AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virender Sehwag: ಟೀಮ್ ಇಂಡಿಯಾಗೆ ಈ ಮೂವರು ಯುವ ವೇಗಿಗಳನ್ನು ಆಯ್ಕೆ ಮಾಡಲೇಬೇಕು..!

India vs South Africa: ಐಪಿಎಲ್ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ20 ಸರಣಿಗೆ ಆತಿಥ್ಯ ವಹಿಸಲಿದೆ. ಸರಣಿಯ ಮೊದಲ ಟಿ20 ಪಂದ್ಯ ಜೂನ್ 9 ರಂದು ನಡೆಯಲಿದೆ.

Virender Sehwag: ಟೀಮ್ ಇಂಡಿಯಾಗೆ ಈ ಮೂವರು ಯುವ ವೇಗಿಗಳನ್ನು ಆಯ್ಕೆ ಮಾಡಲೇಬೇಕು..!
Virender Sehwag
TV9 Web
| Edited By: |

Updated on: May 01, 2022 | 4:15 PM

Share

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (IPL 2022) ಅನೇಕ ಯುವ ಭಾರತೀಯ ಬೌಲರ್‌ಗಳು ತಮ್ಮ ಅದ್ಭುತ ಬೌಲಿಂಗ್‌ನಿಂದ ಗಮನ ಸೆಳೆದಿದ್ದಾರೆ. ಇವರಲ್ಲಿ ಯುವ ವೇಗಿ ಉಮ್ರಾನ್ ಮಲಿಕ್ (Umran Malik) ಅಗ್ರಸ್ಥಾನದಲ್ಲಿದ್ದಾರೆ. ಎಸ್​ಆರ್​ಹೆಚ್ (SRH)​ ಪರ ಆಡುತ್ತಿರುವ ಜಮ್ಮು-ಕಾಶ್ಮೀರದ ಯುವ ವೇಗದ ಅಸ್ತ್ರ ಪ್ರಮುಖ ಆಟಗಾರರನ್ನೇ ತನ್ನ ವೇಗದಿಂದಲೇ ಕಂಗೆಡಿಸಿದ್ದಾರೆ. ಇನ್ನು ಪಂಜಾಬ್ ಕಿಂಗ್ಸ್ ತಂಡದಲ್ಲಿ ಆಡುತ್ತಿರುವ ಯುವ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕೂಡ ಅತ್ಯುತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಹೀಗಾಗಿಯೇ ಅದ್ಭುತ ಪ್ರದರ್ಶನ ನೀಡುತ್ತಿರುವ ಯುವ ಬೌಲರ್​ಗಳಿಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ನೀಡಬೇಕೆಂದು ಖ್ಯಾತ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಟಿ20 ಸರಣಿಯಲ್ಲಿ ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್ ಜೊತೆಗೆ ಅವೇಶ್ ಖಾನ್ ಅವರನ್ನು ಟೀಮ್​ ಇಂಡಿಯಾಗೆ ಆಯ್ಕೆ ಮಾಡಬೇಕು ಎಂದು ಅನುಭವಿ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ವೇಳೆ ಪ್ರಮುಖ ವೇಗದ ಬೌಲರ್‌ಗಳಿಗೆ ವಿಶ್ರಾಂತಿ ನೀಡುವುದು ಉತ್ತಮ ಎಂದು ಸಲಹೆ ನೀಡಿರುವ ಸೆಹ್ವಾಗ್, ಅವರ ಬದಲಿಗೆ ಅದ್ಭುತ ಫಾರ್ಮ್​ನಲ್ಲಿರುವ ಈ ವೇಗಿಗಳನ್ನು ಆಯ್ಕೆ ಮಾಡಬೇಕೆಂದು ತಿಳಿಸಿದ್ದಾರೆ.

ಏಕೆಂದರೆ ಮುಂಬರುವ ಟೀಮ್ ಇಂಡಿಯಾದ ವೇಳಾಪಟ್ಟಿ ತುಂಬಾ ಬ್ಯುಸಿಯಾಗಿದೆ. ಹೀಗಾಗಿ ತಂಡದಲ್ಲಿರುವ ಪ್ರಮುಖ ಬೌಲರ್​ಗಳಿಗೆ ವಿಶ್ರಾಂತಿ ನೀಡುವ ಮೂಲಕ ಹೊಸ ಆಟಗಾರರಿಗೆ ಅವಕಾಶ ಕಲ್ಪಿಸಬೇಕೆಂದು ವೀರೇಂದ್ರ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ. ಎಲ್ಲರೂ ಟಿ20 ವಿಶ್ವಕಪ್​ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ನನ್ನ ಪ್ರಕಾರ ಯುವ ಬೌಲರ್​ಗಳಿಗೆ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯ ವೇಳೆಯೇ ಅವಕಾಶ ಸಿಗಬೇಕೆಂದು ನಾನು ಬಯಸುತ್ತೇನೆ ಎಂದು ಸೆಹ್ವಾಗ್ ಹೇಳಿದ್ದಾರೆ.

ಈಗಾಗಲೇ ಐಪಿಎಲ್​ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಈ ಬೌಲರ್​ಗಳು ಅಂತರರಾಷ್ಟ್ರೀಯ ತಂಡದ ವಿರುದ್ಧ ಅವರು ಹೇಗೆ ಬೌಲಿಂಗ್ ಮಾಡುತ್ತಾರೆ ಎಂಬುದರ ಸ್ಪಷ್ಟತೆ ಸಿಗಲಿದೆ. ಅಲ್ಲದೆ ಅವರು ಸಹ ಸ್ವಲ್ಪ ಅನುಭವವನ್ನೂ ಪಡೆಯುತ್ತಾರೆ. ಹೀಗಾಗಿ ನನ್ನ ಪ್ರಕಾರ ಉಮ್ರಾನ್ ಮಲಿಕ್, ಅವೇಶ್ ಖಾನ್ ಹಾಗೂ ಅರ್ಷದೀಪ್ ಸಿಂಗ್​ಗೆ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಅವಕಾಶ ನೀಡಲೇಬೇಕು ಎಂದು ಸೆಹ್ವಾಗ್ ತಿಳಿಸಿದ್ದಾರೆ.

ಐಪಿಎಲ್ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ20 ಸರಣಿಗೆ ಆತಿಥ್ಯ ವಹಿಸಲಿದೆ. ಸರಣಿಯ ಮೊದಲ ಟಿ20 ಪಂದ್ಯ ಜೂನ್ 9 ರಂದು ನಡೆಯಲಿದೆ. ಈ ಸರಣಿಯಲ್ಲಿ ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್ ತಂಡಕ್ಕೆ ಸೇರ್ಪಡೆಯಾಗಬೇಕು. ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ಉಮ್ರಾನ್ ಮಲಿಕ್ ಈ ಸೀಸನ್​ನಲ್ಲಿ ಇದುವರೆಗೆ 15 ವಿಕೆಟ್ ಪಡೆದಿದ್ದಾರೆ. ಮತ್ತೊಂದೆಡೆ, ಅರ್ಷದೀಪ್ ಸಿಂಗ್ ಡೆತ್ ಓವರ್‌ಗಳಲ್ಲಿ ತಮ್ಮ ಬೌಲಿಂಗ್ ಎಕಾನಮಿಯೊಂದಿಗೆ ಛಾಪು ಮೂಡಿಸಿದ್ದಾರೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ಪರ ಅವೇಶ್ ಖಾನ್ ವಿಕೆಟ್ ಟೇಕರ್ ಆಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ಸರಣಿಗೆ ಈ ಮೂವರನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡಬೇಕೆಂದು ವೀರೇಂದ್ರ ಸೆಹ್ವಾಗ್ ತಿಳಿಸಿದ್ದಾರೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!