: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ

(Virender Sehwag name India’s Playing XI for T20 World Cup 2021)

Published On - 8:13 pm, Wed, 28 July 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ