ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (IPL 2022) ಅನೇಕ ಯುವ ಭಾರತೀಯ ಬೌಲರ್‌ಗಳು ತಮ್ಮ ಅದ್ಭುತ ಬೌಲಿಂಗ್‌ನಿಂದ ಗಮನ ಸೆಳೆದಿದ್ದಾರೆ. ಇವರಲ್ಲಿ ಯುವ ವೇಗಿ ಉಮ್ರಾನ್ ಮಲಿಕ್ (Umran Malik) ಅಗ್ರಸ್ಥಾನದಲ್ಲಿದ್ದಾರೆ. ಎಸ್ಆರ್ಹೆಚ್ (SRH) ಪರ ಆಡುತ್ತಿರುವ ಜಮ್ಮು-ಕಾಶ್ಮೀರದ ಯುವ ವೇಗದ ಅಸ್ತ್ರ ಪ್ರಮುಖ ಆಟಗಾರರನ್ನೇ ತನ್ನ ವೇಗದಿಂದಲೇ ಕಂಗೆಡಿಸಿದ್ದಾರೆ. ಇನ್ನು ಪಂಜಾಬ್ ಕಿಂಗ್ಸ್ ತಂಡದಲ್ಲಿ ಆಡುತ್ತಿರುವ ಯುವ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕೂಡ ಅತ್ಯುತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಹೀಗಾಗಿಯೇ ಅದ್ಭುತ ಪ್ರದರ್ಶನ ನೀಡುತ್ತಿರುವ ಯುವ ಬೌಲರ್‌ಗಳಿಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ನೀಡಬೇಕೆಂದು ಖ್ಯಾತ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.
ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಟಿ20 ಸರಣಿಯಲ್ಲಿ ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್ ಜೊತೆಗೆ ಅವೇಶ್ ಖಾನ್ ಅವರನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡಬೇಕು ಎಂದು ಅನುಭವಿ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ವೇಳೆ ಪ್ರಮುಖ ವೇಗದ ಬೌಲರ್‌ಗಳಿಗೆ ವಿಶ್ರಾಂತಿ ನೀಡುವುದು ಉತ್ತಮ ಎಂದು ಸಲಹೆ ನೀಡಿರುವ ಸೆಹ್ವಾಗ್, ಅವರ ಬದಲಿಗೆ ಅದ್ಭುತ ಫಾರ್ಮ್ನಲ್ಲಿರುವ ಈ ವೇಗಿಗಳನ್ನು ಆಯ್ಕೆ ಮಾಡಬೇಕೆಂದು ತಿಳಿಸಿದ್ದಾರೆ.
ಏಕೆಂದರೆ ಮುಂಬರುವ ಟೀಮ್ ಇಂಡಿಯಾದ ವೇಳಾಪಟ್ಟಿ ತುಂಬಾ ಬ್ಯುಸಿಯಾಗಿದೆ. ಹೀಗಾಗಿ ತಂಡದಲ್ಲಿರುವ ಪ್ರಮುಖ ಬೌಲರ್‌ಗಳಿಗೆ ವಿಶ್ರಾಂತಿ ನೀಡುವ ಮೂಲಕ ಹೊಸ ಆಟಗಾರರಿಗೆ ಅವಕಾಶ ಕಲ್ಪಿಸಬೇಕೆಂದು ವೀರೇಂದ್ರ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ. ಎಲ್ಲರೂ ಟಿ20 ವಿಶ್ವಕಪ್ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ನನ್ನ ಪ್ರಕಾರ ಯುವ ಬೌಲರ್‌ಗಳಿಗೆ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯ ವೇಳೆಯೇ ಅವಕಾಶ ಸಿಗಬೇಕೆಂದು ನಾನು ಬಯಸುತ್ತೇನೆ ಎಂದು ಸೆಹ್ವಾಗ್ ಹೇಳಿದ್ದಾರೆ.
ಈಗಾಗಲೇ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಈ ಬೌಲರ್‌ಗಳು ಅಂತರರಾಷ್ಟ್ರೀಯ ತಂಡದ ವಿರುದ್ಧ ಅವರು ಹೇಗೆ ಬೌಲಿಂಗ್ ಮಾಡುತ್ತಾರೆ ಎಂಬುದರ ಸ್ಪಷ್ಟತೆ ಸಿಗಲಿದೆ. ಅಲ್ಲದೆ ಅವರು ಸಹ ಸ್ವಲ್ಪ ಅನುಭವವನ್ನೂ ಪಡೆಯುತ್ತಾರೆ. ಹೀಗಾಗಿ ನನ್ನ ಪ್ರಕಾರ ಉಮ್ರಾನ್ ಮಲಿಕ್, ಅವೇಶ್ ಖಾನ್ ಹಾಗೂ ಅರ್ಷದೀಪ್ ಸಿಂಗ್ಗೆ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಅವಕಾಶ ನೀಡಲೇಬೇಕು ಎಂದು ಸೆಹ್ವಾಗ್ ತಿಳಿಸಿದ್ದಾರೆ.
ಐಪಿಎಲ್ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ20 ಸರಣಿಗೆ ಆತಿಥ್ಯ ವಹಿಸಲಿದೆ. ಸರಣಿಯ ಮೊದಲ ಟಿ20 ಪಂದ್ಯ ಜೂನ್ 9 ರಂದು ನಡೆಯಲಿದೆ. ಈ ಸರಣಿಯಲ್ಲಿ ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್ ತಂಡಕ್ಕೆ ಸೇರ್ಪಡೆಯಾಗಬೇಕು. ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ಉಮ್ರಾನ್ ಮಲಿಕ್ ಈ ಸೀಸನ್ನಲ್ಲಿ ಇದುವರೆಗೆ 15 ವಿಕೆಟ್ ಪಡೆದಿದ್ದಾರೆ. ಮತ್ತೊಂದೆಡೆ, ಅರ್ಷದೀಪ್ ಸಿಂಗ್ ಡೆತ್ ಓವರ್‌ಗಳಲ್ಲಿ ತಮ್ಮ ಬೌಲಿಂಗ್ ಎಕಾನಮಿಯೊಂದಿಗೆ ಛಾಪು ಮೂಡಿಸಿದ್ದಾರೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ಪರ ಅವೇಶ್ ಖಾನ್ ವಿಕೆಟ್ ಟೇಕರ್ ಆಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ಸರಣಿಗೆ ಈ ಮೂವರನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡಬೇಕೆಂದು ವೀರೇಂದ್ರ ಸೆಹ್ವಾಗ್ ತಿಳಿಸಿದ್ದಾರೆ.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.