Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ರಾರ್ ಅಹ್ಮದ್ ಸೆಲೆಬ್ರೇಷನ್​ನಲ್ಲಿ ತಪ್ಪೇನಿದೆ? ವೀರೇಂದ್ರ ಸೆಹ್ವಾಗ್ ಬೆಂಬಲ

India vs Pakistan: ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 241 ರನ್​ ಕಲೆಹಾಕಿದರೆ, ಭಾರತ ತಂಡವು ಈ ಗುರಿಯನ್ನು ಕೇವಲ 42.3 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಗೆಲುವು ದಾಖಲಿಸಿದ್ದರು. ಈ ಪಂದ್ಯದಲ್ಲಿ ಗಿಲ್ ಅವರನ್ನು ಔಟ್ ಅಬ್ರಾರ್ ಅಹ್ಮದ್ ವಿಚಿತ್ರವಾಗಿ ಸಂಭ್ರಮಿಸಿದ್ದರು.

ಅಬ್ರಾರ್ ಅಹ್ಮದ್ ಸೆಲೆಬ್ರೇಷನ್​ನಲ್ಲಿ ತಪ್ಪೇನಿದೆ? ವೀರೇಂದ್ರ ಸೆಹ್ವಾಗ್ ಬೆಂಬಲ
Sehwag - Abrar
Follow us
ಝಾಹಿರ್ ಯೂಸುಫ್
|

Updated on: Mar 11, 2025 | 2:53 PM

ಭಾರತ ಮತ್ತು ಪಾಕಿಸ್ತಾನ್ ನಡುವಣ ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳೆ ಸಖತ್ ಸುದ್ದಿಯಾಗಿದ್ದು ಯುವ ಸ್ಪಿನ್ನರ್ ಅಬ್ರಾರ್ ಅಹ್ಮದ್. ಅದು ಸಹ ತನ್ನ ವಿಚಿತ್ರ ಶೈಲಿಯ ಸೆಲೆಬ್ರೇಷನ್​ನೊಂದಿಗೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ 2ನೇ ಇನಿಂಗ್ಸ್​ನ 17ನೇ ಓವರ್​ನ 3ನೇ ಎಸೆತದಲ್ಲಿ ಶುಭ್​ಮನ್ ಗಿಲ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿ ಅಬ್ರಾರ್ ಅಹ್ಮದ್ ಕಣ್ ಸನ್ನೆಯ ಮೂಲಕ ನಡಿ ಎಂದಿದ್ದರು.

ಪಾಕಿಸ್ತಾನ್ ಸ್ಪಿನ್ನರ್​ನ ಈ ವಿಚಿತ್ರ ಸೆಲೆಬ್ರೇಷನ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಅಲ್ಲದೆ ಇದರಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಅಬ್ರಾರ್ ಅಹ್ಮದ್ ಕೂಡ ಹೇಳಿದ್ದರು.

ಈ ವಿಚಾರ ಚರ್ಚೆಗೀಡಾಗುತ್ತಿದ್ದಂತೆ ಅಬ್ರಾರ್ ಅಹ್ಮದ್ ಅವರ ಸೆಲೆಬ್ರೇಷನ್​ನಲ್ಲಿ ಏನು ತಪ್ಪಿದೆ ಎಂದು ಪ್ರಶ್ನಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್. ಚಾನೆಲ್​ ಚರ್ಚೆಯೊಂದರಲ್ಲಿ ಕಾಣಿಸಿಕೊಂಡ ಸೆಹ್ವಾಗ್​ಗೆ ಪಾಕ್ ಸ್ಪಿನ್ನರ್​ನ ವಿಚಿತ್ರ ಸಂಭ್ರಮದ ಬಗ್ಗೆ ಕೇಳಲಾಯಿತು.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಈ ವೇಳೆ ಮಾತನಾಡಿದ ಸೆಹ್ವಾಗ್, ನಿಜ ಹೇಳಬೇಕೆಂದರೆ ಅಬ್ರಾರ್ ಅತ್ಯುತ್ತಮ ಎಸೆತದ ಮೂಲಕ ಶುಭ್​ಮನ್ ಗಿಲ್ ಅವರನ್ನು ಔಟ್ ಮಾಡಿದ್ದರು. ಅದನ್ನು ನೀವು ಹೇಗೆ ಬೇಕಿದ್ದರೂ ಸಂಭ್ರಮಿಸಬಹುದು.

ಆತ ಯಾರಿಗೂ ಕೆಟ್ಟದಾಗಿ ಬೈದಿಲ್ಲ. ಏನನ್ನೂ ಸಹ ಹೇಳಿಲ್ಲ. ಆತ ಕಣ್ಸನ್ನೆ ಮೂಲಕ ಸೂಚನೆ ನೀಡಿದ್ದ. ಮುಂದಿನ ಪಂದ್ಯದಲ್ಲಿ ಬ್ಯಾಟ್ಸ್​ಮನ್ ಸಿಕ್ಸ್ ಸಿಡಿಸಿದ ಅದೇ ರೀತಿ ಸೂಚನೆ ನೀಡಬಹುದು ಅಷ್ಟೇ. ಇದರಲ್ಲಿ ತಪ್ಪೇನಿಲ್ಲ ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ಈ ಮೂಲಕ ಅಬ್ರಾರ್ ಅಹ್ಮದ್ ಅವರ ಕಣ್ಸನ್ನೆಯ ಸಂಭ್ರಮಕ್ಕೆ ವೀರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಯಾರನ್ನೂ ಬೈಯ್ಯದೇ, ಏನನ್ನೂ ಹೇಳದೇ ಈ ರೀತಿಯಾಗಿ ಸಂಭ್ರಮಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಇಂತಹ ಸೆಲೆಬ್ರೇಷನ್​ಗೆ ಬ್ಯಾಟ್ ಮೂಲಕ ಉತ್ತರ ನೀಡಿ ಬ್ಯಾಟ್ಸ್​ಮನ್ ಕೂಡ ಅದೇ ಶೈಲಿಯಲ್ಲಿ ಪ್ರತ್ಯುತ್ತರ ನೀಡಬಹುದು ಎಂದು ಸೆಹ್ವಾಗ್ ಹೇಳಿದ್ದಾರೆ.

ಇದನ್ನೂ ಓದಿ: ಯುಜ್ವೇಂದ್ರ ಚಹಲ್ ಲವ್ವಿ ಡವ್ವಿ: ಪತಿಯ ಫೋಟೋ ಮತ್ತೆ ಹಂಚಿಕೊಂಡ ಧನಶ್ರೀ ವರ್ಮಾ

ಇನ್ನು ಈ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ತಂಡ ಸೋತರೂ, ಅಬ್ರಾರ್ ಅಹ್ಮದ್  10 ಓವರ್​ಗಳಲ್ಲಿ ಕೇವಲ 28 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು. ಅಬ್ರಾರ್ ಅವರ ಈ ಭರ್ಜರಿ ಪ್ರದರ್ಶನಕ್ಕೆ ವಿರಾಟ್ ಕೊಹ್ಲಿ ಶ್ಲಾಘನೆ ವ್ಯಕ್ತಪಡಿಸಿದ್ದರು. ಅಲ್ಲದೆ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದೀಯಾ ಎಂದು ಅಭಿನಂದಿಸಿದ್ದರು.

ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ